ಎರಡು ವರ್ಷದಲ್ಲಿ ಒಮ್ಮೆಯೂ ರಾಜ್ಯದ ಪರವಾಗಿ ಸಂಸದರು ಮಾತನಾಡಿಲ್ಲ: ಸಿಎಂ ಸಿದ್ದರಾಮಯ್ಯ

Date:

ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಎರಡು ವರ್ಷದಲ್ಲಿ ಒಮ್ಮೆಯೂ ರಾಜ್ಯದ ಪರವಾಗಿ ಸಂಸದರು ಮಾತನಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

- Advertisement -

ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, “ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರಿದೆ. ಆದರೂ ಚೂರು, ಪಾರು ಶೇ ಕೇಂದ್ರದ ಹಣವೂ ಬರುತ್ತಿಲ್ಲ. ಈ ನಿರಂತರ ಅನ್ಯಾಯ ಪ್ರಶ್ನಿಸಬೇಕಲ್ಲವಾ ನೀವು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕೇಂದ್ರ ಸರ್ಕಾರಕ್ಕೆ, ಕೇಂದ್ರದ ಮಂತ್ರಿಗಳಿಗೆ ಮತ್ತು ಪ್ರಧಾನ ಮಂತ್ರಿಯವರಿಗೆ ರಾಜ್ಯ ಸರ್ಕಾರದಿಂದ ಮೇಲಿಙದ ಮೇಲೆ ಬರೆದ ಪತ್ರಗಳ ಮಾಹಿತಿ ನೀಡಿದ ಸಿಎಂ, ಪತ್ರವನ್ನು ಸಭೆಯಲ್ಲಿ ಓದಿ ಸಂಸದರ ಗಮನ‌ ಸೆಳೆದರು.

“15 ನೇ ಹಣಕಾಸು ಆಯೋಗದಲ್ಲಿ 5,495 ಕೋಟಿ ರೂಪಾಯಿ ವಿಶೇಷ ಅನುದಾನ ಕೊಡಬೇಕು, ಕೆರೆ ಮತ್ತು ಫೆರಿಫೆರಲ್ ರಿಂಗ್ ರಸ್ತೆಗೆ ಕೊಡಬೇಕಾದ ಹಣ ಸೇರಿ ಒಟ್ಟು 11,495 ಕೋಟಿ ರೂಪಾಯಿ ಕೇಂದ್ರದಿಂದ ಬರಬೇಕಿತ್ತು. ಏನನ್ನೂ ಕೊಡ್ತಾ ಇಲ್ಲ. ನಾವು ರಾಜ್ಯದಿಂದ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೂ ರಾಜ್ಯಕ್ಕೆ ಸಣ್ಣ ನೆರವೂ ಕೇಂದ್ರದಿಂದ ಬರುವುದಿಲ್ಲ , ಕೇಂದ್ರ ಪುರಸ್ಕೃತ ಯೋಜನೆಗಳಿಗೂ ಹಣ ಕೊಡುವುದಿಲ್ಲ, ಆದರೆ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಅಂತ ನೀವೇ ಹೊರಗೆ ಆರೋಪ ಮಾತಾಡ್ತೀರಿ” ಎಂದು ಸಿಎಂ ಟೀಕಿಸಿದರು.

“ನಾನೇ ಎರಡು ಬಾರಿ ಭೇಟಿ ನಿರ್ಮಲಾ ಸೀತರಾಮನ್ ಅವರಿಗೆ ಭೇಟಿ ಮಾಡಿ ಮನವಿ ಮಾಡಿದರೂ ಕೊಡಲಿಲ್ಲ. ರಾಜ್ಯದ ಸಂಸದರು ಒಟ್ಟಾಗಿ ಇದನ್ನು ಕೊಡಿಸಲು ಯತ್ನಿಸಬೇಕು. ಇಷ್ಟು ದಿನಗಳೊಳಗೆ ನೀವು ಕೊಡಿಸಬೇಕಿತ್ತು. ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಬೇಡಿ” ಎಂದು ಸಿಎಂ ತಿಳಿಸಿದರು.

“ರಾಜ್ಯ ಸರ್ಕಾರ ನಿರಂತರವಾಗಿ ಒಟ್ಟು 5,665 ಕೋಟಿ ರೂ. ಪಿಂಚಣಿ ಕೊಡುತ್ತಲೇ ಬರುತ್ತದೆ. ಆದರೆ, 559 ಕೋಟಿ ರೂ. ಮಾತ್ರ ಕೇಂದ್ರ ಸರ್ಕಾರ ಕೊಡುತ್ತದೆ. ಈ ಸಣ್ಣ ಮೊತ್ತವನ್ನೂ ಕೇಂದ್ರ ಸರ್ಕಾರಕ್ಕೆ ಕೊಡಲು ಸಾಧ್ಯವಾಗುತ್ತಿಲ್ಲ. ಇದನ್ನೂ ಎರಡು ವರ್ಷಗಳಿಂದ ಬಾಕಿ ಉಳಿಸಿಕೊಂಡಿದೆ ಕೇಂದ್ರ. ಇದು ಏಕೆ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಹವಾಮಾನ ವರದಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ...