ಮುಡಾ ಪ್ರಕರಣ | ಸಂಬಂಧಪಟ್ಟವರ ಪಾಸ್ ಪೋರ್ಟ್ ಮುಟ್ಟುಗೋಲಿಗೆ ಆರ್‌ ಅಶೋಕ್‌ ಆಗ್ರಹ

Date:

Advertisements

ಮುಡಾ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಯ ದೃಷ್ಟಿಯಿಂದ, ಈ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು, ಆರೋಪಿಗಳು ಹಾಗೂ ಸಂಭವನೀಯ ಸಾಕ್ಷಿದರರ ಪಾಸ್ ಪೋರ್ಟ್ ಗಳನ್ನು ಈ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಅವರು ಇ.ಡಿಯನ್ನು ಆಗ್ರಹಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು, “ಮುಡಾದಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನ ಜಾರಿ ನಿರ್ದೇಶನಾಲಯ ತನಿಖೆ ಮಾಡುತ್ತಿದೆ. ಇ.ಡಿ. ಅಧಿಕಾರಿಗಳು ಮೈಸೂರಿನ ಮೂಡಾ ಕಚೇರಿಗೆ, ತಾಲ್ಲೂಕು ಕಚೇರಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನಾ ಕಾರ್ಯ ನಡೆಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ” ಎಂದಿದ್ದಾರೆ.

“ಇ.ಡಿ ತನಿಖೆ ಇಷ್ಟೊಂದು ಚುರುಕುಗೊಂಡಿರುವ ಪರಿಸ್ಥಿತಿಯಲ್ಲಿ ಇಡೀ ಪ್ರಕರಣ ಮತ್ತೊಂದು ಮಜಲು ತಲುಪಿದಂತಾಗಿದೆ. ಅಧಿಕಾರದ ಅತ್ಯುನ್ನತ ಸ್ಥಾನದಲ್ಲಿರುವವರು, ಅವರ ಕುಟುಂಬ ಸದಸ್ಯರು, ಹಿರಿಯ ಅಧಿಕಾರಿಗಳು ಈ ಪ್ರಕರಣದಲ್ಲಿ ಆರೋಪಿಗಳಾಗಿರುವುದರಿಂದ, ಈ ಪ್ರಕರಣ ಎಷ್ಟು ಗಂಭೀರವೋ ಅಷ್ಟೆ ಸೂಕ್ಷ್ಮವೂ ಆಗಿದೆ” ಎಂದು ಅಶೋಕ್‌ ಹೇಳಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X