ಮುಡಾ ಹಗರಣ | ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

Date:

ಹೈಕೋರ್ಟ್ ಮತ್ತು ಜನಪ್ರತಿನಿಧಿ ನ್ಯಾಯಾಲಯ ಆದೇಶಗಳ ಹಿನ್ನೆಲೆಯಲ್ಲಿ ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಪ್ರತಿಭಟಿಸಿ ಒತ್ತಾಯ ಮಾಡಿತು.

- Advertisement -

ಸಿಎಂ ರಾಜೀನಾಮೆಗೆ ಒತ್ತಾಯ ಮಾಡಿ ಜೆಡಿಎಸ್ ಕಾರ್ಯಕರ್ತರು ಪಕ್ಷದ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಸಿಎಂ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ನೀಡಿರುವ ಅನುಮತಿಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ತೋರಿಸಿದೆ. ಅಲ್ಲದೆ, ಜನ ಪ್ರತಿನಿಧಿ ನ್ಯಾಯಾಲಯ ಸಿಎಂ ವಿರುದ್ಧ ಎಫ್ ಐ ಆರ್ ದಾಖಲಿಸಿ, ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ಕೊಡಬೇಕು” ಎಂದು ರಮೇಶ್ ಗೌಡ ಆಗ್ರಹಿಸಿದರು.

“ಊರಿಗೆಲ್ಲ ನೈತಿಕತೆಯ ಪಾಠ ಮಾಡುವ ಸಿದ್ದರಾಮಯ್ಯ ಅವರು ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದ ಅವರು; ಅವರು ರಾಜೀನಾಮೆ ಕೊಡದಿದ್ದರೆ ಜೆಡಿಎಸ್ ನಿರಂತರವಾಗಿ ಉಗ್ರ ಹೋರಾಟ ನಡೆಸುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು, ಮುಖ್ಯಮಂತ್ರಿ ಮನೆಗೆ ಯುವ ಮೋರ್ಚಾ ಮುತ್ತಿಗೆ

ಅಧಿಕಾರ ದುರ್ಬಳಕೆ

“ಮುಡಾದಲ್ಲಿ ನಿವೇಶನಗಳನ್ನು ಕಬಳಿಸಲು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ. ಈ ಬಗ್ಗೆ ನ್ಯಾಯಾಲಯಗಳ ಆದೇಶ ಕೂಡ ಸ್ಪಷ್ಟವಾಗಿದೆ. ತಮ್ಮ ಕುಟುಂಬಕ್ಕೆ ಅನುಕೂಲ ಮಾಡಿಕೊಳ್ಳಲು ಸಿಎಂ ಅವರು ಅಧಿಕಾರ ದುರ್ಬಳಕೆ ಜತೆಗೆ ನೈತಿಕ ಮೌಲ್ಯಗಳನ್ನು ಗಾಳಿಗೆ ತೂರಿದ್ದಾರೆ. ಹೀಗಾಗಿ ಒಂದು ಕ್ಷಣವೂ ಅವರು ಅಧಿಕಾರದಲ್ಲಿ ಮುಂದುವರಿಬಾರದು” ಎಂದರು.

“ತಮ್ಮ ಪತ್ನಿ ಅವರಿಗೆ ಅನುಕೂಲ ಆಗುವಂತೆ ನಿರ್ಧಾರ ತೆಗೆದುಕೊಳ್ಳುವ ಪ್ರತಿ ಸಲವೂ ಸಿದ್ದರಾಮಯ್ಯ ಅವರು ಪ್ರಭಾವಿ ಹುದ್ದೆಯಲ್ಲಿ ಇದ್ದರು. ಈ ಪ್ರಭಾವದಿಂದ ಅವರು ತಮ್ಮ ಪತ್ನಿ ಅವರಿಗೆ ಕೇವಲ ಎರಡು ನಿವೇಶನಗಳು ದೊರೆಯುಬೇಕಿದ್ದ ಬದಲಿಗೆ 14 ನಿವೇಶನಗಳು ಸಿಕ್ಕಿವೆ. ಇದನ್ನೇ ನ್ಯಾಯಾಲಯ ಗಮನಿಸಿದೆ” ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯರಾದ ಕೆ ಎನ್ ತಿಪ್ಪೇಸ್ವಾಮಿ, ಟಿ.ಎ.ಶರವಣ ಸೇರಿದಂತೆ ಜೆಡಿಎಸ್ ನಗರ ಘಟಕದ ಅನೇಕ ಪದಾಧಿಕಾರಿಗಳು, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರು, ಇತರೆ ಮುಖಂಡರು ಪ್ರತಿಭಟನೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...