ಮೋದಿಯವರದ್ದು ಅತ್ಯಾಚಾರಿಗಳ ಪರಿವಾರ: ಮಹಿಳಾ ಕಾಂಗ್ರೆಸ್‌ ಪ್ರತಿಭಟನೆ

Date:

“ಪ್ರಧಾನಿ ನರೇಂದ್ರ ಮೋದಿಯವರದ್ದು ಅತ್ಯಾಚಾರಿಗಳ ಪರಿವಾರ. ಬಿಜೆಪಿ ಅಂದರೆ ಬಲಾತ್ಕಾರಿ ಜನತಾ ಪಾರ್ಟಿ” ಎಂದು ಆರೋಪಿಸಿ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಅಲ್ಕಾ ಲಂಬಾ ಅವರ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತೆಯರು, “ನೂರಾರು ಮಹಿಳೆಯರನ್ನು ದುರುಪಯೋಗ ಮಾಡಿಕೊಂಡು, ಅತ್ಯಾಚಾರ ಎಸಗಿರುವ ಪ್ರಜ್ವಲ್ ರೇವಣ್ಣನ ಬಗ್ಗೆ ಬಿಜೆಪಿ ನಾಯಕರಿಗೆ ಮೊದಲೇ ಗೊತ್ತಿತ್ತು. ಸ್ಥಳೀಯ ಬಿಜೆಪಿ ನಾಯಕರು ಹೈಕಮಾಂಡ್‌ಗೆ ಪತ್ರವನ್ನೂ ಬರೆದಿದ್ದರು. ಎಲ್ಲ ಗೊತ್ತಿದ್ದೂ ಆತನನ್ನು ಮೈತ್ರಿ ಪಕ್ಷದ ಅಭ್ಯರ್ಥಿಯನ್ನಾಗಿ ಮಾಡಲಾಯಿತು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ವೇಳೆ ’ಈದಿನ.ಕಾಂ’ ಜೊತೆಯಲ್ಲಿ ಮಾತನಾಡಿದ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ್, “ಕೇಂದ್ರ ಸರ್ಕಾರದ ಜವಾಬ್ದಾರಿ ಏನು? ಮೋದಿಯವರು ವಿಶ್ವಗುರುಗಳಲ್ಲವೇ? ಅವರು ಒಂದೇ ಒಂದು ಫೋನ್ ಕಾಲ್‌ ಮಾಡಿದ್ರೆ ಇಲ್ಲಿಗೆ ಪ್ರಜ್ವಲ್‌ನನ್ನು ಕರೆತರಬಹುದು. ತಪ್ಪಿತಸ್ಥರನ್ನು ಸದೆಬಡಿಯಲು ಕಾನೂನುಗಳಿವೆ. ಪ್ರಜ್ವಲ್‌ ರೇವಣ್ಣ ಈ ಜಗತ್ತನ್ನು ಬಿಟ್ಟು ಹೋಗಿಲ್ಲ. ಈ ಪ್ರಪಂಚದಲ್ಲೇ ಇದ್ದಾರೆ. ಅವರು ತಪ್ಪಿಸಿಕೊಂಡು ಹೋಗಲು ಬಿಜೆಪಿ ಸರ್ಕಾರ ಮತ್ತು ಮೋದಿಯವರೇ ನೇರ ಕಾರಣ. ಎರಡು ಸಾವಿರ ಹೆಣ್ಣುಮಕ್ಕಳಿಗೆ ಅನ್ಯಾಯವಾಗಿದೆ. ಸಂತ್ರಸ್ತರ ಪರವಾಗಿ ಮೋದಿ ಇದ್ದಾರಾ? ಅತ್ಯಾಚಾರಿಗಳ ಪರ ಇದ್ದಾರಾ? ಮೋದಿ ಮತ್ತು ಬಿಜೆಪಿ ಸರ್ಕಾರ ಬಂದು ಉತ್ತರಿಸಲಿ” ಎಂದು ಆಗ್ರಹಿಸಿದರು.

“ಪ್ರಕರಣ ಕೆಲವು ತಿಂಗಳ ಹಿಂದೆಯೇ ಬೆಳಕಿಗೆ ಬಂದಿತ್ತು. ಆದರೆ ಸಾಕ್ಷಿಗಳ ಕೊರತೆಯಿಂದ ಪ್ರಕರಣ ದಾಖಲಿಸಲು ಸಾಧ್ಯವಾಗಿರಲಿಲ್ಲ. ಸಂತ್ರಸ್ತರು ಬಂದು ದೂರು ನೀಡಿದ ತಕ್ಷಣ ಪ್ರಕರಣ ದಾಖಲಾಗಿದೆ. ಇಡೀ ದೇಶದಲ್ಲಿ ನಡೆದಿರುವ ಅತಿ ದೊಡ್ಡ ಲೈಂಗಿಕ ಹಗರಣವಿದು” ಎಂದು ಅಭಿಪ್ರಾಯಪಟ್ಟರು.

“ಸಂತ್ರಸ್ತರ ಪರವಾಗಿ ಕಾಂಗ್ರೆಸ್ ನಿಲ್ಲುತ್ತದೆ. ನೀವು ಧೈರ್ಯವಾಗಿರಿ. ಯಾರೂ ತಮ್ಮ ಜೀವವನ್ನು ಕಳೆದುಕೊಳ್ಳುವ ಯೋಚನೆ ಮಾಡಬಾರದು. ಯಾವನೋ ಒಬ್ಬ ಪಾಪಿಷ್ಟನಿಂದ ನಿಮ್ಮ ಬದುಕಿಗೆ ತೊಂದರೆಯಾಗಿರಬಹುದು. ಆದರೆ ಇದೇ ಅಂತ್ಯವಲ್ಲ. ಬದುಕು ಸುಂದರವಾಗಿದೆ. ನಿಮ್ಮೊಂದಿಗೆ ಸದಾ ಈ ನಾಡಿನ ಸಮಸ್ತ ಜನರು ಜೊತೆಯಲ್ಲಿರುತ್ತೇವೆ” ಎಂದು ಧೈರ್ಯ ತುಂಬಿದರು.

ಕಾಂಗ್ರೆಸ್‌ ವಕ್ತಾರೆ ಭವ್ಯಾ ನರಸಿಂಹಮೂರ್ತಿ ಮಾತನಾಡಿ, “ಕುಮಾರಸ್ವಾಮಿಯವರು ಜೆಡಿಎಸ್‌ ರಾಜ್ಯಾಧ್ಯಕ್ಷರು. ಪ್ರಜ್ವಲ್ ರೇವಣ್ಣನಿಗೆ ಟಿಕೆಟ್ ಕೊಟ್ಟಿರುವುದು ಇದೇ ಕುಮಾರಸ್ವಾಮಿಯವರಲ್ಲವೇ? ಅಧ್ಯಕ್ಷರಾಗಿ ನೈತಿಕ ಜವಾಬ್ದಾರಿ ಹೊರಬೇಕು. ಪ್ರಜ್ವಲ್ ರೇವಣ್ಣನಿಗೂ ಜೆಡಿಎಸ್‌ಗೂ ಸಂಬಂಧವಿಲ್ಲ ಎನ್ನಲು ಸಾಧ್ಯವಿಲ್ಲ. ರಾಜ್ಯದ ಹೆಣ್ಣುಮಕ್ಕಳ ವಿಚಾರವಿದು. ಹೆಚ್ಚುಕಮ್ಮಿಯಾದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ” ಎಂದು ಎಚ್ಚರಿಸಿದರು.

ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಸುಮಾ ಮಹೇಂದರ್‌ ಮಾತನಾಡಿ, “ಎರಡು ಸಾವಿರ ತಗೊಂಡು, ಎಲ್ಲೆಲ್ಲೋ ಹೆಂಗಸರು ಹೋಗುತ್ತಿದ್ದಾರೆಂದು ಬಿಜೆಪಿಯ ನಾಯಕಿಯರು ನಾಲಗೆ ಹರಿಬಿಡುತ್ತಿದ್ದಾರೆ. ಈಗ ಬಿಜೆಪಿ ನಾಯಕಿಯರು ಸಂತ್ರಸ್ತ ಹೆಣ್ಣುಮಕ್ಕಳನ್ನು ಭೇಟಿ ಮಾಡಿ ವಿಚಾರಿಸಿದ್ದಾರಾ? ಇಲ್ಲ. ಕಂಡವರ ಹೆಣ್ಣುಮಕ್ಕಳನ್ನು ಹಾಳು ಮಾಡಲಾಗಿದೆ. ಇದಕ್ಕೆ ನ್ಯಾಯ ಇಲ್ಲವಾ?” ಎಂದು ಪ್ರಶ್ನಿಸಿದರು.

“ಪ್ರಜ್ವಲ್ ರೇವಣ್ಣನ ಪಾಸ್‌ಪೋರ್ಟ್ ಮುಟ್ಟುಗೋಲು ಹಾಕಿಕೊಳ್ಳದೆ ತಪ್ಪಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಆತ ಎಲ್ಲಿದ್ದರೂ ಬಂಧಿಸಲಾಗುವುದು. ನೇಹಾ ಎಂಬ ಹೆಣ್ಣುಮಗಳು ಕೊಲೆಯಾದಾಗ ರಾಜಕೀಯ ಮಾಡುತ್ತಾ ಕುಳಿತರು. ಈಗ ಏಕೆ ಸಂತ್ರಸ್ತ ಹೆಣ್ಣುಮಕ್ಕಳ ಪರ ಇವರು ಬರುತ್ತಿಲ್ಲ. ಬಿಜೆಪಿ ನಾಯಕರೇ ಏನು ಮಾಡುತ್ತಿದ್ದೀರಿ?” ಎಂದು ಪ್ರಶ್ನಿಸಿದರು.

ಲೈಂಗಿಕ ಪ್ರಕರಣಗಳಲ್ಲಿ ಸಿಲುಕಿರುವ ಬ್ರಿಜ್‌ ಭೂಷಣ್ ಶರಣ್‌ ಸಿಂಗ್‌, ಕುಲದೀಪ್ ಸಿಂಗ್ ಸೆಂಗಾರ್‌, ಸಂದೀಪ್ ಸಿಂಗ್ ಸೈನಿ, ಚಿನ್ಮಯಾನಂದ, ಪದ್ಮರಾಜನ್ ಕೆ, ರಾಮದುಲರ್‌ ಗೌರ್‌, ರಮೇಶ್ ಜಾರಕಿಹೊಳಿ ಅವರ ಫೋಟೋಗಳನ್ನು ಹೊಂದಿದ್ದ ’ಮೋದಿ ಕಾ ಪರಿವಾರ- ಬಲಾತ್ಕರಿ ಜನತಾ ಪಕ್ಷ’ ಎಂಬ ಪೋಸ್ಟರ್‌ಗಳನ್ನು ಮಹಿಳೆಯರು ಪ್ರದರ್ಶಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...