ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22) ಮುಕ್ತಾಯಗೊಂಡಿದ್ದು, ಈವರೆಗೆ ಒಟ್ಟು 39 ವಿಧೇಯಕ ಅಂಗೀಕಾರ ಮಾಡಲಾಗಿದೆ.
ಈ ಬಗ್ಗೆ ಅಧಿವೇಶನದ ಸಮಾರೋಪದ ವೇಳೆ ಮಾಹಿತಿ ನೀಡಿರುವ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್, ಕಳೆದ 9 ದಿನಗಳಲ್ಲಿ ಒಟ್ಟು 70 ಗಂಟೆಗಳ ಕಾಲ ಅಧಿವೇಶನ ನಡೆಸಲಾಗಿದೆ. ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಅತಿ ಹೆಚ್ಚು ಅಂದರೆ 39 ವಿಧೇಯಕಗಳನ್ನು ಆಡಳಿತ ಪಕ್ಷ ಮಂಡನೆ ಮಾಡಿ ಅದಕ್ಕೆ ಅನುಮೋದನೆ ಪಡೆದಿದ್ದು ಒಂದು ಇತಿಹಾಸ ಸೃಷ್ಟಿಯಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಮಸೂದೆಗಳ ಮಂಡನೆ ಮಾಡಿ, ಅನುಮೋದನೆ ನೀಡಲಾಗಿದೆ. ಇದಕ್ಕೆ ಸಹಕರಿಸಿದ ಎಲ್ಲ ಆಡಳಿತ ಮತ್ತು ವಿಪಕ್ಷಗಳ ಶಾಸಕರಿಗೆ ಧನ್ಯವಾದ ಸಲ್ಲಿಸುತ್ತೇನೆ” ಎಂದು ತಿಳಿಸಿದರು.
ಈ ಮೊದಲು ಅಧಿವೇಶನಗಳಲ್ಲಿ ಸುಮಾರು 20 ವಿಧೇಯಕಗಳ ಮಂಡನೆಯಾಗುತ್ತಿದ್ದವು. ಆದರೆ ಈ ಬಾರಿಯ ಅಧಿವೇಶನದಲ್ಲಿ ಅದಕ್ಕೂ ಎರಡು ಪಟ್ಟು ವಿಧೇಯಕಗಳ ಮಂಡನೆ ಮಾಡಿ ಅವುಗಳಿಗೆ ಅನುಮೋದನೆ ಪಡೆದದ್ದು ದಾಖಲೆಯಾಗಿದೆ.
ಇದನ್ನು ಓದಿದ್ದೀರಾ? ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ
ಮುಂಗಾರು ಅಧಿವೇಶನದಲ್ಲಿ ಒಟ್ಟು 2,306 ಪ್ರಶ್ನೆಗಳು ಸ್ವೀಕೃತವಾಗಿದ್ದು, ಈ ಪೈಕಿ 2,199 ಪ್ರಶ್ನೆಗಳನ್ನು ಅಂಗೀಕರಿಸಲಾಗಿತ್ತು.
