ಮುಡಾ ಪ್ರಕರಣ | ಲೋಕಾಯುಕ್ತ ವಿಚಾರಣೆಗೆ ಹಾಜರಾದ ಸಿದ್ದರಾಮಯ್ಯ

Date:

ಮುಡಾ ನಿವೇಶನ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಮೈಸೂರಿನ ಲೋಕಾಯುಕ್ತ ಎಸ್.ಪಿ. ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

- Advertisement -

ಬೆಳಿಗ್ಗೆ 10.10ಕ್ಕೆ ಅವರು ವಿಚಾರಣೆಗೆ ಬಂದಿದ್ದು, ಲೋಕಾಯುಕ್ತ ಎಸ್.ಪಿ. ಟಿ.ಜೆ. ಉದೇಶ್ ನೇತೃತ್ವದ ತಂಡವು ಅವರನ್ನು ವಿಚಾರಣೆಗೆ ಒಳಪಡಿಸುತ್ತಿದೆ. ತಮ್ಮ ನಾಲ್ಕೂವರೆ ದಶಕಗಳ ಸುದೀರ್ಘ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರು ಇದೇ ಮೊದಲ ಬಾರಿಗೆ ವಿಚಾರಣೆ ಎದುರಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸಿದ್ದರಾಮಯ್ಯ ಈ ಪ್ರಕರಣದಲ್ಲಿ ಎ1 ಆರೋಪಿ ಆಗಿದ್ದು, ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ಪತ್ನಿಗೆ ನಿವೇಶನ ಕೊಡಿಸಿದ ಆರೋಪ ಅವರ ಮೇಲಿದೆ. ಪ್ರಕರಣದ ಇತರ ಆರೋಪಿಗಳಾದ ಬಿ.ಎಂ. ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವರಾಜು ಅವರ ವಿಚಾರಣೆಯು ಈಗಾಗಲೇ ಪೂರ್ಣಗೊಂಡಿದೆ.

ಮುಡಾದಿಂದ 50:50 ಅನುಪಾತದಲ್ಲಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರು 14 ಬದಲಿ ನಿವೇಶನ ಪಡೆದ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ನ್ಯಾಯಾಲಯದ ನಿರ್ದೇಶನದಂತೆ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...