ಕೇರಳ | ಅಭ್ಯರ್ಥಿ ಇಲ್ಲದೆಯೇ ಮೋದಿ ರೋಡ್‌ಶೋ; ‘ನನ್ನ ಕರೆದಿಲ್ಲ’ ಎಂದ ಸಲಾಮ್!

Date:

ಈ ವರ್ಷದ ಮೂರು ತಿಂಗಳಲ್ಲೇ ಐದನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಕೇರಳಕ್ಕೆ ಭೇಟಿ ನೀಡಿದ್ದಾರೆ. ಮಂಗಳವಾರ ಕೇರಳದ ಪಾಲಕ್ಕಾಡ್‌ನಲ್ಲಿ ಮೋದಿ ಮುಂದಿನ ಲೋಕಸಭೆ ಚುನಾವಣೆಯ ರೋಡ್‌ಶೋ ನಡೆಸಿದ್ದಾರೆ. ಆದರೆ ಅಭ್ಯರ್ಥಿ ಇಲ್ಲದೆಯೇ ರೋಡ್‌ಶೋ ನಡೆಸಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

- Advertisement -

ಪ್ರಧಾನಿ ಮೋದಿ ಚಾಪರ್ ಮೂಲಕ ಪಾಲಕ್ಕಾಡ್‌ಗೆ ತಲುಪಿದ್ದು, ಅರ್ಧ ಗಂಟೆಗಳ ಕಾಲ ಬಿಜೆಪಿ ಕಾರ್ಯಕರ್ತರೊಂದಿಗೆ ರೋಡ್‌ಶೋ ನಡೆಸಿದ್ದಾರೆ. ಪಾಲಕ್ಕಾಡ್‌ನ ಬಿಜೆಪಿ ಅಭ್ಯರ್ಥಿಯಾದ ಸಿ ಕೃಷ್ಣಕುಮಾರ್, ಪೊನ್ನಾನಿ ಅಭ್ಯರ್ಥಿ ನಿವೇದಿತಾ ಸುಬ್ರಮನಿಯನ್, ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಕೂಡ ರೋಡ್‌ಶೋನಲ್ಲಿ ಭಾಗಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಇದನ್ನು ಓದಿದ್ದೀರಾ?  ಜಾತ್ಯತೀತತೆ ಭಾರತದ ಆತ್ಮ, ಒಂದು ಧರ್ಮದ ಪ್ರಚಾರ ಸಲ್ಲ: ಕೇರಳ ಸಿಎಂ

ಆದರೆ ರೋಡ್‌ಶೋ ಈಗ ವಿವಾದಕ್ಕೆ ಕಾರಣವಾಗಿದೆ. ಅದಕ್ಕೆ ಕಾರಣ ಬಿಜೆಪಿ ಮುಸ್ಲಿಂ ಅಭ್ಯರ್ಥಿಗೆ ಆಮಂತ್ರಣವೇ ನೀಡದೆ ಇರುವುದು! ಬಿಜೆಪಿ ಎನ್‌ಡಿಎಯ ಮುಸ್ಲಿಂ ಅಭ್ಯರ್ಥಿಯನ್ನು ಈ ರೋಡ್‌ಶೋಗೆ ಆಮಂತ್ರಿಸಿಲ್ಲ ಎಂದು ಎಲ್‌ಡಿಎಫ್‌ ಆರೋಪಿಸಿದೆ.

ಬಿಜೆಪಿಯ ಮಲ್ಲಪ್ಪುರಂ ಅಭ್ಯರ್ಥಿ ಎಂ ಅಬ್ದುಲ್ ಸಲಾಮ್ ರೋಡ್‌ಶೋನಲ್ಲಿ ಕಾಣಿಸಿಕೊಳ್ಳದ ವಿಚಾರದಲ್ಲಿ ಸಿಪಿಐಎಂ ಕೇಂದ್ರ ಸಮಿತಿ ಸದಸ್ಯ ಎ ಕೆ ಬಾಲನ್ ಬಿಜೆಪಿಯನ್ನು ಟೀಕಿಸಿದ್ದಾರೆ. ಮುಸ್ಲಿಂ ಎಂಬ ಕಾರಣಕ್ಕೆ “ಅಬ್ದುಲ್ ಸಲಾಮ್‌ರಿಗೆ ಈ ರೋಡ್‌ಶೋಗೆ ಆಮಂತ್ರಣವೇ ನೀಡಿಲ್ಲ” ಎಂದು ಆರೋಪಿಸಿದ್ದಾರೆ.

ಆದರೆ ಅಭ್ಯರ್ಥಿ ಸಲಾಮ್ ಮಾತ್ರ ಇಲ್ಲಿ ಯಾವುದೇ ತಾರಮತ್ಯವಿಲ್ಲ ಎಂದಿದ್ದಾರೆ. “ನಾನು ಮೋದಿಯನ್ನು ಭೇಟಿಯಾಗಲು ಪಾಲಕ್ಕಾಡ್‌ಗೆ ಹೋದೆ. ಮಲ್ಲಪ್ಪುರಂನಲ್ಲಿ ಚುನಾವಣಾ ಪ್ರಚಾರಕ್ಕೆ ಮೋದಿ ಅವರನ್ನು ಆಮಂತ್ರಿಸಿದೆ. ರೋಡ್‌ಶೋನಲ್ಲಿ ಭಾಗಿಯಾಗುವ ಆಸೆ ನನಗಿತ್ತು. ಆದರೆ ನನಗೆ ಆಮಂತ್ರಣವನ್ನು ನೀಡಲಾಗಿಲ್ಲ. ಇತರೆ ಇಬ್ಬರು ಅಭ್ಯರ್ಥಿಗಳನ್ನು ಆಮಂತ್ರಿಸಲಾಗಿದೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಎಐ ಸೃಷ್ಟಿಸುವ ಕೃತಕ ಪ್ರೋಟೀನ್‌ಗಳಿಗೆ ಗೂಗಲ್‌ನಿಂದ ‘ಡಿಜಿಟಲ್ ಮುದ್ರೆ’: ಜೈವಿಕ ಅಪಾಯ ತಡೆಯಲು ಹೊಸ ಅಸ್ತ್ರ

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಲ್ಯಾಬ್‌‌ಗಳಲ್ಲಿ ಹೊಸ ಬಗೆಯ ಪ್ರೋಟೀನ್‌ಗಳನ್ನು...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...