ಮುಡಾ ಪ್ರಕರಣ | ತನಿಖೆ ನಡೆದು ವರದಿ ಬರುವವರೆಗೂ ನಿವೇಶನಗಳು ನಮ್ಮದಲ್ಲ: ಯತೀಂದ್ರ ಸಿದ್ದರಾಮಯ್ಯ

Date:

ಮುಡಾ ನಿವೇಶನ ಹಂಚಿಕೆ ಸಂಬಂಧ ತನಿಖೆ ನಡೆದು ವರದಿ ಬರುವವರೆಗೂ ಆ ನಿವೇಶನಗಳು ನಮ್ಮದಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ತಿಳಿಸಿದರು.

- Advertisement -

ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, “ಈಗಾಗಲೇ ಮುಡಾ ಸೈಟ್​​ ವಾಪಸ್ ಕೊಡುವ ಬಗ್ಗೆ ಹೇಳಾಗಿದೆ. ಅದರ ಅರ್ಥ ನಮಗೆ ಕೊಟ್ಟಿರುವ ನಿವೇಶನವೂ ರದ್ದಾಗಿದೆ ಎಂಬುದು. ಮುಡಾ ನಿವೇಶನ ಹಂಚಿಕೆ ಸಂಬಂಧ ನ್ಯಾಯಾಂಗ ತನಿಖೆ ಆಗುತ್ತಿದೆ. 2005 ರಿಂದ ಯಾರಿಗೆಲ್ಲಾ ನಿವೇಶನ ಕೊಟ್ಟಿದ್ದಾರೆ ಎಂಬುದು ತನಿಖೆಯಲ್ಲಿ ತಿಳಿಯಲಿದೆ. ಈಗ ಆ ನಿವೇಶನಗಳು ನಮ್ಮ ಸುಪರ್ದಿಗೆ ಬರುವುದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

“ನ್ಯಾಯಾಂಗ ತನಿಖೆ ನಡೆದು ವರದಿ ಬರುವವರೆಗೂ ಸೈಟ್ ನಮ್ಮದಾಗುವುದಿಲ್ಲ. ತನಿಖೆ ಮಾಡಿ ನಮ್ಮದು ಎಂದರೆ ನಿವೇಶನ ನಮಗೆ ಕೊಡುತ್ತಾರೆ. ಇಲ್ಲದಿದ್ದರೆ ಕುಟುಂಬದವರು ನ್ಯಾಯಾಲಯದ ಮೊರೆ ಹೋಗುತ್ತೇವೆ. ನಮ್ಮ ತಂದೆ ಭ್ರಷ್ಟಾಚಾರ ಮಾಡಿದ್ದಾರೆಂದು ಉದ್ದೇಶಪೂರ್ವಕವಾಗಿ ಬಿಂಬಿಸುವುದು ಸರಿಯಲ್ಲ” ಎಂದು ಸಮರ್ಥಿಸಿಕೊಂಡರು.

ಮೈಸೂರು ಹತ್ತಿರಕ್ಕೆ ಸಾಗಿದ ಪಾದಯಾತ್ರೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮಗೆ ಆಗ್ರಹಿಸಿ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಬೆಂಗಳೂರಿನಿಂದ ಪಾದಯಾತ್ರೆ ನಡೆಸುತ್ತಿದ್ದು, ಮೈಸೂರು ಸಮೀಪಿಸಿದೆ.

ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಕೌಂಟರ್‌ ಕೊಡಲು ಕಾಂಗ್ರೆಸ್ ಮೈಸೂರಿನಲ್ಲಿ ಇಂದು (ಆ.9) ಜನಾಂದೋಲನ ಸಮಾವೇಶ ಆಯೋಜಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...