ಇಂದಿನಿಂದ ವಿಧಾನಮಂಡಲ ಮುಂಗಾರು ಅಧಿವೇಶನ: ಸರ್ಕಾರದ ವಿರುದ್ಧ ವಾಕ್ಸಮರಕ್ಕೆ ವಿಪಕ್ಷಗಳು ಸಜ್ಜು

Date:

ವಿಧಾನಮಂಡಲದ ಉಭಯ ಸದನಗಳ ಮುಂಗಾರು ಅಧಿವೇಶನವು ಇಂದಿನಿಂದ(ಆಗಸ್ಟ್ 11) ಆರಂಭವಾಗಲಿದ್ದು, ಒಟ್ಟು 17 ಮಸೂದೆಗಳನ್ನು ಮಂಡಿಸಲು ಸರ್ಕಾರ ಸಜ್ಜಾಗಿದೆ. ಜೊತೆಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಮತ್ತು ವಿಪಕ್ಷಗಳ ಪ್ರಶ್ನೆಗೆ ಉತ್ತರ ನೀಡಲು ಸರ್ಕಾರ ಸಿದ್ಧತೆಯನ್ನು ಮಾಡಿಕೊಂಡಂತಿದೆ.

- Advertisement -

ವಾಕ್ಸಮರಕ್ಕೆ ವೇದಿಕೆಯಾಗಿರುವ ಅಧಿವೇಶನದಲ್ಲಿ ಬೆಂಗಳೂರು ಕಾಲ್ತುಳಿತ ಪ್ರಕರಣ, ಜಾತಿ ಗಣತಿ ಮರು ಸಮೀಕ್ಷೆ, ಅನುದಾನ ಕೊರತೆ, ಮತ ಕಳವು, ಪರಿಶಿಷ್ಟರ ಒಳಮೀಸಲಾತಿ ವರದಿ ಸಲ್ಲಿಕೆ ಪರ-ವಿರೋಧ- ಹೀಗೆ ಹಲವು ವಿಚಾರಗಳ ಚರ್ಚ ನಡೆಯುವ ಸಾಧ್ಯತೆಯಿದೆ. ಗೃಹಲಕ್ಷ್ಮಿ ಸೇರಿದಂತೆ ಗ್ಯಾರಂಟಿ ಯೋಜನೆಗಳ ಹಣ ಸರ್ಕಾರಕ್ಕೆ ಬಿಡುಗಡೆಯಾಗುತ್ತಿಲ್ಲ ಎಂಬ ಆರೋಪದ ಪ್ರಸ್ತಾಪವೂ ನಡೆಯುವ ಸಾಧ್ಯತೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಇದನ್ನು ಓದಿದ್ದೀರಾ? BREAKING NEWS | ಆಗಸ್ಟ್ 11ರಿಂದ‌ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭ

ಇನ್ನೊಂದೆಡೆ ಬಿಜೆಪಿಗೆ ಭಿನ್ನಮತವನ್ನು ನಿಭಾಯಿಸುವುದೇ ಸವಾಲಾಗಬಹುದು. ಈಗಾಗಲೇ ಬಹಿರಂಗವಾಗಿ ಬಿಜೆಪಿ ವಿರುದ್ಧ ಹೇಳಿಕೆಯನ್ನು ನೀಡುತ್ತಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಯಶವಂತಪುರ ಶಾಸಕ ಎಸ್​ಟಿ ಸೋಮಶೇಖರ್, ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ ಅವರನ್ನು ಈಗಾಗಲೇ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಅದಾದ ಬಳಿಕ ಮೊದಲ ಬಾರಿಗೆ ಕಲಾಪಕ್ಕೆ ಮೂವರೂ ಆಗಮಿಸುತ್ತಿದ್ದಾರೆ. ಆದ್ದರಿಂದಾಗಿ ಬಿಜೆಪಿಗೆ ವಿಧಾನಮಂಡಲದಲ್ಲಿಯೂ ಬಂಡಾಯ ನಾಯಕರುಗಳನ್ನು ಹತ್ತಿಕುವ ಸವಾಲಿದೆ.

ಈಗಾಗಲೇ ಶಾಸಕರಿಗೆ ತಲಾ 50 ಕೋಟಿ ರೂಪಾಯಿ ವಿಶೇಷ ಅನುದಾನ ಹಂಚಿಕೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ. ಆದರೆ ಇದು ಆಡಳಿತ ಪಕ್ಷದ ನಾಯಕರಿಗೆ ಮಾತ್ರ, ತಾರತಮ್ಯ ಮಾಡಲಾಗುತ್ತಿದೆ ಎಂದು ವಿಪಕ್ಷಗಳು ಆರೋಪಿಸಿವೆ. ಈ ನಿಟ್ಟಿನಲ್ಲಿ ಪ್ರತಿಭಟನೆ ನಡೆಸಲೂ ಸಜ್ಜಾಗಿದೆ.

ರಾಜ್ಯದಲ್ಲಿ ನಡೆದ ಹಲವು ಹತ್ಯೆಗಳ ಬಗ್ಗೆ ಪ್ರಸ್ತಾಪಕ್ಕೂ ಬಿಜೆಪಿ ತಯಾರಿ ನಡೆಸಿದೆ. ಧರ್ಮಸ್ಥಳ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ ರಚನೆ, ಧರ್ಮಸ್ಥಳ ಸುತ್ತಮುತ್ತ ಅಕ್ರಮವಾಗಿ ಮೃತದೇಹ ಹೂತ ಪ್ರಕರಣ ಮತ್ತು ಅದರ ಶೋಧ ವಿಚಾರವೂ ಪ್ರಸ್ತಾಪವಾಗುವ ಸಾಧ್ಯತೆಯಿದೆ. ಜೊತೆಗೆ ಮೇ ತಿಂಗಳಿನಲ್ಲಿ ಮಂಗಳೂರಿನಲ್ಲಿ ನಡೆದ ಕೋಮುದ್ವೇಷದ ಹತ್ಯೆಗಳು, ಬೆಂಗಳೂರಿನಲ್ಲಿ ಬಾಲಕನನ್ನು ಹಣಕ್ಕಾಗಿ ಅಪಹರಿಸಿ ಕೊಂದ ಪ್ರಕರಣ, ಕೊಪ್ಪಳ ಮತ್ತು ಕೊರಟಗೆರೆಯಲ್ಲಿ ನಡೆದ ಕೊಲೆಗಳು- ಮೊದಲಾದವುಗಳು ಪ್ರಸ್ತಾಪವಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆ ತಡೆಯಲು ಸಾಮಾಜಿಕ ಕಾರ್ಯಕರ್ತನ ಗೃಹಬಂಧನ: ದೆಹಲಿ ಪೊಲೀಸರಿಗೆ ಹೈಕೋರ್ಟ್ ತರಾಟೆ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ದೆಹಲಿ ಪೊಲೀಸರ ಭೇಟಿಗೆ ಮುಂದಾದ ಸಿಜೆಪಿ ನಾಯಕರು: ಪ್ರತಿಭಟನೆಗೆ ಅನುಮತಿ ಕೋರಲು ನಿರ್ಧಾರ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...