ಮುಡಾ ಪ್ರಕರಣ | ನ್ಯಾಯಾಲಯಕ್ಕೆ ‘ಬಿ-ರಿಪೋರ್ಟ್‌’ ಸಲ್ಲಿಕೆ, ಸಿದ್ದರಾಮಯ್ಯ ಕುಟುಂಬ ಆರೋಪ ಮುಕ್ತ

Date:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಅಕ್ರಮವಾಗಿ ನಿವೇಶನಗಳನ್ನು ಪಡೆದಿರುವ ಆರೋಪಕ್ಕೆ ಗುರಿಯಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಭಾವಮೈದುನ ಬಿ ಎಂ ಮಲ್ಲಿಕಾರ್ಜುನ ಹಾಗೂ ವಿವಾದ ಭೂಮಿಯ ಮಾಲೀಕ ಜೆ ದೇವರಾಜು ಅವರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಮೈಸೂರು ಲೋಕಾಯುಕ್ತ ಪೊಲೀಸರು ಆರೋಪ ಮುಕ್ತಗೊಳಿಸಿದ್ದಾರೆ.

- Advertisement -

ಆರೋಪಕ್ಕೆ ಸಂಬಂಧಿಸಿದಂತೆ 50ಕ್ಕೂ ಹೆಚ್ಚು ಸಾಕ್ಷಿಗಳ ವಿಚಾರಣೆ ನಡೆಸಿ ಸಿದ್ಧಪಡಿಸಲಾಗಿರುವ ಒಟ್ಟು 27 ಸಂಪುಟಗಳ ವರದಿಯು ಎಲ್ಲ ದಸ್ತಾವೇಜುಗಳೂ ಸೇರಿದಂತೆ ಒಟ್ಟು 11 ಸಾವಿರ ಪುಟಗಳನ್ನು ಒಳಗೊಂಡಿದೆ. ಈ ಕಂತೆಯನ್ನು ತನಿಖಾಧಿಕಾರಿ ಹಾಗೂ ಮೈಸೂರು ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದೇಶ್ ಅವರು ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರಿಗೆ ಫೆ.20ರಂದು ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ವಿಚಾರಣೆ ನಡೆಸಿದ ಲೋಕಾಯುಕ್ತ ತನಿಖಾಧಿಕಾರಿಗಳು ಪ್ರಕರಣದ ನಾಲ್ವರು ಆರೋಪಿಗಳಾದ ಸಿದ್ದರಾಮಯ್ಯ (ಎ-1 ಆರೋಪಿ), ಪಾರ್ವತಿ (ಎ-2 ಆರೋಪಿ), ಮಲ್ಲಿಕಾರ್ಜುನ ಸ್ವಾಮಿ (ಎ-3 ಆರೋಪಿ) ಹಾಗೂ ದೇವರಾಜು (ಎ-4 ಆರೋಪಿ) ವಿರುದ್ಧದ ಆರೋಪಗಳನ್ನು ಸಾಬೀತು ಮಾಡುವಂತಹ ಸಾಕ್ಷ್ಯಗಳು ತನಿಖೆ ವೇಳೆ ಪತ್ತೆಯಾಗಿಲ್ಲ. ಇದು ಸಿವಿಲ್ ಸ್ವರೂಪದ ಪ್ರಕರಣವಾಗಿದೆ. ಕಾನೂನಿನ ತಪ್ಪು ತಿಳಿವಳಿಕೆಯಿಂದ ಆಗಿರುವಂತಹದ್ದಾಗಿದೆ. ತನಿಖೆ ನಡೆಸಲು ಮತ್ತು ಕ್ರಮ ತೆಗೆದುಕೊಳ್ಳಲು ತಕ್ಕುದಾದ ಪ್ರಕರಣವಾಗಿರುವುದಿಲ್ಲ.ಇದರಡಿಯಲ್ಲಿ ತನಿಖೆ ನಡೆಸದೆ ವಜಾ ಮಾಡಿದ ಮೊಕದ್ದಮೆಗಳು ಬರುತ್ತವೆ ಎಂದು ಐದು ಕಾರಣಗಳನ್ನು ನೀಡಿ ಆರೋಪಿಗಳನ್ನು ದೋಷಮುಕ್ತಗೊಳಿಸಿ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ವರದಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮುಡಾ ಪ್ರಕರಣ ಮುಂದೇನು – ಸಿಎಂ ಕುಟುಂಬಕ್ಕೆ ನ್ಯಾಯಾಲಯ ಕ್ಲೀನ್‌ಚಿಟ್ ನೀಡುತ್ತಾ?

ʼʼಮೈಸೂರು ತಾಲ್ಲೂಕಿನ ಕೆಸರೆ ಗ್ರಾಮದ 3.16 ಎಕರೆ ಜಮೀನಿಗೆ ಪ್ರತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಮುಡಾ ಅಕ್ರಮವಾಗಿ ಬದಲಿ 14 ನಿವೇಶನಗಳನ್ನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಸಿದ್ದರಾಮಯ್ಯ ಪ್ರಭಾವ ಬೀರಿದ್ದು, ತನಿಖೆ ನಡೆಸಬೇಕು” ಎಂದು ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಆಗಸ್ಟ್‌ 8, 2024ರಂದು ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ್ದರು. ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ವಿಶೇಷ ತನಿಖಾ ದಳ ಅಥವಾ ಬೇರಾವುದೇ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆಗೆ ಆದೇಶಿಸಬೇಕು ಎಂದು ದೂರಿನಲ್ಲಿ ಸ್ನೇಹಮಯಿ ಕೃಷ್ಣ ಕೋರಿದ್ದರು.

ಪೊಲೀಸ್‌ ಕೈಪಿಡಿ1963ರ ಪ್ರಕಾರ ಮೂರು ರೀತಿಯಲ್ಲಿ ತನಿಖಾ ಸಂಸ್ಥೆಗಳು ನ್ಯಾಯಾಲಯಕ್ಕೆ ವರದಿ ನೀಡುತ್ತವೆ. ಮೊದಲನೆಯದ್ದು 'ಎ-ರಿಪೋರ್ಟ್‌' ಇಲ್ಲಿ ಆರೋಪಗಳನ್ನು ಉಲ್ಲೇಖಿಸಿ ವರದಿ ನೀಡಲಾಗುತ್ತದೆ. ಇದನ್ನು ಚಾರ್ಜ್‌ಶೀಟ್‌ ಅಂತಲೂ ಕರೆಯಲಾಗುತ್ತದೆ. ಪ್ರಕರಣ ತನಿಖೆಗೆ ಯೋಗ್ಯವಾಗಿಲ್ಲ ಅಥವಾ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದಾಗ 'ಬಿ-ರಿಪೋರ್ಟ್‌' (ಸುಳ್ಳು ಪ್ರಕರಣ) ಎಂದು ವರದಿ ಸಿದ್ಧವಾಗುತ್ತದೆ. ಇನ್ನೊಂದು 'ಸಿ - ರಿಪೋರ್ಟ್‌' ಇದೆ. ಉದಾ: ಒಂದು ಬೈಕ್‌ ಕಳ್ಳತನ ಆಗುತ್ತದೆ. ಈ ಬಗ್ಗೆ ದೂರು ದಾಖಲಾಗುತ್ತದೆ, ನಂತರ ಎಫ್‌ಐಆರ್‌ ಆಗುತ್ತದೆ, ತದನಂತರ ತನಿಖೆ ನಡೆಯುತ್ತದೆ, ಕೊನೆಗೆ ಬೈಕ್‌ ಆರೋಪಿ ಮತ್ತು ಬೈಕ್‌ ಸಿಗುವುದೇ ಇಲ್ಲ. ಆಗ 'ಸಿ-ರಿಪೋರ್ಟ್‌' ಹಾಕಲಾಗುತ್ತದೆ. ಅಂದರೆ ನಾಪತ್ತೆ ಪ್ರಕರಣ ಎಂದು ನಮೂದಿಸಿ ಪ್ರಕರಣ ಕ್ಲೋಸ್‌ ಮಾಡಲು ತಿಳಿಸಲಾಗುತ್ತದೆ.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ ರಾಹುಲ್ ಗಾಂಧಿ ಸಮರ!

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...