ಮೂಡಾ ‌ಅಕ್ರಮ | ಸರ್ಕಾರದ ನಿಯಮಾವಳಿ ಪ್ರಕಾರ ಪತ್ನಿಗೆ ನಿವೇಶನ ನೀಡಿದ್ದಾರೆ: ಸಿಎಂ ಸ್ಪಷ್ಟನೆ

Date:

Advertisements

ಮುಖ್ಯಮಂತ್ರಿಗಳ ಧರ್ಮಪತ್ನಿಯವರಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿದ್ದು, ಅದಕ್ಕೆ ಪರ್ಯಾಯವಾಗಿ 50: 50 ಅನುಪಾತದಲ್ಲಿ ಬೇರೆಡೆ ನಿವೇಶನಗಳನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಕೊಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಮಾಧ್ಯಮದವರೊಂದಿಗೆ ಮಂಗಳವಾರ ಮಾತನಾಡಿ,”ಬಿಜೆಪಿ ಅವರು ಅಧಿಕಾರದಲ್ಲಿರುವಾಗ ನಮಗೆ ನಿವೇಶನ ಕೊಟ್ಟಿದ್ದಾರೆ. ನನ್ನ ಪತ್ನಿಗೆ ಸೇರಿದ್ದ 3 ಎಕರೆ 16 ಗಂಟೆ ಜಮೀನು ರಿಂಗ್ ರೋಡ್ ಪಕ್ಕದ ಕೆಸರೆಯಲ್ಲಿದೆ. ಅದನ್ನು ನನ್ನ ಭಾವಮೈದುನ ಪಡೆದಿದ್ದು, ನನ್ನ ಪತ್ನಿಗೆ ದಾನವಾಗಿ ಕೊಟ್ಟಿದ್ದಾರೆ. ನಾನು ಅಧಿಕಾರದಲ್ಲಿದ್ದಾಗ ತೆಗೆದುಕೊಳ್ಳಲು ಹೋಗಿಲ್ಲ” ಎಂದು ಹೇಳಿದರು.

“50: 50 ಅನುಪಾತದಲ್ಲಿ ಕೊಡಬೇಕು ಎಂದು ಕಾನೂನು ಮಾಡಿದ್ದು ಬಿಜೆಪಿಯವರು. ನಮ್ಮ ಜಮೀನನ್ನು ಸ್ವಾಧೀನ ಮಾಡಿಕೊಳ್ಳದೇ ಮೂಡಾದವರು ನಿವೇಶನಗಳನ್ನು ಮಾಡಿ ಹಂಚಿದ್ದರು. ಹಂಚಿದ ಮೇಲೆ ನಮಗೆ ಕಾನೂನುಬದ್ಧವಾಗಿ ನಿವೇಶನ ಕೊಡಬೇಕು. ಅದರಂತೆ 50:50 ಕೊಡಲು ಒಪ್ಪಿದರು” ಎಂದರು.

Advertisements

“ಸರ್ಕಾರದ ನಿಯಮಾವಳಿ, ಆದೇಶದ ಪ್ರಕಾರ ಕೊಡಿ ಎಂದು ಬಿಜೆಪಿ ಅಧಿಕಾರದಲ್ಲಿದ್ದಾಗ ಕೇಳಿಕೊಂಡಿದ್ದೆವು. ಆಗ ಅವರು ಬೇರೆ ಬೇರೆ ಸ್ಥಳಗಳಲ್ಲಿ ಸಮಾನಾಂತರ ನಿವೇಶನಗಳನ್ನು ಕೊಟ್ಟಿದ್ದಾರೆ. ಇದರಲ್ಲಿ ತಪ್ಪೇನಿದೆ” ಎಂದು ಪ್ರಶ್ನಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X