ಮುಡಾ ಪ್ರಕರಣ | ಲೋಕಾಯುಕ್ತ ವಿಚಾರಣೆಗೆ ಇಂದು ಹಾಜರಾಗಲಿರುವ ಸಿಎಂ ಸಿದ್ದರಾಮಯ್ಯ

Date:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಲೋಕಾಯುಕ್ತ ಪೊಲೀಸರ ವಿಚಾರಣೆಗೆ ಹಾಜರಾಗಲಿದ್ದಾರೆ.

- Advertisement -

ಲೋಕಾಯುಕ್ತ ಕಚೇರಿಗೆ ಇಂದು ಬೆಳಿಗ್ಗೆ 10 ಗಂಟೆಗೆ ತೆರಳಿಲಿರುವ ಸಿದ್ದರಾಮಯ್ಯ ಖುದ್ದು ವಿಚಾರಣೆ ಎದುರಿಸಲಿದ್ದಾರೆ. ತಮ್ಮ ನಾಲ್ಕೂವರೆ ದಶಕಗಳ ಸುದೀರ್ಘ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರು ಇದೇ ಮೊದಲ ಬಾರಿಗೆ ವಿಚಾರಣೆ ಎದುರಿಸುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಿದ್ದರಾಮಯ್ಯ ಅವರು ವಿಚಾರಣೆಗೆ ಹಾಜರಾಗಿರುವ ಹಿನ್ನೆಲೆಯಲ್ಲಿ ಮೈಸೂರು ಲೋಕಾಯುಕ್ತ ಕಚೇರಿ ಸುತ್ತಮುತ್ತ ನಗರ ಪೊಲೀಸರು ಬಿಗಿ ಭದ್ರತೆ ನಿಯೋಜಿಸಿದ್ದಾರೆ. ನಗರದ ಕೃಷ್ಣ ವಿಲಾಸ ರಸ್ತೆ ಮತ್ತು ದಿವಾನ್ಸ್ ರಸ್ತೆ ಜಂಕ್ಷನ್ ನಲ್ಲಿರುವ ಲೋಕಾಯುಕ್ತ ಕಚೇರಿ ಸಂಪರ್ಕಿಸುವ ರಸ್ತೆಗಳನ್ನು ಬಂದ್ ಮಾಡಲಾಗಿದೆ.

ಲೋಕಾಯುಕ್ತ ವಿಚಾರಣೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಮಂಗಳವಾರ ರಾತ್ರಿ ಹುಬ್ಬಳ್ಳಿ ಏರ್‌ಪೋರ್ಟ್‌ನಲ್ಲಿ ಆಪ್ತ ಸಚಿವರಾದ ಬೈರತಿ ಸುರೇಶ್, ಈಶ್ವರ್ ಖಂಡ್ರೆ ಜತೆ ಗೌಪ್ಯ ಸಭೆ ನಡೆಸಿದರು. ಸಭೆ ಬಳಿಕ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...