ಹಸಿ ಸುಳ್ಳು ಹೇಳುತ್ತಿರುವ ನಿಮ್ಮಲ್ಲಿ ನೈತಿಕತೆ ಸತ್ತಿದೆ: ಸಿಎಂ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

Date:

ಸುಳ್ಳು ಹೇಳುವುದು ನಿಮಗೆ ಅಭ್ಯಾಸವೋ, ಆಚಾರವೋ, ಚಾಳಿಯೋ ಗೊತ್ತಿಲ್ಲ. ಹಸಿ ಹಸಿ ಸುಳ್ಳು ಹೇಳುತ್ತಿರುವ ನಿಮ್ಮಲ್ಲಿ ನೈತಿಕತೆ ಸತ್ತಿದೆ. ಆರೋಪಿ ಸ್ಥಾನದಲ್ಲಿರುವ ನೀವು ನನ್ನ ಬಗ್ಗೆ, ನನ್ನ ತಂದೆಯವರ ಬಗ್ಗೆ ಆಡುತ್ತಿರುವ ಸುಳ್ಳುಗಳು ನಿಮ್ಮ ಯೋಗ್ಯತೆಗೆ ತಕ್ಕುದಲ್ಲ ಸಿದ್ದರಾಮಯ್ಯನವರೇ. ನಮ್ಮ ಬಗ್ಗೆ ಮಾತನಾಡುವ ಯೋಗ್ಯತೆಯೂ ನಿಮಗಿದೆ ಎಂದು ನನಗೆ ಅನಿಸುವುದಿಲ್ಲ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

- Advertisement -

ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಮುಡಾದವರು ನನಗೆ ನಿವೇಶನ ಹಂಚಿದ್ದಾರೆ. ಸ್ವಾಧೀನ ಪತ್ರವನ್ನೂ ನೀಡಿದ್ದಾರೆ. ಆ ಪತ್ರವನ್ನು ನಾನು ಮಾಧ್ಯಮಗಳ ಮುಂದೆಯೂ ತೋರಿಸಿದ್ದೇನೆ. ಹಂಚಿದ ನಿವೇಶನದ ಜಾಗವನ್ನು ನನ್ನ ಸುಪರ್ದಿಗೆ ಕೊಡಬೇಕಲ್ಲವೇ? ಕೊಟ್ಟಿಲ್ಲ. ಹಾಗಾದರೆ, ಇದರಲ್ಲಿ ಸಿದ್ದರಾಮಯ್ಯ ಮಾಡಿದ ಸಂಶೋಧನೆ ಏನಿದೆ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಸುಳ್ಳು ಸಂಶೋಧಕ ಸಿದ್ದರಾಮಯ್ಯನವರೇ, ನಿಮ್ಮ ಮುಖಕ್ಕೆ ಮೆತ್ತಿಕೊಂಡಿರುವ ಕೊಳಕನ್ನು ನನ್ನ ಮೇಲೆ, ಇನ್ನಿತರರ ಮೇಲೆ ಸಿಡಿಸಲು ಹೊರಟು ಲಜ್ಜೆಗೇಡಿತನದ ಪರಮಾವಧಿ ಮೆರೆದಿದ್ದೀರಿ” ಎಂದು ಟೀಕಿಸಿದ್ದಾರೆ.

“ಮುಡಾ ಭೂಮಿಯನ್ನು ಮುಖ್ಯಮಂತ್ರಿ ಕುಟುಂಬ ಮುಕ್ಕಿ ತಿಂದಿದೆ ಎಂದು ಇಡೀ ದೇಶ ಮಾತನಾಡುತ್ತಿದೆ. ದಾಖಲೆಗಳು ಹಾದಿಬೀದಿಯಲ್ಲಿ ಹೊರಳಾಡುತ್ತಿವೆ! ನಿಮ್ಮ ಸಮಾಜವಾದಿ ಮುಖವಾಡ, ಅಹಿಂದಾ ಅಲಂಕಾರ, ಸತ್ಯವಂತನ ಸಿಂಗಾರ, ಇದೆಲ್ಲವೂ ಕಳಚಿಬಿದ್ದಿದೆ. ಅಸಹ್ಯವಾಗುವಷ್ಟು ಅನಾಚಾರ ಮಾಡಿ ಅಹಿಂದ ರಕ್ಷಣೆ ಪಡೆಯಲು ಯತ್ನಿಸುತ್ತಿರುವ ನಿಮ್ಮ ಅಸಹಾಯಕತೆ ನನಗೆ ಅರ್ಥವಾಗುತ್ತದೆ. ಪಾಪ, ನಿಮ್ಮ ಪಕ್ಷದವರೇ ನಿಮಗೆ ‘ಶರಪಂಜರ’ ಸೃಷ್ಟಿಸುತ್ತಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

“ಕುಮಾರಸ್ವಾಮಿ ರಾಜ್ಯಕ್ಕೆ ಕೈಗಾರಿಕೆ ತರಲಿ, ರಾಜ್ಯಕ್ಕೆ ಒಳ್ಳೆಯದು ಮಾಡಲಿ ಎನ್ನುತ್ತೀರಿ. ಅದು ನನಗೆ ಗೊತ್ತಿದೆ. ನಾನು ಕೇಂದ್ರ ಸಚಿವನಾಗಿ ಇನ್ನೂ ಎರಡು ತಿಂಗಳಾಗಿಲ್ಲ. ರಾಜ್ಯದ ಕೆಲಸ ಮಾಡೋಣ ಎಂದರೆ ನಿಮ್ಮ ಅಸಹಕಾರ, ಅಸೂಯೆ ಅಡ್ಡಿ. ಒಂದು ನಾಲಿಗೆ ಮೇಲೆ ಸಹಕಾರ, ಅಸಹಕಾರ. ಇದು ಹೇಗೆ ಸಾಧ್ಯ ಸಿದ್ದರಾಮಯ್ಯನವರೇ?” ಎಂದಿದ್ದಾರೆ.

“ಎರಡು ಮುಖ, ಎರಡು ನಾಲಿಗೆ, ಎರಡು ವ್ಯಕ್ತಿತ್ವ, ಎರಡು ನೀತಿ. ಇದು ನಿಮ್ಮ ಐಡಿಯಾಲಜಿ! ಆ ಸಿದ್ದಾಲಜಿ ನನಗೆ ಗೊತ್ತಿಲ್ಲದಲ್ಲ ಸಿದ್ದರಾಮಯ್ಯನವರೇ. ರಾಜ್ಯಕ್ಕೆ ಒಳ್ಳೆಯದಾಗಲಿ ಎನ್ನುವ ಆಶಯ ಇರಲಿ, ನನ್ನ ಮೇಲೆ ಅಸೂಯೆ ಏಕೆ? ನಿಮ್ಮ ಸಕಲ ಗುಣಗಳ ಸಿದ್ದಾಲಜಿ ನನಗೆ ಚೆನ್ನಾಗಿಯೇ ಗೊತ್ತಿದೆ” ಎಂದು ಲೇವಡಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...