ಮುಡಾ | ಸಿಎಂ ಪತ್ನಿ ಪಾರ್ವತಿ, ಬೈರತಿ ಸುರೇಶ್‌ಗೆ ಇ.ಡಿ ಸಮನ್ಸ್​; ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ

Date:

ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ನೀಡಿದ್ದ ಇ.ಡಿ ಸಮನ್ಸ್​ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

- Advertisement -

ಮುಡಾ ಹಗರಣದಲ್ಲಿ ಎ2 ಆರೋಪಿಯಾಗಿರುವ ಪಾರ್ವತಿ ಸಿದ್ದರಾಮಯ್ಯ ಮತ್ತು ಮುಡಾದಿಂದ ಕಡತಗಳನ್ನು ತೆಗೆದುಕೊಂಡು ಹೋಗಿರುವ ಆರೋಪದ ಮೇಲೆ ಸಚಿವ ಬೈರತಿ ಸುರೇಶ್‌ ಅವರಿಗೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಇ.ಡಿ ನೋಟಿಸ್‌ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇ.ಡಿ ನೋಟಿಸ್​ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶ್ ಹೈಕೋರ್ಟ್​​ನ​ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಎರಡು ಅರ್ಜಿ ವಿಚಾರಣೆ ನಡೆಸಿ, ಮುಂದಿನ ವಿಚಾರಣೆವರೆಗೆ ಅಂದರೆ ಫೆಬ್ರವರಿ 10ರ ವರೆಗೆ ಇ.ಡಿ ಸಮನ್ಸ್​ಗೆ ತಡೆಯಾಜ್ಞೆ ನೀಡಿದರು.

ಸಿಎಂ ಪತ್ನಿ ಪಾರ್ವತಿ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದ್ದು, “14 ಸೈಟ್ ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪವಿದೆ. ಅಪರಾಧದಿಂದ ಗಳಿಸಿದ ಹಣವಿಲ್ಲದಿದ್ದರೂ ತನಿಖೆ ನಡೆಸುತ್ತಿದೆ. ಹೀಗಾಗಿ ತನಿಖೆಗೆ ತಡೆ ನೀಡುವಂತೆ” ಕೋರ್ಟ್​ಗೆ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಮುಡಾ ಪ್ರಕರಣ ಸಿಬಿಐ ತನಿಖೆಗೆ ಮನವಿ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಸಚಿವ ಬೈರತಿ ಸುರೇಶ್ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ, “ಬೈರತಿ ಸುರೇಶ್ ಯಾವುದೇ ಅನುಸೂಚಿತ ಕೇಸ್‌ನ ಆರೋಪಿಯಲ್ಲ. ಆರೋಪಿಯಲ್ಲದಿದ್ದರೂ ಇ.ಡಿಯಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಇದೇ ಮಾದರಿಯ ಮತ್ತೊಂದು ಕೇಸ್‌ನಲ್ಲಿ ಸಮನ್ಸ್ ರದ್ದುಪಡಿಸಲಾಗಿದೆ. ಡಾ.ನಟೇಶ್‌ಗೆ ಇ.ಡಿ ನೀಡಿದ್ದ ಸಮನ್ಸ್‌ನ್ನು ಹೈಕೋರ್ಟ್ ರದ್ದುಪಡಿಸಿದೆ. ಹೀಗಾಗಿ ಮುಂದಿನ ವಿಚಾರಣೆವರೆಗೂ ಇ.ಡಿಯಿಂದ ರಕ್ಷಣೆ ಒದಗಿಸಬೇಕು” ಎಂದು ಮನವಿ ಮಾಡಿದರು.

ಸಿಎಂ ಪ್ರಕರಣದ ವಿಚಾರಣೆ ನಡೆಯುವಾಗ ಇದರಲ್ಲೇಕೆ ಮುಂದುವರಿಯುತ್ತೀರಾ? ಅಪರಾಧದಿಂದ ಗಳಿಸಿದ ಸಂಪತ್ತು ಈಗಿಲ್ಲವಲ್ಲ. ಇ.ಡಿ ತನಿಖೆಯಿಂದ ಹೈಕೋರ್ಟ್ ಕಾಯ್ದಿರಿಸಿರುವ ಕೇಸ್‌ಗೆ ಹಾನಿಯಾಗಬಾರದು. ಲೋಕಾಯುಕ್ತ ಪೊಲೀಸರು ಅಂತಿಮ ವರದಿ ಸಲ್ಲಿಸುವಂತಿಲ್ಲವೆಂದು ಆದೇಶ ನೀಡಿದ್ದೇನೆ. ಈಗ ಇ.ಡಿ ತನಿಖೆಗೆ ಅವಕಾಶ ನೀಡುವುದು ಹೇಗೆ? ಈಗಲೇ ತನಿಖೆ ನಡೆಸಬೇಕಾದ ತುರ್ತು ಅಗತ್ಯವೇನಿದೆ” ಎಂದು ನ್ಯಾ. ಎಂ.ನಾಗಪ್ರಸನ್ನ ಪ್ರಶ್ನಿಸಿದರು.

“ವಿಚಾರಣೆಗೆ ಹಾಜರಾಗಿ ದಾಖಲೆಗಳನ್ನು ಹಾಜರುಪಡಿಸಿ ಎಂದಷ್ಟೇ ಹೇಳಿದ್ದೇವೆ. ಇದರಿಂದ ಹೈಕೋರ್ಟ್ ಮುಂದಿರುವ ಕೇಸ್‌ಗೆ ಅಡ್ಡಿಯಾಗುವುದಿಲ್ಲ” ಎಂದು ಇ.ಡಿ ಪರ ಎಎಸ್‌ಜಿ ಅರವಿಂದ್ ಕಾಮತ್ ಸ್ಪಷ್ಟಪಡಿಸಿದರು.

“ಸಿಬಿಐ ತನಿಖೆಗೆ ಒಪ್ಪಿಸುವ ಬಗ್ಗೆ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ. ಲೋಕಾಯುಕ್ತ ಪೊಲೀಸರ ತನಿಖೆಯ ವರದಿ ಸಲ್ಲಿಕೆ ಮುಂದೂಡಿದ್ದೇವೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಅಂತಿಮ ವರದಿ ಸಲ್ಲಿಕೆ ಮುಂದೂಡಿದ್ದೇವೆ. ಇಡಿ ನಡೆಸುತ್ತಿರುವ ತನಿಖೆ ಲೋಕಾಯುಕ್ತ ಪೊಲೀಸ್ ಎಫ್‌ಐಆರ್ ಆಧರಿಸಿದೆ. ಹೀಗಾಗಿ ಇಡಿ ಸಮನ್ಸ್ ನಿಂದ ಹೈಕೋರ್ಟ್ ಕಾಯ್ದಿರಿಸುವ ಕೇಸ್ ಮೇಲೆ ಪರಿಣಾಮವಾಗಬಹುದು. ಡಾ. ನಟೇಶ್ ಪ್ರಕರಣದಲ್ಲಿ ಹೈಕೋರ್ಟ್ ಇಡಿ ಸಮನ್ಸ್ ರದ್ದುಪಡಿಸಿದೆ. ಇಡಿ ಹೇಳಿಕೆ ದಾಖಲಿಸಿಕೊಳ್ಳುತ್ತಿದೆ ಅಷ್ಟೇ ಎಂದು ಇಡಿ ಪರ ವಕೀಲರು ಹೇಳಿದ್ದಾರೆ. ಆದ್ರೆ, ಇ.ಡಿ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ” ನ್ಯಾಯಾಧೀಶರು ತಿಳಿಸಿ ವಿಚಾರಣೆ ಮುಂದೂಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...