ಮಣಿಪುರದಲ್ಲಿ ಇಂಟರ್ನೆಟ್ ಸ್ಥಗಿತ: ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಣೆ

Date:

ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರ ರಾಜ್ಯದಲ್ಲಿ ಪದೇ ಪದೇ ಇಂಟರ್ನೆಟ್ ಸ್ಥಗಿತಗೊಳಿಸುವುದರ ವಿರುದ್ಧ ಇಬ್ಬರು ಮಣಿಪುರ ನಿವಾಸಿಗಳು ಸಲ್ಲಿಸಿದ್ದ ಮನವಿಯ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಹೈಕೋರ್ಟ್ ಈಗಾಗಲೇ ಇದೇ ರೀತಿಯ ಅರ್ಜಿಯನ್ನು ವಿಚಾರಣೆ ನಡೆಸುತ್ತಿದೆ ಎಂದು ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ರಾಜೇಶ್ ಬಿಂದಾಲ್ ಅವರ ರಜಾಕಾಲದ ಪೀಠವು ತುರ್ತು ವಿಚಾರಣೆಗೆ ನಿರಾಕರಿಸಿತು.

ಚೋಂಗ್‌ಥಮ್ ವಿಕ್ಟರ್ ಸಿಂಗ್ ಮತ್ತು ಮಯೆಂಗ್‌ಬಾಮ್ ಜೇಮ್ಸ್ ಸಲ್ಲಿಸಿದ ಅರ್ಜಿಯ ಪರವಾಗಿ ನ್ಯಾಯವಾದಿ ಶದನ್ ಫರಾಸತ್ ಅವರು ತುರ್ತು ವಿಚಾರಣೆಯನ್ನು ಕೋರಿ ಪೀಠದ ಮುಂದೆ ವಿಷಯ ಪ್ರಸ್ತಾಪಿಸಿದಾಗ, ‘ಈ ಪ್ರಕರಣವನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ. ಕಲಾಪವನ್ನು ಮತ್ತೆ ವಿಚಾರಣೆಗೊಳಪಡಿಸುವ ಅವಶ್ಯಕತೆ ಏನಿದೆ? ಸಾಮಾನ್ಯ ಪೀಠದ ಮುಂದೆ ಪ್ರಕರಣವನ್ನು ಪ್ರಸ್ತಾಪಿಸಿ,’ ಎಂದು ಪೀಠ ಹೇಳಿತು.

“ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಸಾಂವಿಧಾನಿಕ ಹಕ್ಕು ಮತ್ತು ಸಾಂವಿಧಾನಿಕವಾಗಿ ರಕ್ಷಿಸಲ್ಪಟ್ಟ ಅಂತರ್ಜಾಲ ಮಾಧ್ಯಮವನ್ನು ಬಳಸಿಕೊಂಡು ಯಾವುದೇ ವ್ಯಾಪಾರ ಅಥವಾ ವ್ಯವಹಾರವನ್ನು ನಡೆಸುವ ಹಕ್ಕನ್ನು ಸ್ಥಗಿತಗೊಳಿಸುವ ಆದೇಶವು ಸಂಪೂರ್ಣವಾಗಿ ಅಸಮಂಜಸವಾಗಿದೆ” ಎಂದು ಅರ್ಜಿದಾರ ಚೊಂಗ್ಥಾಮ್ ವಿಕ್ಟರ್ ಸಿಂಗ್ ಅವರ ಪರವಾಗಿ ಹಾಜರಾದ ನ್ಯಾಯವಾದಿ ಶದನ್ ಫರಾಸತ್ ಹೇಳಿದರು.

ರಾಜ್ಯದ ನಿವಾಸಿಗಳು ಭಯ, ಆತಂಕ, ಅಸಹಾಯಕತೆ ಮತ್ತು ಹತಾಶೆಯ ಭಾವನೆಗಳನ್ನು ಅನುಭವಿಸಿದ್ದಾರೆ. ಸಾಮಾನ್ಯ ಜನರ ದೈನಂದಿನ ಚಟುವಟಿಕೆ ಸಾಧ್ಯವಾಗುತ್ತಿಲ್ಲ. ಕಚೇರಿ ಸಹೋದ್ಯೋಗಿಗಳೊಂದಿಗೆ ಸಂವಹನ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮುಂದಿನ 36 ಗಂಟೆಗಳಲ್ಲಿ ಬಿಪೊರ್‌ಜಾಯ್‌ ಚಂಡಮಾರುತ ತೀವ್ರ ಸ್ವರೂಪ: ಐಎಂಡಿ

ಮಕ್ಕಳನ್ನು ಶಾಲೆಗೆ ಕಳುಹಿಸಲು, ಬ್ಯಾಂಕ್ ಖಾತೆ ಬಳಸಲು, ಹಣ ಪಾವತಿ ಅಥವಾ ಸಂದಾಯಕ್ಕೆ, ಅಗತ್ಯ ಸಾಮಗ್ರಿ ಮತ್ತು ಔಷಧ ಇತ್ಯಾದಿಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ನಿಷೇಧದಿಂದಾಗಿ ಜೀವನ ಮತ್ತು ಜೀವನೋಪಾಯ ಸ್ಥಗಿತಗೊಂಡಿದೆ. ವಾಕ್ ಸ್ವಾತಂತ್ರ್ಯ ಮತ್ತು ವ್ಯಾಪಾರ ಮತ್ತು ಉದ್ಯೋಗವನ್ನು ಮುಂದುವರಿಸುವ ಸ್ವಾತಂತ್ರ್ಯದ ಮೂಲಭೂತ ಹಕ್ಕುಗಳನ್ನು ಚಲಾಯಿಸಲು ಜನರಿಗೆ ಅವಕಾಶ ನೀಡದೆ ಇರುವುದರಿಂದ ಈ ರೀತಿಯ ಆದೇಶಗಳು ತಾರತಮ್ಯ ಎಸಗುತ್ತಿವೆ ಎಂದು ತಿಳಿಸಲಾಗಿದೆ.

ಅಂತರ್ಜಾಲ ನಿಷೇಧದಿಂದ ಕಾನೂನುಬದ್ಧ ಗುರಿ ಈಡೇರುವುದಿಲ್ಲ. ಈಗಿನ ಪರಿಸ್ಥಿತಿ ಗಮನಿಸಿದರೆ ಕಾನೂನು ಮತ್ತು ಸುವ್ಯವಸ್ಥೆಯ ಉದ್ದೇಶದೊಂದಿಗೆ ನಿಷೇಧ ನೇರ ಸಂಬಂಧ ಹೊಂದಿಲ್ಲ. ಅಂತರ್ಜಾಲ ನಿಷೇಧ ಕುರಿತಾದ ಅಧಿಸೂಚನೆಗಳನ್ನು ಯಾವುದೇ ವೆಬ್‌ಸೈಟ್‌ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿಲ್ಲ. ಹೀಗಾಗಿ, ನಿವಾಸಿಗಳು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಅಥವಾ ನಿಷೇಧ ಪ್ರಶ್ನಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ, ಎಲ್ಲ ಜಿಲ್ಲೆಗಳಲ್ಲಿ ಅಂತರ್ಜಾಲ ಸೇವೆ ಮತ್ತೆ ಆರಂಭಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಉಲ್ಲೇಖಿಸಲಾಗಿದೆ.

ಕಳೆದ 35 ದಿನಗಳಿಂದ ಇಂಟರ್‌ನೆಟ್‌ ಸ್ಥಗಿತವನ್ನು ಮುಂದುವರೆಸುತ್ತಿದ್ದು, ಮಣಿಪುರ ಸರ್ಕಾರ ಮಂಗಳವಾರ ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಜೂನ್ 10 ರವರೆಗೆ ಮತ್ತೆ ವಿಸ್ತರಿಸಿದೆ.

ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದಲ್ಲಿ ಸುಮಾರು 100 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 310 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪ್ರಸ್ತುತ 272 ಪರಿಹಾರ ಶಿಬಿರಗಳಲ್ಲಿ ಒಟ್ಟು 37,450 ಜನರು ಆಶ್ರಯ ಪಡೆದಿದ್ದಾರೆ.

ಪರಿಶಿಷ್ಟ ಪಂಗಡಗಳ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೈತೇಯಿ ಸಮುದಾಯದ ಬೇಡಿಕೆಯನ್ನು ಪ್ರತಿಭಟಿಸಲು ಕಣಿವೆ ರಾಜ್ಯದ ಜಿಲ್ಲೆಗಳಲ್ಲಿ ‘ಬುಡಕಟ್ಟು ಸಮುದಾಯದ ಒಗ್ಗಟ್ಟಿನ ಮೆರವಣಿಗೆ’ ಆಯೋಜಿಸಿದ ನಂತರ ಮೇ 3 ರಂದು ರಾಜ್ಯದಲ್ಲಿ ಮೊದಲು ಘರ್ಷಣೆಗಳು ಪ್ರಾರಂಭವಾದವು.

ರಾಜ್ಯದಲ್ಲಿ ಶಾಂತಿ ಮರುಸ್ಥಾಪನೆಗಾಗಿ ಸುಮಾರು 10,000 ಸೇನೆ ಮತ್ತು ಅಸ್ಸಾಂ ರೈಫಲ್ಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಆತ ನನ್ನ ಮಗನೇ ಇರಬಹುದು, ಆತನನ್ನು ಗಲ್ಲಿಗೇರಿಸಿ’: ಅತ್ಯಾಚಾರ ಆರೋಪಿಯ ತಂದೆ

ಆತ ನನ್ನ ಮಗನಾಗಿರಬಹುದು. ಆದರೆ, ಆತ ಅಪರಾಧಿ. ಆತನನ್ನು ಗಲ್ಲಿಗೇರಿಸಿ ಎಂದು...

ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ: ಸಿದ್ದರಾಮಯ್ಯ

ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ...

‘ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ಧಿ ಬಂತಂತೆ’ ಇದು ರಾಜ್ಯ ಸರ್ಕಾರದ ಪರಿಸ್ಥಿತಿ: ಈಶ್ವರಪ್ಪ ಲೇವಡಿ

ಡಿಕೆ ಶಿವಕುಮಾರ್‌ ಅವರ ಕುತಂತ್ರದಿಂದ ರಾಜ್ಯದ ಜನರಿಗೆ ಸಮಸ್ಯೆ ನೀರು ಬಿಡುವುದಕ್ಕಿಂತ ಮೊದಲೇ...

ವಿಶೇಷಚೇತನ ಯೋಧರ ಹೊಸ ಪಿಂಚಣಿ ಯೋಜನೆ; ಮೋದಿ ಸರ್ಕಾರದ ನಕಲಿ ರಾಷ್ಟ್ರೀಯತೆ ಮತ್ತೊಮ್ಮೆ ಬಯಲು: ಖರ್ಗೆ

ಸಶಸ್ತ್ರ ಪಡೆ ಸಿಬ್ಬಂದಿಗೆ ಹೊಸ ವಿಶೇಷಚೇತನ ಪಿಂಚಣಿ ನಿಯಮಗಳ ಕುರಿತು ಶನಿವಾರ...