ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ: ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ

Date:

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ಅಭಿಯೋಜನಾ ಮಂಜೂರಾತಿ ವಜಾ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯು ಇಂದು ಹೈಕೋರ್ಟ್‌ನಲ್ಲಿ ನಡೆಯುತ್ತಿದೆ. ಊಟದ ವಿರಾಮದ ಹಿನ್ನೆಲೆಯಲ್ಲಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮಧ್ಯಾಹ್ನ 2.30ಕ್ಕೆ ಮುಂದೂಡಿದೆ.

- Advertisement -

ಹೈಕೋರ್ಟ್‌ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠದಿಂದ ವಿಚಾರಣೆ ನಡೆಯುತ್ತಿದ್ದು, ಶನಿವಾರ ಬೆಳಗ್ಗೆ 10.30ಕ್ಕೆ ಆರಂಭಿಸಲಾಗಿತ್ತು. ಈ ನಡುವೆ ಊಟದ ವಿರಾಮಕ್ಕಾಗಿ ಇಂದಿನ ವಿಚಾರಣೆಯನ್ನು 2.30ಕ್ಕೆ ಮುಂದೂಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಿದ್ದರಾಮಯ್ಯ ಪರ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌, ಅಭಿಷೇಕ್ ಮನು ಸಿಂಘ್ವಿ ಅವರು ವಾದ ಮಂಡಿಸಿದರೆ, ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು ರಾಜ್ಯಪಾಲರ ಪರವಾಗಿ ವಾದ ಮಂಡಿಸಿದರು. ಇನ್ನೊಂದೆಡೆ ದೂರುದಾರರ ಪರವಾಗಿ ಮಣೀಂದರ್‌ ಸಿಂಗ್‌, ವಾದ ಮಂಡಿಸಿದ್ದು, ತನಿಖೆ ನಡೆಸಲು ಅನುಮತಿಸಬೇಕು ಎಂದು ಆಗ್ರಹಿಸಿದರು.

ತುಷಾರ್ ಮೆಹ್ತಾ ವಾದ ಏನಿತ್ತು?

ರಾಜ್ಯಪಾಲರ ಪರ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ವಾದ ಮಂಡಿಸುವಾಗ, “ಅಭಿಯೋಜನಾ ಮಂಜೂರಾತಿ ನೀಡುವಾಗ ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. ಅಬ್ರಹಾಂ ಪ್ರಕರಣದಲ್ಲಿ ನೋಟಿಸ್‌ ನೀಡಲಾಗಿದೆ. ಸ್ನೇಹಮಯಿ ಕೃಷ್ಣ, ಪ್ರದೀಪ್‌ ಕುಮಾರ್‌ ಪ್ರಕರಣದಲ್ಲಿ ನೋಟಿಸ್‌ ನೀಡಿಲ್ಲ ಎಂದಿದ್ದಾರೆ. ನಿಮ್ಮ (ಸಿಎಂ) ಪಾತ್ರ ಇಲ್ಲವೆಂದಾರೆ ಅಭಿಯೋಜನಾ ಮಂಜೂರಾತಿಯನ್ನು ಏಕೆ ಪ್ರಶ್ನಿಸಿದ್ದೀರಿ? ರಾಜ್ಯಪಾಲರು ಆತುರದಿಂದ ನಿರ್ಧಾರ ಕೈಗೊಂಡಿದ್ದಾರೆ ಎಂದಿದ್ದಾರೆ. ಇಲ್ಲಿ ಯಾವುದೇ ಆತುರದ ನಿರ್ಧಾರ ಕೈಗೊಂಡಿಲ್ಲ. ಗವರ್ನರ್‌ ಅಥವಾ ಮುಖ್ಯಮಂತ್ರಿ ಹುದ್ದೆಯಂಥ ಸಾಂವಿಧಾನಿಕ ಹುದ್ದೆಗಳನ್ನು ವ್ಯಂಗ್ಯವಾಗಿ ಬಳಕೆ ಮಾಡಬಾರದು ವಾದ ಮಾಡುವ ವೇಳೆ ಪ್ರಸ್ತಾಪಿಸಿದರು.

ಇದೇ ವೇಳೆ ದೂರುದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಮಣೀಂದರ್‌ ಸಿಂಗ್:, “ನಮ್ಮದು ರಂಜಕತೆ ಸೃಷ್ಟಿಸುವ ಉದ್ದೇಶವಲ್ಲ. ತನಿಖೆ ನಡೆಸಬೇಕು ಎಂಬುದಷ್ಟೇ ನಮ್ಮ ಕೋರಿಕೆ ಎಂದಾಗ, ‘ಅಭಿವೃದ್ಧಿಪಡಿಸಿದ ಭೂಮಿ ಮತ್ತೆ ಕಂದಾಯ ಭೂಮಿ ಹೇಗಾಯಿತು?” ಎಂದು ನ್ಯಾಯಮೂರ್ತಿ ಪ್ರಶ್ನಿಸಿದಾಗ, ‘ಅದು ಮ್ಯಾಜಿಕ್.‌ ತನಿಖೆಯಿಂದ ಅದು ತಿಳಿಯಬೇಕು? ನೀವು ತನಿಖೆಗೆ ಅನುಮತಿ ನೀಡಿರುವ ನಿರ್ಧಾರವನ್ನು ಎತ್ತಿಹಿಡಿದರೆ, ತನಿಖಾಧಿಕಾರಿ ತಿಳಿಸಬಹುದು” ಎಂದು ವಾದಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

"ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು...