ಚೀನಾಗೆ ಮೋದಿ ಸರ್ಕಾರದಿಂದ ಕ್ಲೀನ್ ಚಿಟ್ ನೀಡಿಕೆ ರಾಷ್ಟ್ರೀಯ ಭದ್ರತೆಗೆ ದೊಡ್ಡ ಪೆಟ್ಟು: ಖರ್ಗೆ ಕಿಡಿ

Date:

Advertisements

ಮೋದೀಜಿ ಅವರು ಗಲ್ವಾನ್ ವಿಚಾರದಲ್ಲಿ ಚೀನಾಗೆ ನೀಡಿದ ʼಕ್ಲೀನ್ ಚಿಟ್ʼನಿಂದಾಗಿ ಚೀನಾ ತನ್ನ ದುರುದ್ದೇಶಿತ ಕಾರ್ಯಗಳನ್ನು ಸಾಧಿಸುತ್ತಿದೆ. ಇದು ನಮ್ಮ ರಾಷ್ಟ್ರೀಯ ಭದ್ರತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ದೊಡ್ಡ ಪೆಟ್ಟು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಕೃತಜ್ಞ ರಾಷ್ಟ್ರವು ಗಲ್ವಾನ್ ಕಣಿವೆಯಲ್ಲಿ ಮೂರು ವರ್ಷಗಳಲ್ಲಿ ಪ್ರಾಣ ತೆತ್ತು ಹುತಾತ್ಮರಾದ 20 ಶೌರ್ಯವಂತರಿಗೆ ತನ್ನ ಶ್ರದ್ಧಾಂಜಲಿ ಸಲ್ಲಿಸುತ್ತದೆ. ವಾಸ್ತವಿಕ ಗಡಿ ನಿಯಂತ್ರಣ ರೇಖೆಯಲ್ಲಿ ಸಂಘರ್ಷ ಪೂರ್ವ ಯಥಾಸ್ಥಿತಿ ಕಾಪಾಡದೇ ಇರುವುದಕ್ಕೆ ಮೋದಿ ಸರ್ಕಾರ ಜವಾಬ್ದಾರಿ. ನಾವು ಇಲ್ಲಿ 65 ಪೆಟ್ರೋಲಿಂಗ್ ಕೇಂದ್ರಗಳಲ್ಲಿ 26 ಕೇಂದ್ರಗಳನ್ನು ಕಳೆದುಕೊಂಡಿದ್ದೇವೆ” ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

“ಮೋದಿ ಸರ್ಕಾರದ ಕೆಂಪು ಕಣ್ಣು ಮಂಜಾಗಿದೆ. ಅದರ ಮೇಲೆ ಅದು ಟಿಂಟೆಡ್ ಚೀನೀ ಗ್ಲಾಸ್ ಧರಿಸುತ್ತಿದೆ! ಜವಾಬ್ದಾರಿಯುತ ವಿಪಕ್ಷವಾಗಿ ಚೀನಾದ ವಿಸ್ತರಣಾ ನೀತಿಯ ವಿರುದ್ಧವಾಗಿ ದೇಶವನ್ನು ಒಗ್ಗಟ್ಟಾಗಿ ಇರಿಸುವುದು ಹಾಗೂ ಮೋದಿ ಸರ್ಕಾರಕ್ಕೆ ಸತ್ಯದ ಕನ್ನಡಿ ತೋರಿಸುವುದು ನಮ್ಮ ಕರ್ತವ್ಯವಾಗಿದೆ” ಎಂದು ಖರ್ಗೆ ಹೇಳಿದ್ದಾರೆ.  

Advertisements

ಈ ಸುದ್ದಿ ಓದಿದ್ದೀರಾ? ಪಠ್ಯಪುಸ್ತಕದಿಂದ ತಮ್ಮ ಹೆಸರನ್ನು ಕೈಬಿಡುವಂತೆ ಎನ್‌ಸಿಇಆರ್‌ಟಿಗೆ ದೇಶದ ಪ್ರತಿಷ್ಠಿತ 33 ವಿವಿ ಪ್ರಾಧ್ಯಾಪಕರ ಪತ್ರ  

2020 ರಲ್ಲಿ ಅರುಣಾಚಲ ಪ್ರದೇಶದ ಗಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರೊಂದಿಗಿನ ಸಂಘರ್ಷದಲ್ಲಿ ಬಲಿಯಾದ 20 ಭಾರತೀಯ ಸೈನಿಕರಿಗೆ ಇಂದು (ಜೂನ್‌ 15) ಶ್ರದ್ಧಾಂಜಲಿ ಸಲ್ಲಿಸಿತು. ಅಲ್ಲದೆ ವಾಸ್ತವಿಕ ಗಡಿ ನಿಯಂತ್ರಣ ರೇಖೆಯಲ್ಲಿ ಈ ಸಂಘರ್ಷಕ್ಕಿಂತ ಮೊದಲು ಇದ್ದ ಯಥಾಸ್ಥಿತಿಯನ್ನು ಕಾಪಾಡಲು ವಿಫಲವಾದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X