ಬಡವರ ಹಸಿವಿನ ವಿಚಾರದಲ್ಲೂ ಬಿಜೆಪಿ ರಾಜಕೀಯ: ಡಾ. ಜಿ ಪರಮೇಶ್ವರ್‌

Date:

  • ಅಕ್ಕಿ ಬದಲು ಹಣ ನೀಡಿ ಎಂದಿದ್ದ ಬಿಜೆಪಿಯೇ ಈಗ ವಿರೋಧಿಸುತ್ತಿದೆ
  • ಗೋದಾಮಿನಲ್ಲಿ ಅಕ್ಕಿ ಕೊಳೆಯುತ್ತಿದ್ದರೂ ಕೇಂದ್ರ ಕೊಡದೆ ಸತಾಯಿಸುತ್ತಿದೆ

ಬಕ್ರೀದ್ ಆಚರಣೆ ಹಿನ್ನೆಲೆ ತುಮಕೂರು ಜಿಲ್ಲೆ ಕೊರಟಗೆರೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಬಿಪಿಎಲ್‌ ಕುಟುಂಬಗಳಿಗೆ 5 ಕೆ.ಜಿ ಅಕ್ಕಿ ಬದಲು ಮೂರು ತಿಂಗಳು ಹಣ ನೀಡಲಾಗುವುದು. ಅಷ್ಟರಲ್ಲಿ ಅಕ್ಕಿ ಹೊಂದಿಸಿಕೊಂಡು ವಿತರಣೆ ಮಾಡಲಾಗುವುದು. ಅಕ್ಕಿ ಕೊಡದಿದ್ದರೆ ಹಣ ನೀಡಬೇಕು ಎಂದು ಬಿಜೆಪಿಯವರೇ ಒತ್ತಾಯಿಸಿದ್ದರು. ಆದರೆ ಈಗ ಹಣ ಕೊಟ್ಟರೆ ಅದಕ್ಕೂ ವಿರೋಧ ಮಾಡುತ್ತಿದ್ದಾರೆ. ಏನು ಮಾಡಿದರೂ ವಿರೋಧವನ್ನೇ ಮಾಡುತ್ತಾರೆ” ಎಂದು ಆರೋಪಿಸಿದ್ದಾರೆ.

“ಅಕ್ಕಿ ಬದಲು ಹಣ ಕೊಡುವುದಕ್ಕೆ ಕೆಲವರು ಮಾತ್ರ ವಿರೋಧ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅಕ್ಕಿ ಕೊಟ್ಟೆಕೊಡುತ್ತೇವೆ. ದೇಶದ ಗೋದಾಮುಗಳಲ್ಲಿ ಅಕ್ಕಿ ಕೊಳೆಯುತ್ತಿದ್ದು, ಹಣ ಕೊಟ್ಟರೂ ಕೇಂದ್ರ ಸರ್ಕಾರ ನೀಡುತ್ತಿಲ್ಲ. ರಾಜ್ಯದಲ್ಲಿರುವ ಭಾರತ ಆಹಾರ ನಿಗಮದ ಗೋದಾಮುಗಳಲ್ಲಿ 7 ಲಕ್ಷ ಟನ್ ಅಕ್ಕಿ ಇದೆ. ಅದನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿದ್ದಾರೆ. ನಮಗೆ ಕೊಡಲು ರಾಜಕಾರಣ ಮಾಡುತ್ತಿದ್ದಾರೆ” ಎಂದು ದೂರಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಅಕ್ಕಿ ನೀಡುವುದು ಪ್ರತಿಷ್ಠೆ ವಿಚಾರ ಆಗಬಾರದು. ಬಡವರ ಹಸಿವಿನ ಪ್ರಶ್ನೆಯಾಗಬೇಕು. ಪ್ರತಿಷ್ಠೆ ಮಾಡಿದರೆ ಬಡವರ ಹೊಟ್ಟೆ ತುಂಬುವುದಿಲ್ಲ. ಬಿಜೆಪಿಯವರು ಬಡವರ ಹಸಿವಿನ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ” ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಬಕ್ರೀದ್ | ದ್ವೇಷ ಹುಟ್ಟುಹಾಕುವ ಶಕ್ತಿಗಳಿಗೆ ಮಹತ್ವ ನೀಡಬಾರದು: ಸಿಎಂ ಸಿದ್ದರಾಮಯ್ಯ

ಬಕ್ರೀದ್ ಪವಿತ್ರವಾದ ಹಬ್ಬ

“ಇಡೀ ವಿಶ್ವಕ್ಕೆ ಸಂದೇಶ ಕೊಡುವ ಬಕ್ರೀದ್ ಹಬ್ಬ ಇದು‌. ನಾನು ಎಲ್ಲರಿಗೂ ನಮನಗಳನ್ನ ಹೇಳುತ್ತೇನೆ. ಅಲ್ಲಾ ಎಲ್ಲರಿಗೂ ಅನೇಕ ರೀತಿ ಪರೀಕ್ಷೆ ಮಾಡುತ್ತಾನೆ. ಅದರಲ್ಲೂ ಮನುಷ್ಯರಿಗೆ ಹೆಚ್ಚು ಪರೀಕ್ಷೆ ಮಾಡುತ್ತಾನೆ. ಇದು ಪವಿತ್ರವಾದ ಹಬ್ಬ” ಎಂದಿದ್ದಾರೆ.

“ಚುನಾವಣಾ ಸಂದರ್ಭದಲ್ಲಿ ನಿಮ್ಮ ಬಳಿ ಬಂದು ನಿಮ್ಮ ಆಶೀರ್ವಾದ ಕೇಳಿದ್ದೆ. ನೀವೆಲ್ಲಾ ಕೊಟ್ಟಿದ್ದೀರಾ, ಅಲ್ಲಾನ ಕೃಪೆಯಿಂದ ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಿಮ್ಮ ಆಶೀರ್ವಾದದಿಂದ ಗೃಹ ಸಚಿವನಾಗಿದ್ದೇನೆ. ಈ ರಾಜ್ಯದಲ್ಲಿ ಶಾಂತಿ ಕಾಪಾಡಬೇಕಾದ ಕೆಲಸ ನನ್ನದು. ಯಾವುದೇ ಮುಲಾಜಿಲ್ಲದೇ ಕೆಲಸ ನಿಭಾಯಿಸುತ್ತೇನೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...

ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಘರ್ಜಿಸಿದ ಸಿದ್ದರಾಮಯ್ಯ

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ...