ಮುಡಾ ಪ್ರಕರಣ | ಬಿಜೆಪಿ-ಜೆಡಿಎಸ್‌ನ ರಾಜಕೀಯ ಕುತಂತ್ರ ಹೆಚ್ಚು ದಿನ ನಡೆಯಲ್ಲ: ಡಿ ಕೆ ಶಿವಕುಮಾರ್

Date:

ಮುಡಾ ಪ್ರಕರಣ ಬಿಜೆಪಿ-ಜೆಡಿಎಸ್ ನ ರಾಜಕೀಯ ಕುತಂತ್ರ, ಯಾವ ದಾಖಲೆಯಲ್ಲೂ ಸಿದ್ದರಾಮಯ್ಯ ಅವರ ಸಹಿ ಇಲ್ಲದಿರುವಾಗ ಅವರ ಪಾತ್ರ ಹೇಗೆ ಬರುತ್ತದೆ? ಇದು ಹೆಚ್ಚು ದಿನ ನಡೆಯಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

- Advertisement -

‘ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದೆ’ ಎಂದು ಸುದ್ದಿಗಾರರು ಕೇಳಿದಾಗ, “ಈ ಪ್ರಕರಣದ ಪ್ರಾರಂಭದಲ್ಲೇ ನಾನು ಹೇಳಿದ್ದೆ. ಬಿಜೆಪಿ ಹಾಗೂ ಜೆಡಿಎಸ್ ನವರು ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ಮಾಡಿದಾಗಲೇ, ನಾನು ಏನು ಹೇಳಬೇಕೋ ಹೇಳಿದ್ದೆ. ಅದೊಂದು ರಾಜಕೀಯ ಪ್ರೇರಿತ ಆರೋಪ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಯಾವ ದಾಖಲೆಯಲ್ಲೂ ಸಿದ್ದರಾಮಯ್ಯ ಅವರ ಸಹಿ ಇಲ್ಲದಿರುವಾಗ, ಸಂಬಂಧವೇ ಇಲ್ಲದಿರುವಾಗ ಅವರ ಪಾತ್ರ ಹೇಗೆ ಬರುತ್ತದೆ. ಆಸ್ತಿ ಕಳೆದುಕೊಂಡವರು ಪರಿಹಾರ ಕೇಳುವುದು ಸಹಜ. ನಾವು ನೀವು ಕೂಡ ಕೇಳುತ್ತೇವೆ. ಅವರು ಕೊಟ್ಟಿದ್ದಾರೆ. ನಮಗೆ ಇಂತಹುದೇ ಜಾಗದಲ್ಲಿ ನಿವೇಶನ ನೀಡಿ ಎಂದು ಅವರು ಎಲ್ಲಿಯೂ ಕೇಳಿಲ್ಲ. ಆದರೂ ಅನಗತ್ಯ ಗೊಂದಲ ಬೇಡ ಎಂದು ಅವರು ಈ ನಿವೇಶನಗಳನ್ನು ವಾಪಸ್ ನೀಡಿದ್ದಾರೆ. ಯಾವುದೇ ಪ್ರಕರಣ ದಾಖಲಿಸುವಾಗ ಅದಕ್ಕೆ ಪೂರಕವಾದ ದಾಖಲೆ ಬೇಕು. ಲೋಕಾಯುಕ್ತ ಸಂಸ್ಥೆ ತನ್ನ ಕರ್ತವ್ಯ ಮಾಡಿದೆ. ಬಿಜೆಪಿಯವರು ತಮ್ಮ ಹೋರಾಟ ಮಾಡಿಕೊಳ್ಳಲಿ. ದೆಹಲಿಯಿಂದ ವಕೀಲರನ್ನು ಕರೆಸಿ ವಾದ ಮಂಡಿಸಲು ನಮಗೆ ಗೊತ್ತಿಲ್ಲವೇ?” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮುಡಾ ಪ್ರಕರಣ | ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪ ಸಾಬೀತಾಗಿಲ್ಲ: ಲೋಕಾಯುಕ್ತ ವರದಿ

ಲೋಕಾಯುಕ್ತ ಸಂಸ್ಥೆ ಸರ್ಕಾರದ ತಾಳಕ್ಕೆ ಕುಣಿದಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಸುಪ್ರೀಂ ಕೋರ್ಟ್ ತೀರ್ಪು ಏನಿದೆ ಗೊತ್ತಿದೆಯೇ? ಸ್ಥಳೀಯ ಮಟ್ಟದ ಯಾವುದೇ ಸಂಸ್ಥೆಗಳನ್ನು ದುರ್ಬಲಗೊಳಿಸಬಾರದು ಎಂಬ ನಿರ್ದೇಶನವಿದೆ. ಇನ್ನು ಹೈಕೋರ್ಟ್ ಕೂಡ ಲೋಕಾಯುಕ್ತ ಸ್ವಾಯತ್ತ ಸಂಸ್ಥೆ ಎಂದು ಹೇಳಿದೆ. ಅವರವರು ಅವರ ಕೆಲಸ ಮಾಡುತ್ತಿದ್ದಾರೆ. ಯಾರೇ ಸಿಎಂ ಆಗಿರಲಿ, ಬೊಮ್ಮಾಯಿ ಸಿಎಂ ಆಗಿರಲಿ, ಮುಖ್ಯಮಂತ್ರಿ ಹೇಳಿದಂತೆ ಲೋಕಾಯುಕ್ತ ಪೊಲೀಸರು ಕೇಳುತ್ತಾರಾ? ಇಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪವಿಲ್ಲ. ಇಲ್ಲಿ ಯಾವುದೇ ಅಧಿಕಾರಿ ನೇಮಿಸಬೇಕಾದರೂ ಲೋಕಾಯುಕ್ತರ ಅನುಮತಿ ಮೇರೆಗೆ ಕೆಲಸ ಮಾಡಲಾಗುವುದು. ಇಲ್ಲಿ ಕರ್ನಾಟಕದ ಅಧಿಕಾರಿಗಳನ್ನು ಆಯ್ಕೆ ಮಾಡಲಾಗುವುದೇ ಹೊರತು, ಹೊರ ರಾಜ್ಯದವರನ್ನು ಆಯ್ಕೆ ಮಾಡಲು ಬರುವುದಿಲ್ಲ” ಎಂದು ತಿಳಿಸಿದರು.

ಸರ್ಕಾರದ ಬೊಕ್ಕಸದಲ್ಲಿ ಹಣವಿಲ್ಲ ಎಂಬ ವಿಜಯೇಂದ್ರ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರಿಗೆ ಬೇರೆ ಸಮಯದಲ್ಲಿ ಉತ್ತರ ನೀಡುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...