ಪ್ರವೀಣ್ ಪತ್ನಿಗೆ ಖಾಯಂ ಉದ್ಯೋಗ ಕೊಡಿಸಲಾಗದ ಸಂಸದ ನಳಿನ್ ರಾಜೀನಾಮೆ ನೀಡಲಿ: ಪ್ರತಿಭಾ ಕುಳಾಯಿ

Date:

  • ಬಿಜೆಪಿ ಕೊಡಿಸಿರುವ ಗುತ್ತಿಗೆ ಆಧಾರದ ಕೆಲಸದ ಅವಧಿ ಮುಗಿದಿದೆ
  • ನೂತನ ಸರ್ಕಾರ ಬಂದ ಹಿನ್ನೆಲೆ ಗುತ್ತಿಗೆ ಕೆಲಸಗಳು ರದ್ದಾಗಿವೆ

ಪ್ರವೀಣ್ ನೆಟ್ಟಾರು ಪತ್ನಿ ನೂತನಗೆ ತಮ್ಮ ಸರ್ಕಾರದ ಅವಧಿಯಲ್ಲಿ ಒಂದು ಖಾಯಂ ಉದ್ಯೋಗ ಕೊಡಿಸಲಾಗದ ಸಂಸದ ನಳಿನ್ ಕುಮಾರ್ ಕಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ. ನನ್ನ ವೈಯಕ್ತಿಕ ನೆಲೆಯಲ್ಲಿ ನೂತನ ಅವರಿಗೆ ಕೆಲಸ ಕೊಡಿಸುತ್ತೇನೆ” ಎಂದು ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಹೇಳಿದ್ದಾರೆ.

ಈ ಬಗ್ಗೆ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಪ್ರವೀಣ್ ನೆಟ್ಟಾರು ಅವರು ಬಿಲ್ಲವ ಸಮುದಾಯಕ್ಕೆ ಸೇರಿದವರು. ನೂತನ ಅವರಿಗೆ ಪೂರ್ಣಾವಧಿ ಉದ್ಯೋಗ ಸರ್ಕಾರದಿಂದ ದೊರಕಿಸಿಕೊಡಲು ನಾವು ಶ್ರಮಿಸುತ್ತೇವೆ. ಅವರಿಗೆ ಗುತ್ತಿಗೆ ಆಧಾರದ ಮೇಲೆ ಉದ್ಯೋಗ ನೀಡುವುದು ಬೇಡ” ಎಂದರು.

“ಬಿಜೆಪಿ ತನ್ನ ಅಧಿಕಾರದ ಅವಧಿಯಲ್ಲಿ ನೂತನ ಅವರಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ಕೆಲಸ ನೀಡಿದೆ. ಸಹಜವಾಗಿ ನೂತನ ಸರ್ಕಾರ ಬಂದ ಹಿನ್ನೆಲೆ ಗುತ್ತಿಗೆ ಆಧಾರದ ಮೇಲೆ ನೀಡಿದ ಕೆಲಸಗಳು ರದ್ದಾಗಿವೆ. ಅದರಿಂದ ಅವರೂ ಕೂಡ ಕೆಲಸವನ್ನು ಕಳೆದುಕೊಂಡಿದ್ದಾರೆ” ಎಂದು ಹೇಳಿದರು.  

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಳಿನ್ ಕುಮಾರ್ ಸಂಸದರಾಗಿದ್ದರೂ ನೂತನ ಕುಮಾರಿಗೆ ಪೂರ್ಣಾವಧಿ ಉದ್ಯೋಗ ತೆಗೆಸಿಕೊಡಲು ಸಾಧ್ಯವಾಗಿಲ್ಲ ಎಂಬ ವಿಚಾರವನ್ನು ಗಮನಿಸಿದಾಗ ಅವರ ಸಾಮರ್ಥ್ಯ ಏನೆಂಬುದು ಗೊತ್ತಾಗುತ್ತದೆ. ಕೇಂದ್ರ ಸರ್ಕಾರದ ಸಂಸ್ಥೆಗಳು ಇವೆ ಅದರಲ್ಲಿ ನಳಿನ್ ಕುಮಾರ್ ಕಟೀಲ್ ಉದ್ಯೋಗ ನೀಡಲಿ” ಎಂದು ಪ್ರತಿಭಾ ಕುಳಾಯಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಪ್ರವೀಣ್‌ ಪತ್ನಿಗೆ ಮತ್ತೆ ಉದ್ಯೋಗ ಕೊಡುತ್ತೇವೆ: ಸಿಎಂ ಸಿದ್ಧರಾಮಯ್ಯ

“ನೂತನ ಅವರಿಗೆ ಕೆಲಸ ಕೊಡುವುದು ದೊಡ್ಡ ಕೆಲಸವಲ್ಲ. ಆದರೆ, ಬಿಜೆಪಿ ಕೊಡಿಸಿರುವ ಗುತ್ತಿಗೆ ಆಧಾರದ ಕೆಲಸದ ಅವಧಿ ಮುಗಿದಿದೆ. ಇದು ನಿಜಕ್ಕೂ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ನಾಚಿಕೆ ಪಡಬೇಕಾದ ವಿಷಯ” ಎಂದು ತಿಳಿಸಿದರು.

“ಬಿಜೆಪಿ ಸರ್ಕಾರ ಇದ್ದಾಗ ಮುಖ್ಯಮಂತ್ರಿಯವರಿಗೆ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ನೆಟ್ಟಾರ್ ಪತ್ನಿಯನ್ನು ಕೇಂದ್ರ ಅಥವಾ ರಾಜ್ಯ ಸರ್ಕಾರಿ ಸ್ವಾಮ್ಯದ ಕಂಪೆನಿಗಳಲ್ಲಿ ಕೆಲಸಕ್ಕೆ ಸೇರಿಸಬಹುದಿತ್ತು ಅಥವಾ ಸರ್ಕಾರದಿಂದ ಶಾಶ್ವತ ಉದ್ಯೋಗ ಕಲ್ಪಿಸಬಹುದಿತ್ತು. ಅದನ್ನು ಬಿಟ್ಟು ತಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಹತ್ಯೆಗೀಡಾದಾಗ ಆತನ ಕುಟುಂಬದ ಸದಸ್ಯರಿಗೆ ತಾತ್ಕಾಲಿಕ ನೆಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡಲಾಗಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Fact Check | ಸುಳ್ಳು ಹೇಳಿದ ಪ್ರಧಾನಿ ಮೋದಿ; ಆಂಧ್ರದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಕಿತ್ತು ಮುಸ್ಲಿಮರಿಗೆ ಕೊಟ್ಟಿಲ್ಲ

''ಆಂಧ್ರಪ್ರದೇಶದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಲು ಕಾಂಗ್ರೆಸ್ ಸರ್ಕಾರ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಕಡಿಮೆ...

ಬಿಜೆಪಿಯಲ್ಲಿ ಆತಂಕ ಸೃಷ್ಟಿಸಿದ ಕಾಂಗ್ರೆಸ್ ಪ್ರಣಾಳಿಕೆ: ಮೆಹಬೂಬಾ ಮುಫ್ತಿ

"ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯು ಜನಪರವಾಗಿದ್ದು, ಇದು ಕೋಮು...

ಬೆಂಗಳೂರು | 23 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

23 ವರ್ಷದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ...

ಬೀದರ್‌ | ಮೋದಿಯವರ ಸಬ್ ಕಾ ಸಾಥ್ – ಸಬ್ ಕಾ ವಿಕಾಸ್ ಎನ್ನುವ ಘೋಷಣೆಯೇ ಬೋಗಸ್ : ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಬಿಜೆಪಿ ಪಕ್ಷ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ...