ಭಂಡತನ ಪಕ್ಕಕ್ಕೆ ಸರಿಸಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ಘನತೆ ಉಳಿಸಿಕೊಳ್ಳಿ: ಬಿ ವೈ ವಿಜಯೇಂದ್ರ ಆಗ್ರಹ

Date:

Advertisements

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ’ ಕನಿಷ್ಠ ಈಗಲಾದರೂ ಲೂಟಿಕೋರ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದೆ. ಸರ್ಕಾರ ಈ ಕೂಡಲೇ 50:50ಅನುಪಾತದಲ್ಲಿ ಮುಡಾದಲ್ಲಿ ವಿತರಣೆಯಾಗಿರುವ ಸಾವಿರಾರು ನಿವೇಶನಗಳ ಕ್ರಯವನ್ನು ರದ್ದುಗೊಳಿಸಿ ಅಧಿಸೂಚನೆ ಹೊರಡಿಸಲಿ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಮುಡಾ ಹಿಂದಿನ ಆಯುಕ್ತರ ಅಮಾನತ್ತು ಪತ್ರವನ್ನು ಲಗತ್ತಿಸಿ ಪೋಸ್ಟ್‌ ಮಾಡಿರುವ ಅವರು, “ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ರಕ್ಷಣೆಯ ಪ್ರತೀಕವೆಂಬಂತೆ ಧೂಳು ಹಿಡಿದು ಕುಳಿತಿದ್ದ ತಾಂತ್ರಿಕ ಸಮಿತಿಯ ತನಿಖಾ ವರದಿಯ ಪ್ರತಿಯನ್ನು ನಾವು ಬಿಡುಗಡೆ ಮಾಡಿದ ನಂತರ ಗತ್ಯಂತರವಿಲ್ಲದೆ ಕೈಗೆತ್ತಿಕೊಂಡು ಇದೀಗ ಮುಡಾ ಬ್ರಹ್ಮಾಂಡ ಭ್ರಷ್ಟಾಚಾರದ ರೂವಾರಿಗಳಲ್ಲೊಬ್ಬರಾದ ಹಿಂದಿನ ಆಯುಕ್ತ ಜಿ ಟಿ ದಿನೇಶ್ ಕುಮಾರ್‌ರನ್ನು ಅಮಾನತ್ತು ಗೊಳಿಸಲಾಗಿದೆ” ಎಂದಿದ್ದಾರೆ.

“ಶೇಕಡ 50:50ರ ಅನುಪಾತದಲ್ಲಿ ಪೂರ್ವಾನ್ವಯವಾಗಿ ನಿವೇಶನ ಪಡೆಯುವುದು ನಿಯಮಬಾಹಿರ ಎಂದು ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಿಸಿದ್ದ ತಾಂತ್ರಿಕ ಸಮಿತಿ ಕಳೆದ 3-11-2023 ರಂದೇ ಕಾಂಗ್ರೆಸ್ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿತ್ತು. ಈ ವರದಿಯಲ್ಲಿ ಮುಡಾದಲ್ಲಿ ನಡೆಯುತ್ತಿದ್ದ ಬ್ರಹ್ಮಾಂಡ ಭ್ರಷ್ಟಾಚಾರಗಳ ಬಗ್ಗೆ ಪೂರ್ಣ ಮಾಹಿತಿಯನ್ನು ನೀಡಲಾಗಿತ್ತು” ಎಂದು ತಿಳಿಸಿದ್ದಾರೆ.

Advertisements

“ಅಮಾನತ್ತಿಗೆ ನೀಡಿರುವ ಕಾರಣಗಳಲ್ಲಿ ಶೇಕಡ 50:50ರ ಅನುಪಾತದಲ್ಲಿ ನಿಯಮ ಬಾಹಿರವಾಗಿ ನಿವೇಶನಗಳನ್ನು ವಿತರಿಸಿರುವ ಅಂಶವನ್ನು ಪ್ರಮುಖವಾಗಿ ಉಲ್ಲೇಖಿಸಲಾಗಿದೆ, ಇದು ಏನು ಹೇಳುತ್ತದೆ ಎಂದರೆ ಶೇ 50:50 ರ ಅನುಪಾತದಲ್ಲಿ ಪೂರ್ವನ್ವಯವಾಗಿ ಮಾನ್ಯ ಸಿದ್ದರಾಮಯ್ಯನವರ ಪತ್ನಿಯವರಿಗೆ ಮಂಜೂರಾಗಿರುವ 14 ನಿವೇಶನಗಳು ಸಂಪೂರ್ಣ ಅಕ್ರಮ ಹಾಗೂ ನಿಯಮಬಾಹಿರ ಎಂಬುದು ಸ್ಪಷ್ಟವಾಗಿದೆ. ವಿಚಿತ್ರವೆಂದರೆ ಮುಖ್ಯಮಂತ್ರಿಗಳ ಕುಟುಂಬಕ್ಕೆ 14 ನಿವೇಶನಗಳನ್ನು ಬಳುವಳಿ ನೀಡಿದ ಹಿಂದಿನ ಆಯುಕ್ತರೊಬ್ಬರ ವಿರುದ್ಧ ಯಾವುದೇ ಕ್ರಮ ಜರುಗಿಸದೇ ಋಣ ಸಂದಾಯಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.

“ಈ ವಿಷಯಕ್ಕೆ ಸಂಬಂಧಿಸಿದಂತೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನ್ಯಾಯಾಲಯದ ಆದೇಶವನ್ನು ಕಾಯುವ ಅಗತ್ಯವಾದರೂ ಏನಿದೆ? ಸರ್ಕಾರವೇ ನಿಮ್ಮ ಧರ್ಮಪತ್ನಿ ಅವರು ಪಡೆದಿರುವ ನಿವೇಶನಗಳು ಅಕ್ರಮ ಹಾಗೂ ನಿಯಮ ಬಾಹಿರ ಎಂದು ಹೇಳಿರುವಾಗ ಈಗಲಾದರೂ ತಮ್ಮ ಭಂಡತನವನ್ನು ಪಕ್ಕಕ್ಕೆ ಸರಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯದ ಮುಖ್ಯಮಂತ್ರಿ ಸ್ಥಾನದ ಘನತೆಗೆ ಬಂದಿರುವ ಚ್ಯುತಿಯನ್ನು ಹೋಗಲಾಡಿಸಿ ಗೌರವ ಉಳಿಸಿಕೊಳ್ಳಿ” ಎಂದು ಸಲಹೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X