ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವ ಶಕ್ತಿ ಕಾವೇರಿ ತಾಯಿ ನೀಡುತ್ತಾಳೆ: ಡಿ ಕೆ ಶಿವಕುಮಾರ್

Date:

ಈ ಬಾರಿ ಉತ್ತಮ ಮಳೆಯಾಗಿರುವ ಪರಿಣಾಮ ಈಗಾಗಲೇ ತಮಿಳುನಾಡಿಗೆ 84 ಟಿಎಂಸಿಯಷ್ಟು ನೀರು ತಲುಪಿದೆ. ಯಾವುದೇ ಸಮಸ್ಯೆ ಸೃಷ್ಟಿಯಾಗಿಲ್ಲ. ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವಂತಹ ಆಶೀರ್ವಾದವನ್ನು ಕಾವೇರಿ ತಾಯಿ ನಮ್ಮ ಸರ್ಕಾರಕ್ಕೆ ಮಾಡುತ್ತಾಳೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹರ್ಷ ವ್ಯಕ್ತಪಡಿಸಿದರು.

- Advertisement -

ಕೆಆರ್‌ಎಸ್ ಅಣೆಕಟ್ಟಿಗೆ ಬಾಗಿನ ಸಮರ್ಪಿಸಿದ ನಂತರ ಮಾತನಾಡಿದ ಅವರು, ”ಜುಲೈ ತಿಂಗಳಿನಲ್ಲಿ ಪ್ರತಿ ದಿನ 1 ಟಿಎಂಸಿಯಂತೆ ತಮಿಳುನಾಡಿಗೆ 40 ಟಿಎಂಸಿ ನೀರು ಹರಿಸಬೇಕಿತ್ತು. ಅದಕ್ಕಿಂತ ಹೆಚ್ಚಿನ ನೀರು ಹರಿದು ತಾಯಿ ಕಾವೇರಿ ನೆಮ್ಮದಿ ಶಾಂತಿ ತಂದಿದ್ದಾಳೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

”ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚಿನ ಪ್ರಯೋಜನವಿದೆ. ಸಂಕಷ್ಟ ಕಾಲದಲ್ಲಿ ಅವರ ಪಾಲಿನ 177 ಟಿಎಂಸಿ ನೀರನ್ನು ಅವರಿಗೆ ಹರಿಸಬಹುದು. ಸುಮಾರು 400 ಮೆ.ವ್ಯಾ ವಿದ್ಯುತ್ ತಯಾರಿಸಬಹುದು. ಈ ಅಣೆಕಟ್ಟು ಕಟ್ಟಲು ನ್ಯಾಯಾಲಯ ಅನುವು ಮಾಡಿಕೊಡುತ್ತದೆ ಎಂದು ನಂಬಿದ್ದೇವೆ. ತಮಿಳುನಾಡಿನ ಜನತೆಗೆ ಭಗವಂತನ ಕೃಪೆಯಿಂದ ಜ್ಞಾನೋದಯವಾಗುತ್ತದೆ. ನಮ್ಮ ಕಾಲದಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಅನುವು ಮಾಡಿಕೊಡುತ್ತಾರೆ ಎಂದು ನಂಬಿದ್ದೇವೆ” ಎಂದರು.

ಮೋಡಕ್ಕೆ ಯಾವ ಸರ್ಕಾರ ಇದೆ ಎಂದು ಗೊತ್ತಿರುವುದಿಲ್ಲ

”ತಮಿಳುನಾಡಿಗೆ ನಾನು ಅಥವಾ ಸಿದ್ದರಾಮಯ್ಯ ಅವರು ನೀರು ಬಿಟ್ಟಿಲ್ಲ. ತಾಯಿ ಕೃಪೆಯಿಂದ ಹೆಚ್ಚು ಮಳೆ ಬಂದಿದೆ ಆದ ಕಾರಣ ನೀರು ಅವರಿಗೆ ಹೋಗಿದೆ. ಮುಖ್ಯಮಂತ್ರಿಗಳು ಅಧಿಕಾರಕ್ಕೆ ಬಂದ ನಂತರ ಮಳೆ ಬರಲಿಲ್ಲ, ನೀರು ಬರಲಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದರು. ಅವರಿಗೆಲ್ಲ ಈಗ ತಕ್ಕ ಉತ್ತರ ಸಿಕ್ಕಿದೆ. ಮೇಲೆ ಇರುವ ಮೋಡಕ್ಕೆ ಕೆಳಗೆ ಯಾವ ಸರ್ಕಾರ ಅಧಿಕಾರದಲ್ಲಿ ಇದೆ ಎನ್ನುವುದು ಗೊತ್ತಿರುವುದಿಲ್ಲ” ಎಂದು ಹೇಳಿದರು.

82 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ

”ಭಾರತದ ಏಳು ಪವಿತ್ರ ನದಿಗಳಲ್ಲಿ ಕಾವೇರಿಯೂ ಒಂದು. ಜನರ ಕುಡಿಯುವ ನೀರು, ವ್ಯವಸಾಯ, ಕೈಗಾರಿಕೆಗಳಿಗೆ ಕಾವೇರಿ ಜೀವ ನೀಡುತ್ತಿದ್ದಾಳೆ. ಈ ವರ್ಷ 82 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿದೆ. ಸುಮಾರು 62 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಂಡಿದೆ” ಎಂದು ತಿಳಿಸಿದರು.

ಬೃಂದಾವನಕ್ಕೆ ಹೊಸ ರೂಪ; ಕಾವೇರಿ ಆರತಿ ಪ್ರಾರಂಭ

”ಬೃಂದಾವನ ಅಣೆಕಟ್ಟೆಯನ್ನು ಮೈಸೂರು ಮಹಾರಾಜರು ಅದ್ಬುತವಾಗಿ ನಿರ್ಮಾಣ ಮಾಡಿದ್ದರು. ಗುಂಡೂರಾವ್ ಅವರು ಇದಕ್ಕೆ ಹೊಸರೂಪ ನೀಡಿದರು. ಪ್ರವಾಸೋದ್ಯಮವನ್ನು ಗುರಿಯಾಗಿಟ್ಟುಕೊಂಡು ಪಿಪಿಪಿ ಮಾದರಿಯಲ್ಲಿ ಹೊಸ ರೂಪ ನೀಡಲು ನಮ್ಮ ಸರ್ಕಾರ ಹೊರಟಿದೆ. ಗಂಗಾ ಆರತಿಗಿಂತ ಮಿಗಿಲಾಗಿ ಪ್ರತಿವಾರ ಕಾವೇರಿ ಆರತಿ ಮಾಡಲಾಗುವುದು. ಈ ಕಾರ್ಯಕ್ರಮವನ್ನು ಆದಷ್ಟು ಬೇಗ ಪ್ರಾರಂಭ ಮಾಡಲಾಗುವುದು. ಈಗಾಗಲೇ ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಕಾವೇರಿ ಜಲಾನಯನ ಪ್ರದೇಶದ ಶಾಸಕರ ಹಾಗೂ ಸಂಬಂಧಪಟ್ಟ ಇಲಾಖೆಗಳನ್ನು ಸೇರಿಸಿ ಸಮಿತಿ ರಚಿಸಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

"ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು...