ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರಿಂದಲೇ ಗ್ಯಾರಂಟಿ ಯೋಜನೆಗೆ ಚಾಲನೆ; ಸಿಎಂ ಸಿದ್ದರಾಮಯ್ಯ

Date:

  • ಗ್ಯಾರಂಟಿ ಯೋಜನೆ ಉದ್ಘಾಟನೆ ಕಾರ್ಯಕ್ರಮಗಳ ಪೂರ್ವಭಾವಿ ಸಭೆ ನಡೆಸಿದ ಸಿಎಂ
  • ಯೋಜನಾ ವ್ಯಾಪ್ತಿಯ ಇಲಾಖೆ ಅಧಿಕಾರಿ, ಸಚಿವರಿಂದ ಮಾಹಿತಿ ಪಡೆದ ಮುಖ್ಯಮಂತ್ರಿ

ಜೂನ್ 11ರಂದು ಉದ್ಘಾಟನೆಗೊಳ್ಳಲಿರುವ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಗಳಲ್ಲಿ ಆಯಾಯ ಜಿಲ್ಲೆಯ ಉಸ್ತುವಾರಿ ಸಚಿವರುಗಳು ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಾಲ್ಕು ದಿನಗಳ ಬಳಿಕ ಉದ್ಘಾಟನೆಯಾಗಲಿರುವ ಶಕ್ತಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆ ಕಾರ್ಯಕ್ರಮ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪೂರ್ವಭಾವಿ ಸಭೆ ನಡೆಸಿ ಚರ್ಚಿಸಿದರು.

ಬುಧವಾರ ವಿಧಾನಸೌಧದಲ್ಲಿ ಸಭೆ ನಡೆಸಿದ ಮುಖ್ಯಮಂತ್ರಿಗಳು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಎಚ್. ಮುನಿಯಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಮತ್ತು ಇತರ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 11 ರಂದು ವಿಧಾನಸೌಧದ ಮುಂಭಾಗದಲ್ಲಿ ಚಾಲನೆ ನೀಡಲಿದ್ದಾರೆ. ಹಾಗೆಯೇ ಯೋಜನೆಯ ಲೋಗೋ ಹಾಗೂ ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಮುಖ್ಯಮಂತ್ರಿಗಳು ಅನಾವರಣಗೊಳಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ?:ರೈತ ವಿರೋಧಿ ಕಾಯ್ದೆಗಳ ಮರುಪರಿಶೀಲನೆ: ಸಿಎಂ ಸಿದ್ದರಾಮಯ್ಯ ಭರವಸೆ

ಅಂದು ಮಧ್ಯಾಹ್ನ 1 ಗಂಟೆಯ ಬಳಿಕ ಈ ಸೌಲಭ್ಯವನ್ನು ಮಹಿಳೆಯರು ಪಡೆಯಬಹುದಾಗಿದೆ. ಹಾಗೆಯೇ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ; ರಾಜ್ಯಗಳ ಪರಿಸ್ಥಿತಿಗೆ ಅನುಗುಣವಾಗಿ ಮೋದಿ ಮತಬೇಟೆ

ಭ್ರಷ್ಟಾಚಾರದ ಬೇಟೆಯಾಡುತ್ತೇನೆ, ಕಪ್ಪುಹಣ ಮರಳಿ ತರುತ್ತೇನೆ ಎಂದು ಪಣ ತೊಟ್ಟಿದ್ದ ಮೋದಿ...

ಲೋಕಸಭಾ ಚುನಾವಣೆ | ಏ.26ರಂದು ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಸಂಚಾರ ವ್ಯತ್ಯಯ ಸಾಧ್ಯತೆ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ...

ಲೋಕಸಭಾ ಚುನಾವಣೆ | ಏಪ್ರಿಲ್ 26 ರಂದು ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 26ರಂದು ನಮ್ಮ ಮೆಟ್ರೋ ಸೇವೆ ವಿಸ್ತರಣೆ...

‘ಮೋದಿ ಕಿ ಗ್ಯಾರಂಟಿ’ ಕುರುಹು ಇಲ್ಲದೆ ಕಣ್ಮರೆಯಾದಾಗ ಬಿಜೆಪಿ ಸುಳ್ಳಿನ ಬೆನ್ನತ್ತಿದೆ: ಚಿದಂಬರಂ

'ಮೋದಿ ಕಿ ಗ್ಯಾರಂಟಿ' ಈಗ ಕುರುಹು ಇಲ್ಲದೆ ಕಣ್ಮರೆಯಾಗಿದ್ದು, ಇದರಿಂದಾಗಿ ಆತಂಕಕ್ಕೆ...