ಮುಂಗಾರು ಅಧಿವೇಶನ | ಈ ವರ್ಷದಲ್ಲಿ ವನ್ಯಜೀವಿ ದಾಳಿಯಿಂದ 19 ಜನರು ಮೃತ: ಸಚಿವ ಈಶ್ವರ ಖಂಡ್ರೆ

Date:

Advertisements

ಭೌಗೋಳಿಕ ಪ್ರದೇಶದ ಶೇ.60-70ರಷ್ಟು ಕಾನನ ಪ್ರದೇಶವಿದ್ದಾಗಲೂ ವನ್ಯಜೀವಿ – ಮಾನವ ಸಂಘರ್ಷವಿತ್ತು, ಈಗ ಅರಣ್ಯ ಕ್ಷೀಣಿಸಿ ಶೇ.20ಕ್ಕೆ ಇಳಿದಿದೆ. ವನ್ಯಜೀವಿ- ಮಾನವ ಸಂಘರ್ಷ ಹೆಚ್ಚಾಗುತ್ತಿದೆ, ಇದನ್ನು ನಿಯಂತ್ರಿಸಲು ಸರ್ಕಾರ ಎಲ್ಲ ಸಾಧ್ಯ ಕ್ರಮ ಕೈಗೊಳ್ಳುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಮೇಲ್ಮನೆಯ ಪ್ರಶ್ನೋತ್ತರ ಕಲಾಪದಲ್ಲಿಂದು ಕಿಶೋರ್ ಕುಮಾರ್ ಪುತ್ತೂರು ಹಾಗೂ ಪ್ರತಾಪ ಸಿಂಹ ನಾಯಕ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, “ವನ್ಯಜೀವಿ ಸಂರಕ್ಷಣಾ ಕಾಯಿದೆಯ ಅನುಷ್ಠಾನದ ಬಳಿಕ ರಾಜ್ಯದಲ್ಲಿ 6395 ಆನೆ ಇದ್ದು, ಗಜಪಡೆಯಲ್ಲಿ ನಂ.1 ಆಗಿದ್ದರೆ, ರಾಜ್ಯದಲ್ಲಿ 563 ಹುಲಿ ಇದ್ದು, ಹುಲಿ ಸಂಖ್ಯೆಯಲ್ಲಿ ನಂ.2ನೇ ಸ್ಥಾನದಲ್ಲಿದ್ದೇವೆ” ಎಂದು ತಿಳಿಸಿದರು.

“ರಾಜ್ಯದಲ್ಲಿ 2025-26ರ ಸಾಲಿನಲ್ಲಿ ಈವರೆಗೆ ಆನೆಯಿಂದ 13 ಹಾಗೂ ಇತರ ವನ್ಯಜೀವಿ ದಾಳಿಯಿಂದ 6 ಸೇರಿ ಒಟ್ಟು 19 ಜನರು ಮೃತಪಟ್ಟಿದ್ದು, ಮಾನವ, ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಆನೆ ದಾಳಿಯಿಂದ 2022-23ನೇ ಸಾಲಿನಲ್ಲಿ 32, 2023-24ನೇ ಸಾಲಿನಲ್ಲಿ 48, 2024-25ನೇ ಸಾಲಿನಲ್ಲಿ 36 ಜನರು ಸಾವಿಗೀಡಾಗಿದ್ದರು” ಎಂದು ವಿವರ ನೀಡಿದರು.

Advertisements

“ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2022-23ರ ಸಾಲಿನಲ್ಲಿ ಮೂರು ಸಾವು ಸಂಭವಿಸಿತ್ತು, 23-24ರಲ್ಲಿ ಒಬ್ಬರು ಮೃತಪಟ್ಟಿದ್ದರು, 2024-25ರಲ್ಲಿ ಯಾವುದೇ ಜೀವಹಾನಿ ಆಗಿರಲಿಲ್ಲ. ಆದರೆ ಈ ವರ್ಷ 2 ಸಾವು ಸಂಭವಿಸಿದೆ. ಜನರ ಜೀವ ಅಮೂಲ್ಯವಾದ್ದು, ಇದಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಈ ಹಿಂದೆ ವನ್ಯಜೀವಿ ದಾಳಿಯಿಂದ ಮೃತಪಟ್ಟವರಿಗೆ 15 ಲಕ್ಷ ಪರಿಹಾರ ನೀಡಲಾಗುತ್ತಿತ್ತು. ಈಗ 20 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ” ಎಂದರು.

ಕಾಡಾನೆ ಹಾವಳಿ ನಿಯಂತ್ರಣಕ್ಕೆ ಕ್ರಮ:

“ಕಾಡಾನೆಗಳ ಹಾವಳಿ ತಡೆಯಲು ಕಾಡಿನಂಚಿನ ಗ್ರಾಮಸ್ಥರಿಗೆ ಬೇಲಿ ನಿರ್ಮಿಸಿಕೊಳ್ಳಲು ಶೇ.50ರಷ್ಟು ಸಬ್ಸಿಡಿ ನೀಡಲಾಗುತ್ತಿದೆ. ಆನೆ ನಿರೋಧಕ ಕಂದಕ ನಿರ್ಮಿಸಲಾಗುತ್ತಿದೆ. ಹಳ್ಳ ತೊರೆ ಬರುವಲ್ಲಿ ವಿಶೇಷ ವಿನ್ಯಾಸದ ಕಾಂಕ್ರೀಟ್ ತಡೆಗೋಡೆ ನಿರ್ಮಿಸಲಾಗುತ್ತಿದೆ. ಇದರ ಜೊತೆಗೆ ಸೌರ ತೂಗು ಬೇಲಿ (ಸೋಲಾರ್ ಟೆಂಟಕಲ್ ಫೆನ್ಸಿಂಗ್), ಸೌರ ಬೇಲಿ ಅಳವಡಿಸಲಾಗುತ್ತಿದೆ. ಆನೆ ಸಂಚರಿಸುವ ಪ್ರದೇಶಗಳಲ್ಲಿ ಸೂಚನಾ ಫಲಕ ಹಾಕಲಾಗುತ್ತಿದೆ, ಕಾಡಾನೆಗಳು ಗ್ರಾಮಗಳಿಗೆ ಬಂದಾಗ ಗ್ರಾಮಸ್ಥರಿಗೆ ಮಾಹಿತಿ ನೀಡಲು ವ್ಯವಸ್ಥೆ ಮಾಡಲಾಗಿದೆ. ಆನೆಗಳನ್ನು ಕಾಡಿಗೆ ಮರಳಿಸಲು ಸಿಬ್ಬಂದಿ ನಿಯೋಜಿಸಲಾಗುತ್ತಿದೆ. ಪುಂಡಾನೆ ಇದ್ದರೆ ಸೆರೆ ಹಿಡಿಯಲಾಗುತ್ತಿದೆ. ಆನೆಗಳು ಹೆಚ್ಚಿರುವ ಕಾಡಿನಂಚಿನಲ್ಲಿ ಬಿದಿರು ಬೆಳೆಸಲು ಕ್ರಮ ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.

ಆನೆ ಎಲ್ಲಿ ತಂತ್ರಜ್ಞಾನ:

“ಆನೆ-ಮಾನವ ಸಂಘರ್ಷ ಇರುವ 10 ಜಿಲ್ಲೆಗಳಲ್ಲಿ ಆನೆ ಎಲ್ಲಿ ಎಂಬ ತಂತ್ರಜ್ಞಾನ ವ್ಯವಸ್ಥೆ ಜಾರಿಗೆ ತರಲಾಗಿದೆ. ಈ ವ್ಯವಸ್ಥೆಯು ಸಾರ್ವಜನಿಕರ ದೂರುಗಳು, ಗಸ್ತು ಮೊದಲಾದ ಮಾಹಿತಿ ಸಂಗ್ರಹಿಸಿ ಆನೆಗಳ ಚಲನವಲನದ ಮೇಲ್ವಿಚಾರಣೆ ಮಾಡುತ್ತದೆ ಮತ್ತು ಈ ತಂತ್ರಜ್ಞಾನವನ್ನು ದಕ್ಷಿಣ ಕನ್ನಡ ಜಿಲ್ಲೆಗೂ ವಿಸ್ತರಿಸಲು ಕ್ರಮ ವಹಿಸಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ, ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತ ಒಂದು ದಿನದ ನಿಷೇಧಾಜ್ಞೆ ಜಾರಿ

ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ವಿಚಾರಣೆಯ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ನಾಗಪುರ ದೀಕ್ಷಾಭೂಮಿ ಯಾತ್ರೆಗೆ 7,700 ಯಾತ್ರಾರ್ಥಿಗಳ ಆಯ್ಕೆ – ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ

ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿಗೆ ಕಳುಹಿಸುವ...

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

Download Eedina App Android / iOS

X