ವಾಲ್ಮೀಕಿ ಅಭಿವದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಶುಕ್ರವಾರ ಕೂಡ ಪ್ರತಿಭಟನೆ ಮುಂದುವರಿಸಿದರು.
ಅಧಿವೇಶನ ಆರಂಭವಾಗುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಗೆ ಇಳಿದು ಧರಣಿ ನಡೆಸಿದರು. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ, “ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಕಾಂಗ್ರೆಸ್ ಪಕ್ಷದ ಬೋಗಸ್ ಗ್ಯಾರೆಂಟಿ ಕಾರ್ಡ್ ಪ್ರಿಂಟ್ ಮಾಡಲು ಬಳಕೆಯಾಗಿದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೇ ನಿಗಮದ ಹಣವೇನು ನಿಮ್ಮ ಪಕ್ಷದ ಪಾರ್ಟಿ ಫಂಡ್ ಅಂದುಕೊಂಡಿದ್ದೀರಾ” ಎಂದು ಪ್ರಶ್ನಿಸಿದರು.
“ಸಿದ್ದರಾಮಯ್ಯ ತಾವು ಸಾಮಾಜಿಕ ನ್ಯಾಯ ನಮ್ಮ ಕಮಿಟ್ಮೇಂಟ್ ಅಂತ ಬೊಗಳೆ ಭಾಷಣ ಬಿಡುತ್ತೀರಿ, ದಲಿತರ ಹಣ ಹೆಂಡ, ಸಾರಾಯಿ ಖರೀದಿಸಲು, ಸಚಿವರ ಫ್ಲೈಟ್ ಟಿಕೆಟ್ ಬುಕ್ ಮಾಡಲು ಬಳಸಲಾಗಿದೆ” ಎಂದು ಆರೋಪಿಸಿದರು.
“ಕಾಂಗ್ರೆಸ್ ಪಕ್ಷದ ಬೋಗಸ್ ಗ್ಯಾರೆಂಟಿ ಕಾರ್ಡ್ ಪ್ರಿಂಟ್ ಮಾಡಲು ಬಳಕೆಯಾಗುತ್ತಿದ್ದಾಗ ಎಲ್ಲಿ ಹೋಗಿತ್ತು ನಿಮ್ಮ ಸೋ ಕಾಲ್ಡ್ ಕಮಿಟ್ಮೇಂಟ್” ಎಂದು ಆರ್ ಅಶೋಕ್ ಗುಡುಗಿದರು.