ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲು

Date:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲಾಗಿದೆ.

- Advertisement -

ನಕಲಿ ಸಹಿ ವಿಚಾರವಾಗಿ ಸಿಎಂ ಪತ್ನಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಬುಧವಾರ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮುಡಾ ಹಗರಣ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸರಣಿ ದೂರುಗಳು ದಾಖಲಾಗುತ್ತಲೇ ಇವೆ. ರಾಜ್ಯಪಾಲರಿಗೆ ನಾಲ್ಕು ದೂರುಗಳು ಈಗಾಗಲೇ ದಾಖಲಾಗಿವೆ. ರಾಜ್ಯಪಾಲರು ಸಿಎಂ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಅನುಮತಿ ತಡೆ ಕೋರಿ ಹೈಕೋರ್ಟ್​ನಲ್ಲಿ ಸಿದ್ದರಾಮಯ್ಯ ಅರ್ಜಿ ಸಲ್ಲಿಸಿದ್ದು, ಗುರುವಾರ ವಿಚಾರಣೆ ನಡೆಯಲಿದೆ.

ಸಿಎಂ ಬಿಡುಗಡೆ ಮಾಡಿದ್ದ ಪತ್ರದಲ್ಲಿ ವೈಟ್ನರ್ ಹಿಂದಿನ ಅಕ್ಷರ ತೋರಿಸಲಾಗಿತ್ತು. ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಎಂಬ ಅಕ್ಷರಗಳ ಮೇಲೆ ವೈಟ್ನರ್ ಹಾಕಲಾಗಿತ್ತು. ಈಗ ಆ ಮೂಲ ಪತ್ರ ತೋರಿಸಿರುವ ಬಗ್ಗೆಯೇ ದೂರು ದಾಖಲಾಗಿದೆ. ನಕಲಿ ದಾಖಲೆ ಸೃಷ್ಟಿ ಹಾಗೂ ಕಡತ ನಾಶದ ಬಗ್ಗೆ ಸ್ನೇಹಮಯಿ ಕೃಷ್ಣ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪಾರ್ವತಿ ಬರೆದಿದ್ದ ಮೂಲ ಪತ್ರ ನಾಶ ಮಾಡಿ, ಇತ್ತೀಚಿಗೆ ಸೃಷ್ಟಿಸಿರುವ ಪತ್ರವನ್ನು ಕಡತಕ್ಕೆ ಸೇರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹಾಗೂ ಸಹಚರರ ವಿರುದ್ಧವೂ ಕ್ರಮ ವಹಿಸುವಂತೆ ಅದೇ ದೂರಿನಲ್ಲಿ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...