ಮುಡಾ ಅಕ್ರಮ | ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

Date:

ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಎಂಬುವರು ಸಿಎಂ ವಿರುದ್ಧ ರಾಜ್ಯಪಾಲ ಥಾವರ್​ ಚಂದ್​ ಗೆಹಲೋಟ್‌ ಅವರಿಗೆ ದೂರು ನೀಡಿದ್ದು, ಅಕ್ರಮ ಡಿನೋಟಿಫೈ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.

- Advertisement -

ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ಸಲ್ಲಿಸಿರುವ ಎರಡನೇ ದೂರು ಇದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದಕ್ಕೂ ಮೊದಲು ವಕೀಲ ಟಿ ಜೆ ಅಬ್ರಹಾಂ ಅವರು ಸಿಎಂ ವಿರುದ್ಧ ದೂರು ಸಲ್ಲಿಸಿ, ಈ ಪ್ರಕರಣವನ್ನು ಪ್ರಾಸಿಕ್ಯೂಶನ್‌ಗೆ ನೀಡಲು ಅವಕಾಶ ಕೊಡಬೇಕು ಎಂದು ಕೋರಿದ್ದರು. ಈ ದೂರು ಆಧರಿಸಿ ರಾಜ್ಯಪಾಲ ಥಾವರ್‌ ಚಂದ್‌ ಗೆಲ್ಹೋಟ್ ಸಿಎಂಗೆ ಶೋಕಾಸ್ ನೋಟಿಸ್ ನೀಡಿದ್ದರು.

ಸ್ನೇಹಮಯಿ ಕೃಷ್ಣ ದೂರು ಏನು?

ಮುಡಾದಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬೀರಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ.

1979ರಲ್ಲಿ ಮೈಸೂರು ತಾಲೂಕು ವರುಣದ ಉತ್ತನಹಳ್ಳಿಯಲ್ಲಿ ಆಶ್ರಯ ಮನೆಗಳಿಗಾಗಿ ಭೂಸ್ವಾಧೀನ ಮಾಡಿದ್ದ ಜಮೀನಿಗೆ 30 ವರ್ಷದ ಬಳಿಕ ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಮಾರಪ್ಪ ಎಂಬುವವರ ಹೆಸರಿಗೆ 1.39 ಎಕರೆ ಜಮೀನು ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು. ಮಾರಪ್ಪ ಎಂಬುವವರಿಗೆ ಸಂಬಂಧವೇ ಇರದಿದ್ದರೂ ನಕಲಿ ದಾಖಲೆ ಆಧರಿಸಿ ಮರಪ್ಪ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ ಎಂದು ದೂರುದಾರ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಪತ್ರ ಆಧರಿಸಿ ಜಿಲ್ಲಾಡಳಿತ 14 ತಿಂಗಳ ಬಳಿಕ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಮಾರಪ್ಪ ಎಂಬುವರ ಹೆಸರಿಗೆ 1.39 ಎಕರೆ ಜಮೀನನ್ನು ಡಿನೋಟಿಫೈ ಮಾಡಿದ್ದಾರೆ. ಮೂಲ ಜಮೀನಿನ ಮಾಲೀಕರು ಮಾರಪ್ಪ ಅಲ್ಲ, ಆದರೂ ಅವರ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ. ಈ ವಿಚಾರ ತಿಳಿದ ಫಲಾನುಭವಿಗಳು 2011ರಲ್ಲಿ ಅಂದಿನ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು, ನಮ್ಮ ಜಮೀನು ನಮಗೆ ನೀಡುವಂತೆ ಮನವಿ ಮಾಡುತ್ತಾರೆ ಎಂದು ಸ್ನೇಹಮಯಿ ಕೃಷ್ಣ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...