ಜು. 20ರಿಂದ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ: ಇಂದು ಸರ್ವಪಕ್ಷ ಸಭೆ ಕರೆದ ಸರ್ಕಾರ

Date:

Advertisements

ಜುಲೈ 20ರಿಂದ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಪ್ರಾರಂಭವಾಗಲಿದ್ದು, ಇದಕ್ಕೂ ಮುನ್ನ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸರ್ಕಾರವು ಜುಲೈ 19ರಂದು ಸರ್ವಪಕ್ಷ ಸಭೆಯನ್ನು ಕರೆದಿದೆ.

ಸಭೆಯಲ್ಲಿ ಸರ್ಕಾರದ ಹಿರಿಯ ಮಂತ್ರಿಗಳು ಮತ್ತು ನಾನಾ ಪಕ್ಷಗಳ ಸದಸ್ಯರು ತಮ್ಮ ಸಮಸ್ಯೆಗಳನ್ನು ತಿಳಿಸುವುದು ಹಿಂದಿನಿಂದಲ್ಲೂ ನಡೆದುಕೊಂಡು ಬಂದಿರುವ ವಾಡಿಕೆ. ಜತೆಗೆ ಅಧಿವೇಶನವನ್ನು ಸುಗಮವಾಗಿ ನಡೆಸಲು ಸಹಕರಿಸುವಂತೆ ಸಭೆಯಲ್ಲಿ ತಿಳಿಸಲಾಗುತ್ತದೆ. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹ ಭಾಗವಹಿಸಲಿದ್ದಾರೆ.

ಸರ್ವಪಕ್ಷಗಳ ಸಭೆಯನ್ನು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ಮಂಗಳವಾರ ಕರೆದಿದ್ದರು, ಆದರೆ ಅನೇಕ ಪಕ್ಷಗಳ ನಾಯಕರು ಗೈರುಹಾಜರಾದ ಕಾರಣ ಸಭೆಯನ್ನು ಮುಂದೂಡಲಾಗಿತ್ತು. ಜತೆಗೆ ವಿರೋಧ ಪಕ್ಷದ ನಾಯಕರು ಹಾಗೂ ಬೇರೆ ಬೇರೆ ಪಕ್ಷಗಳ ನಾಯಕರು ಬೆಂಗಳೂರಿನಲ್ಲಿ ಮಂಗಳವಾರ ಒಗ್ಗಟಿನ ಸಭೆ ನಡೆಸಿದ್ದಾರೆ. ಇನ್ನೊಂದು ಕಡೆ ಎನ್​​ಡಿಎ ಮಿತ್ರಕೂಟಗಳು ಕೂಡ ಸಭೆ ನಡೆಸಿವೆ.

Advertisements

ಸರ್ವಪಕ್ಷ ಸಭೆಗೂ ಮುನ್ನ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಲ್ಹಾದ್ ಜೋಶಿ ಮತ್ತು ಪಿಯೂಷ್ ಗೋಯಲ್ ಸೇರಿದಂತೆ ತಮ್ಮ ಸಂಪುಟದ ಕೆಲವು ಸಹೋದ್ಯೋಗಿಗಳೊಂದಿಗೆ ಸಭೆ ನಡೆಸಿದ್ದಾರೆ. ಸರ್ಕಾರ ಕರೆದಿರುವ ಸರ್ವಪಕ್ಷ ಸಭೆಗೆ ಸಂಬಂಧಿಸಿದಂತೆ ಅನೇಕ ವಿಚಾರಗಳನ್ನು ಈ ಸಭೆಯಲ್ಲಿ ಚರ್ಚಿಸಲಿದ್ದಾರೆ. ಇದರ ಜತೆಗೆ ಸಂಸತ್​​ ಸದಸ್ಯರು ತಮ್ಮ ಲೋಕಸಭಾ ಕ್ಷೇತ್ರಗಳ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳುವ ದೃಷ್ಟಿಯಿಂದಲ್ಲೂ ಈ ಸಭೆಯನ್ನು ಕರೆದಿದ್ದಾರೆ.

ಆಡಳಿತ ಬಣವು ಅಧಿವೇಶನಕ್ಕೆ ತನ್ನ ಕಾರ್ಯತಂತ್ರ ರೂಪಿಸುತ್ತಿದ್ದಂತೆ ಬಿಜೆಪಿ ನೇತೃತ್ವದ ಎನ್‌ಡಿಎಯಿಂದ ಬಿಜೆಪಿ ನಾಯಕರ ಪ್ರತ್ಯೇಕ ಸಭೆಗಳು ಬುಧವಾರ ನಡೆಯಲಿವೆ. ಈ ವರ್ಷ ಹಲವು ರಾಜ್ಯಗಳ ವಿಧಾನಸಭಾ ಚುನಾವಣೆ ಮತ್ತು ಮುಂದಿನ ವರ್ಷ ಲೋಕಸಭೆ ಚುನಾವಣೆಗೆ ಎಲ್ಲ ಪಕ್ಷಗಳು ಸಜ್ಜಾಗುತ್ತಿದ್ದಂತೆ, ಈಗಾಗಲೇ ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ.

ಈ ಸುದ್ದಿ ಓದಿದ್ದೀರಾ? ಛತ್ತೀಸ್‌ಘಡ | ನಕಲಿ ಎಸ್‌ಸಿ, ಎಸ್‌ಟಿ ಪ್ರಮಾಣ ಪತ್ರಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬೆತ್ತಲೆ ಪ್ರತಿಭಟನೆ  

ಅಧಿವೇಶನದಲ್ಲಿ ವಿರೋಧ ಪಕ್ಷ ಮತ್ತು ಆಡಳಿತ ಪಕ್ಷದ ನಡುವೆ ವಾಗ್ವಾದ ಏರ್ಪಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮುಂಗಾರು ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿ ಹಾಕಲು ಬೆಲೆ ಏರಿಕೆ ಮತ್ತು ತನಿಖಾ ಸಂಸ್ಥೆಗಳ ದುರುಪಯೋಗದ ವಿಷಯಗಳ ಜೊತೆಗೆ ಮಣಿಪುರ ಬಿಕ್ಕಟ್ಟಿನ ಬಗ್ಗೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಸಕಲ ಸಿದ್ಧತೆ ಮಾಡಿಕೊಂಡಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X