ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ವಿಮಾನ ಅಥವಾ ಹೆಲಿಕಾಪ್ಟರ್ನಲ್ಲಿ ನಾನೇನಾದರೂ ದಾಖಲೆ ತಂದಿದ್ದರೆ ರಾಜೀನಾಮೆ ಕೊಡಲು ಸಿದ್ಧ ಎಂದು ಸಚಿವ ಬೈರತಿ ಸುರೇಶ್ ಹೇಳಿದರು.
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, “ನಾನು ದಾಖಲೆ ತಂದಿಲ್ಲ ಎಂಬುದು ಸಾಬೀತಾದರೆ ನನ್ನ ಮೇಲೆ ಆರೋಪಿಸಿದವರು ಏನು ಮಾಡುತ್ತಾರೆ ಹೇಳಲಿ” ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್‌ಗೆ ಸವಾಲು ಹಾಕಿದರು.
“20 ವರ್ಷದಿಂದ ತಪ್ಪುಗಳಾಗುತ್ತಾ ಬಂದಿದೆ. 2005ರವರೆಗಿನ ಎಲ್ಲ ವಿಚಾರ ತನಿಖೆಗೆ ಕೊಡಲು ಪ್ಲ್ಯಾನ್ ಮಾಡುತ್ತಿದ್ದೇನೆ. ಸುಮ್ಮ ಸುಮ್ಮನೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲು ಆಗುತ್ತಾ? ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ತನಿಖಾಧಿಕಾರಿನಾ” ಎಂದು ಪ್ರಶ್ನಿಸಿದರು.
ಸಿಬಿಐಗೆ ವಹಿಸುವಂತೆ ಬಿಜೆಪಿ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿ, “ಐಎಎಸ್ಅಧಿಕಾರಿಗಳಿಗೆ ಕೊಡದೆ ಬಿಜೆಪಿಗರಿಗೆ ಕೊಡಬೇಕಾ? ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಮುಚ್ಚಿ ಹಾಕಲ್ಲ, ಸರ್ಕಾರ ಯಾರನ್ನೂ ಬಿಡಲ್ಲ. ಸ್ವಲ್ಪ ದಿನ ಕಾಯಿರಿ ಎಲ್ಲ ಗೊತ್ತಾಗುತ್ತೆ” ಎಂದರು.

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.