ಮಾಧ್ಯಮಗಳನ್ನು ನಾಯಿಗೆ ಹೋಲಿಸಿ ಮತ್ತೆ ನಾಲಿಗೆ ಹರಿಬಿಟ್ಟಿ ಸಂಸದ ಅನಂತಕುಮಾರ್‌ ಹೆಗಡೆ

Date:

ಸಂವಿಧಾನ ಬದಲಾವಣೆ ಮಾಡಬೇಕು ಎಂದು ಹೇಳಿಕೆ ನೀಡಿದ್ದ ಸಂಸದ ಅನಂತಕುಮಾರ್‌ ಹೆಗಡೆ ಮುಜುಗರ ತಾಳಲಾರದೇ ಮಾಧ್ಯಮಗಳನ್ನು ನಾಯಿಗೆ ಹೋಲಿಸಿ ಮಾತನಾಡಿ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ.

- Advertisement -

ಉತ್ತರ ಕನ್ನಡ ಜಿಲ್ಲೆ ಅಂಕೊಲಾ ತಾಲೂಕಿನ ಹಿಲ್ಲೂರು ಗ್ರಾಮದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, “ಆನೆ ಹೊಗಿದ್ದೆ ದಾರಿ ಎಂಬಂತೆ ನಾವು ಈರಬೇಕು. ಮಾಧ್ಯಮಗಳು ಏನೂ ಬೆಕಾದ್ರೂ ಬರೆದುಕೊಳ್ಳಲಿ. ಬೇಕಾದ ಬೇವರ್ಸಿಗಳು ಏನೂ ಬೇಕಾದ್ರೂ ವದರಾಡಲಿ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ವಿವಾದ ಸೃಷ್ಟಿಯಾದರೂ ದೃಢವಾಗಿ ನಿಲ್ಲುವುದು ನಿಜವಾದ ನಾಯಕತ್ವ, ಪತ್ರಿಕೆಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಚರ್ಚೆಗೆ ಕಾರ್ಯಕರ್ತರು ತಲೆಕೆಡಿಸಿಕೊಳ್ಳಬಾರದು” ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು.

“ಸಾಮಾಜಿಕ ಜಾಲತಾಣದಲ್ಲಿ ಬೇಕಾದ್ದು ಚರ್ಚೆ ಆಗಲಿ. ಆದ್ರೆ ನಿವೆಲ್ಲ ಇದಕ್ಕೆ ವಿಚಲಿತರಾಗಬಾರದು. ನೀವು ಯಾವದೋ ಸಾಮಾನ್ಯ ಪಕ್ಷದ ಕಾಯರ್ತರಲ್ಲ. ದೇಶ ಆಡಳಿತ ಮಾಡುತ್ತಿರುವ ಪಕ್ಷದ ಕಾರ್ಯಕರ್ತರು. ಆನೆ ನಡೆದಿದ್ದೆ ದಾರಿ ಎಂಬಂತೆ ನಾವು ನಡಿಯಬೇಕು ಕಣ್ರಿ. ಆನೆ ನಡೆಯುತ್ತಿದ್ದರೆ ನಾಯಿಗಳು ಬೋಗಳುತ್ತಾ ಇರುತ್ತವೆ. ಆನೆ ನಡೆಯುತ್ತಿದ್ದರೆ ಯಾವಗಲಾದರೂ ನಾಯಿ ಕಡೆ ಗಮನ ಕೊಡುತ್ತಾ? ನಾಯಿಗಳಿಗೂ ಗೊತ್ತು ನಾವು ಎಷ್ಟೆ ಬೊಗಳಿದ್ರು ಆನೆಗೆ ಏನು ಮಾಡುವುದಕ್ಕೂ ಆಗಲ್ಲ. ನಾಯಿಗಳು ಬೋಗಳದೆ ಇದ್ರೆ ಆನೆ ಗಾಂಭೀರ್ಯಕ್ಕೆ ಬೆಲೆ ಇರಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಯಕರ್ತರನ್ನು ಕಡೆಗಣಿಸಿದ ಬಿಜೆಪಿ ‘ಗೋ ಬ್ಯಾಕ್’ ಘೋಷಣೆಗೆ ಬೆಚ್ಚಿತೇ?

“ಹೆಗಡೆ ಹೇಳಿಕೆಯಿಂದ ಎಚ್ಚೆತ್ತುಕೊಂಡ ಬಿಜೆಪಿ ನಾಯಕರು, ಅನಂತಕುಮಾರ್ ಅವರ ಸಂವಿಧಾನ ಬದಲಾವಣೆ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ಹಿಂದೊಮ್ಮೆ ಅನಂತಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಮಾತನಾಡಿ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ಅಲ್ಲದೇ ಸಚಿವ ಸ್ಥಾನವನ್ನೂ ಸಹ ಕಳೆದುಕೊಂಡಿದ್ದರು. ಇದೀಗ ಮತ್ತೆ ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ್ದು, ರಾಜ್ಯದಲ್ಲಿ ಬಿಜೆಪಿಗೆ ಮುಜುಗರ ಉಂಟು ಮಾಡಿದ್ದಾರೆ. ಅಲ್ಲದೇ ಕಾಂಗ್ರೆಸ್​ ಪ್ರಬಲ ಅಸ್ತ್ರವನ್ನು ನೀಡಿದ್ದು, ಇದನ್ನೇ ಉಲ್ಲೇಖಿಸಿ ಸಿದ್ದರಾಮಯ್ಯ ಆದಿಯಾಗಿ ಸಚಿವರು, ಶಾಸಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...