ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದಿದೆ. ಇದರಿಂದಾಗಿ ಸಿದ್ದರಾಮಯ್ಯ ಅವರಿಗೆ ತಲೆನೋವು ಹೆಚ್ಚಾಗಿದೆ.
ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ತನಿಖೆಗೆ ಆಗಸ್ಟ್ 17ರಂದು ರಾಜ್ಯಪಾಲರು ಅನುಮತಿ ನೀಡಿದ್ದರು. ಈ ಅನುಮತಿಯನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು.
ಇದನ್ನು ಓದಿದ್ದೀರಾ? ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ಇಂದು ಹೈಕೋರ್ಟ್ ತೀರ್ಪು
ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಮೊದಲ ಬಾರಿಗೆ ಆಗಸ್ಟ್ 19ರಂದು ಕೈಗೆತ್ತಿಕೊಂಡಿದ್ದು ತೀರ್ಪು ಪ್ರಕಟವಾಗುವವರೆಗೂ ವಿಚಾರಣೆ ಮುಂದೂಡಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಮಧ್ಯಂತರ ಆದೇಶ ನೀಡಿತ್ತು.
ಇದೀಗ ಮಧ್ಯಂತರ ಆದೇಶವನ್ನು ಮುಂದುವರಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಜೊತೆಗೆ “ರಾಜ್ಯಪಾಲರು ತನಿಖೆಗೆ ನೀಡಿರುವ ಮಂಜೂರಾತಿಯಲ್ಲಿ ಯಾವುದೇ ದೋಷವಿಲ್ಲ, ವಿವೇಚನಾಯುತವಾಗಿದೆ. ತನಿಖಾಧಿಕಾರಿಯಿಂದ ಮುಂಚಿತವಾಗಿ ತನಿಖೆ ನಡೆಸಿ ವರದಿ ಪಡೆಯಬೇಕಾದ ಅಗತ್ಯವಿಲ್ಲ” ಎಂದು ಹೇಳಿದೆ.
ಮಧ್ಯಂತರ ಆದೇಶವನ್ನು ಮುಂದುವರಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿರುವುದರಿಂದಾಗಿ ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.
ಸ್ನೇಹಮಯಿ ಕೃಷ್ಣ ಪರವಾಗಿ ಹಿರಿಯ ವಕೀಲೆ ಲಕ್ಷ್ಮಿ ಐಯ್ಯಂಗಾರ್, ಟಿ ಜೆ ಅಬ್ರಹಾಂ ಪರವಾಗಿ ವಕೀಲ ರಂಗನಾಥ್ ರೆಡ್ಡಿ ವಾದಿಸಿದ್ದರು. ಸಿದ್ದರಾಮಯ್ಯ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಡಿಸಿದರು.

ರಾಜ್ಯದ ಸ್ಥಿತಿಯಲ್ಲಿ ಅಲ್ಲೋಲ ಕಲ್ಲೋಲ ಆಗಬಹುದೇ?
ಸತ್ಯಕ್ಕೆ ಜಯವಾಗಲಿ
ಹೀಗಾದರೆ ಮಾತ್ರ ನ್ಯಾಯ ದೊರಕುವುದು ರಾಜಕೀಯ ಕೊನೇಯಾಗಲಿ ಸತ್ಯಕ್ಕೆ ಜಯ ಸಿಗಲಿ
ಹೀಗಾದರೆ ಮಾತ್ರ ನ್ಯಾಯ ದೊರಕುವುದು ರಾಜಕೀಯ ಕೊನೇಯಾಗಲಿ ಸತ್ಯಕ್ಕೆ ಜಯ ಸಿಗಲಿ
ಹೀಗಾದರೆ ಮಾತ್ರ ನ್ಯಾಯ ದೊರಕುವುದು ರಾಜಕೀಯ ಕೊನೇಯಾಗಲಿ