ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಜಾರಿ ನಿರ್ದೇಶಾನಲಯ (ಇಡಿ) ಕರ್ನಾಟಕ ಹೈಕೋರ್ಟ್ ಅಸ್ತು ಎಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ, ಕುಟುಂಬವು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವೇಳೆ ಅಕ್ರಮ ನಡೆಸಿದ್ದಾರೆ ಎಂಬ ಆರೋಪ ಇದಾಗಿದೆ.
ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಬಿ ಎಂ ಪಾರ್ವತಿ ಅವರಿಗೆ ನಿಯಮ ಬಾಹಿರವಾಗಿ 14 ಪರ್ಯಾಯ ನಿವೇಶನಗಳನ್ನು ನೀಡಿದ್ದಾರೆ ಎಂಬುದು ಆರೋಪವಾಗಿದ್ದು, ಈ ಬಗ್ಗೆ ವಿಸ್ತೃತವಾದ ತನಿಖೆ ನಡೆಸುವ ಅಗತ್ಯವಿದೆ ಎಂದು ಇಡಿ ಹೇಳಿದೆ.
ಇದನ್ನು ಓದಿದ್ದೀರಾ? ಮುಡಾ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಈಗಾಗಲೇ ಈ ಬಗ್ಗೆ ಲೋಕಾಯುಕ್ತ ವರದಿ ಬಂದಿದೆ. ಲೋಕಾಯುಕ್ತ ಎಸ್ ಪಿ ಉದೇಶ್ ಅವರಿಂದ ನ್ಯಾಯಾಲಯಕ್ಕೆ 11,200 ಪುಟಗಳ ವರದಿ ಸಲ್ಲಿಕೆ ಮಾಡಿದ್ದು, ಸಾಕ್ಷ್ಯಾಧಾರ ಕೊರತೆಯಿದೆ. ಆರೋಪ ಸಾಬೀತಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ವರದಿಯಲ್ಲಿ 50 ಮಂದಿಯ ಹೇಳಿಕೆಯನ್ನು ದಾಖಲಿಸಲಾಗಿದೆ.
ಆದರೆ ಲೋಕಾಯುಕ್ತ ವರದಿಯನ್ನು ತಿರಸ್ಕರಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಇಡಿ ಮೇಲ್ಮನವಿ ಸಲ್ಲಿಸಿದೆ. ಈ ನಡುವೆ ಮುಡಾ ಮಾಜಿ ಆಯುಕ್ತ ಡಿ ಬಿ ನಟೇಶ್ ಅವರ ಹೇಳಿಕೆಯನ್ನು ಆಧರಿಸಿ ಹೈಕೋರ್ಟ್ ಇಡಿ ತನಿಖೆಗೆ ಅನುಮತಿ ನೀಡಿದೆ.