ಹೊಸ ವರ್ಷಾಚರಣೆ | ಬಂದೋಬಸ್ತ್‌ಗೆ ಹೆಚ್ಚಿನ ಸಂಖ್ಯೆಯ ಪೊಲೀಸರ ನಿಯೋಜನೆ: ಗೃಹ ಸಚಿವ ಪರಮೇಶ್ವರ್

Date:

Advertisements

ಹೊಸ ವರ್ಷದ ಆಚರಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ‌ ನಡೆಯದಂತೆ ತೀವ್ರ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ನಿರ್ದೇಶನ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪೊಲೀಸ್ ಇಲಾಖೆ, ಆರೋಗ್ಯ, ಅಬಕಾರಿ ಇಲಾಖೆ, ಬಿಬಿಎಂಪಿ, ಬಿಎಂಆರ್‌ಸಿಎಲ್‌, ಬಿಎಂಟಿಸಿಯ ಹಿರಿಯ ಅಧಿಕಾರಿಗಳ ಜೊತೆ ಶುಕ್ರವಾರ ಸಭೆ ನಡೆಸಿ ಮಾತನಾಡಿದರು.

“ಬೆಂಗಳೂರಿನ ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಎಲೆಕ್ಟ್ರಾನಿಕ್ ಸಿಟಿ, ಇಂದಿರಾನಗರ ಹಾಗೂ ಶಾಪಿಂಗ್ ಮಾಲ್, ಸ್ಟಾರ್ ಹೋಟೆಲ್‌ಗಳಲ್ಲಿ ಹೊಸ ವರ್ಷ ಆಚರಿಸಲು ಹೆಚ್ಚಿನ ಜನಸಂಖ್ಯೆ ಸೇರುವ ಸಾಧ್ಯತೆ ಇದೆ. ಎಲ್ಲ ರೀತಿಯ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕು. ರಾಜ್ಯದ ಪ್ರಮುಖ ನಗರಗಳಲ್ಲಿಯೂ ಸಹ ಮುನ್ನೆಚ್ಚರಿಕೆ ವಹಿಸಬೇಕು” ಎಂದು ಅಧಿಕಾರಿಗಳಿಗೆ ಸೂಚನೆ‌ ನೀಡಿದರು.

Advertisements

“ಎನ್‌ಐಎ ಅಧಿಕಾರಿಗಳು ಕಳೆದೊಂದು ತಿಂಗಳಿನಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ದಾಳಿ‌ ನಡೆಸಿ, ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಕ್ರಿಸ್‌ಮಸ್ ಹಬ್ಬ, ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಹೊರಗಡೆಯಿಂದ ಬರು‍ವವರ ಚಲನವಲನಗಳ ಬಗ್ಗೆ ಸೂಕ್ತ ನಿಗಾವಹಿಸಬೇಕು” ಎಂದು ಹೇಳಿದರು.

“ಹೊಸ ವರ್ಷ ಆಚರಿಸಲು ಜನ ಸೇರುವ ಪ್ರಮುಖ ಸ್ಥಳಗಳನ್ನು ಗುರುತಿಸಿ, ಪೊಲೀಸ್ ಅಧಿಕಾರಿಗಳು ಪರಿಶೀಲಿಸಬೇಕು. ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ಬಂದೋಬಸ್ತ್‌ಗೆ ನಿಯೋಜಿಸಬೇಕು. ಎಸ್‌ಡಿಆರ್‌ಎಫ್‌ ತಂಡಗಳು ಇರಬೇಕು. ಎಂ.ಜಿ.ರಸ್ತೆ, ಬ್ರಿಗೇಡ್ ರೋಡ್‌ಗಳಲ್ಲಿ ಬಿಬಿಎಂಪಿಯವರು ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ತೆರೆಯಬೇಕು. ನಗರದ ಎಲ್ಲ ವಿಭಾಗದ ಡಿಸಿಪಿಗಳು ಸ್ಥಳೀಯ ಆಸ್ಪತ್ರೆಗಳಿಗೆ ಭೇಟಿ ನೀಡಿ, ಡಿಸೆಂಬರ್ 31ರ ತಡರಾತ್ರಿ ತುರ್ತು ಚಿಕಿತ್ಸೆಗಾಗಿ ಅಲರ್ಟ್ ಇರುವಂತೆ ತಿಳಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ನರೇಂದ್ರ ಮೋದಿ ಯಾವುದರಲ್ಲಿ ತಿರುಗಾಡ್ತಾರೆ ಎಂದು ಬಿಜೆಪಿಯವರಲ್ಲಿ ಕೇಳಿ: ವಿಮಾನ ಪ್ರಯಾಣ ಟೀಕೆಗೆ ಸಿಎಂ ಗರಂ

“ಎಂಜಿ.ರಸ್ತೆ, ಬ್ರಿಗೇಡ್ ರೋಡ್, ಇಂದಿರಾನಗರ, ಎಲೆಕ್ಟ್ರಾನಿಕ್ ಸಿಟಿಗಳಲ್ಲಿ‌ನ ರಸ್ತೆಗಳಲ್ಲಿ ಪಬ್‌ಮತ್ತು ಬಾರ್, ಶಾಪಿಂಗ್ ಮಾಲ್, ಸ್ಟಾರ್ ಹೋಟೆಲ್‌ಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಿದ್ದಾರೆ. ಇದರಿಂದ ಅವಘಡಗಳಾಗುವ ಸಾಧ್ಯತೆ ಇರುತ್ತದೆ. ಅಗ್ನಿಶಾಮಕ ದಳ‌ ಸಿಬ್ಬಂದಿಗಳು ಅಲರ್ಟ್ ಆಗಿರಬೇಕು. ಪಬ್ ಮತ್ತು ಬಾರ್‌ಗಳು ಸುರಕ್ಷತಾ ಕ್ರಮ‌ಕೈಗೊಂಡಿವೆಯೇ ಎಂಬುದನ್ನು ಪರಿಶೀಲಿಸಿ. ಮೇಲ್ಚಾವಣಿಗಳಲ್ಲಿ ಕಿಚನ್ ತೆರೆಯಲು ಅವಕಾಶ ನೀಡಬೇಡಿ. ಮದ್ಯದ ಅಂಗಡಿಗಳು ಎಂದಿನಂತೆಯೇ ತೆರೆದಿರಬೇಕು. ಹೆಚ್ಚಿನ ಸಮಯಾವಕಾಶ ನೀಡುವುದು ಬೇಡ” ಎಂದು‌ ಸೂಚಿಸಿದರು.

ಪೊಲೀಸ್ ಹೆಲ್ಪ್‌ಡೆಸ್ಕ್

ನ್ಯೂ ಇಯರ್ ಸೆಲೆಬ್ರೇಷನ್‌ಗಾಗಿ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ತಾತ್ಕಾಲಿಕ ‘ಪೊಲೀಸ್ ಹೆಲ್ಪ್ ಡೆಸ್ಕ್’ ತೆರೆಯಬೇಕು. ಈ ಬಗ್ಗೆ ಜನರಿಗೆ ಅನೌನ್ಸ್‌ಮೆಂಟ್ ಮಾಡಬೇಕು. ಮೆಟ್ರೋ ರೈಲುಗಳು ಹೆಚ್ಚಿನ ಅವಧಿಯವರೆಗೆ ಸಂಚರಿಸಲಿ. ಅಲ್ಲದೇ, ಬಿಎಂಟಿಸಿ ವತಿಯಿಂದ ಪ್ರತ್ಯೇಕ ಬಸ್‌ಗಳನ್ನು ಬಿಡಬೇಕು. ಖಾಸಗಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು.

ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ದಯಾನಂದ್, ಅಗ್ನಿಶಾಮಕ ವಿಭಾಗದ ಮುಖ್ಯಸ್ಥ ಕಮಲ್ ಪಂತ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸೇರಿದಂತೆ ಮತ್ತಿತರ ಹಿರಿಯ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X