ಮುಡಾ ಅಕ್ರಮ | ಸಿಎಂ ರಾಜೀನಾಮೆಗೆ ಆಗ್ರಹಿಸಿ ಜು.12ರಂದು ಬಿಜೆಪಿ ಪ್ರತಿಭಟನೆ: ವಿಜಯೇಂದ್ರ

Date:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಅವ್ಯವಹಾರ ಖಂಡಿಸಿ ಜು.12ರಂದು ಮೈಸೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

- Advertisement -

ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಬುಧವಾರ ಮಾತನಾಡಿ, “ಖುಷಿ ಬಂದಂತೆ ನಿವೇಶನ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಈ ಹಗರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಇದೇ 12ರಂದು ನಾನು, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಬಿಜೆಪಿ ಶಾಸಕರು, ಕಾರ್ಯಕರ್ತರು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

“ಮುಖ್ಯಮಂತ್ರಿಗಳು ಬಡವರ ಬಗ್ಗೆ ಮೊಸಳೆಕಣ್ಣೀರು ಹಾಕುತ್ತಿದ್ದಾರೆ. ಬಡವರಿಗೆ ನಿವೇಶನ ಹಂಚಬೇಕು. ಈಗಾಗಲೇ ನಡೆದ ನಿವೇಶನ ಹಂಚಿಕೆಯನ್ನು ರದ್ದು ಮಾಡಬೇಕು. ಸಿಎಂ, ಅವರ ಪತ್ನಿ ಮೇಲೆ ಆರೋಪ ಇರುವ ಕಾರಣ ಮತ್ತೊಂದು ಎಸ್‍ಐಟಿ ಮಾಡಿ ತನಿಖೆ ನಡೆಸುವುದು ಸೂಕ್ತವಲ್ಲ. ಈ ಭಾರಿ ಮೊತ್ತದ ಹಗರಣದ ತನಿಖೆಯನ್ನು ತಕ್ಷಣವೇ ಸಿಬಿಐಗೆ ಕೊಡಬೇಕು” ಎಂದು ಆಗ್ರಹಿಸಿದರು.

“ಶಾಸಕರು, ಸಿಎಂ ಪರಮಾಪ್ತರು ನಿನ್ನೆ ಪ್ರೆಸ್ ಮೀಟ್ ಮಾಡಿದ್ದಾರೆ. 92ರಲ್ಲಿ ಭೂ ವಶಕ್ಕೆ ಪಡೆಯುವ ಕೆಲಸ ಶುರುವಾಗಿದೆ. 2004ರಲ್ಲಿ ಪಾರ್ವತಮ್ಮ ಅವರ ಅಣ್ಣ ಜಮೀನು ಖರೀದಿ ಮಾಡಿದ್ದಾರೆ. ಮೂಡಾ ಸ್ವಾಧೀನದಲ್ಲಿದ್ದ ಜಾಗವನ್ನು ಮಲ್ಲಿಕಾರ್ಜುನ ಸ್ವಾಮಿ ಅವರು ಖರೀದಿ ಮಾಡಿದ್ದು ಹೇಗೆ? 2009- 10ರಲ್ಲಿ ಗಿಫ್ಟ್ ಡೀಡ್ ಆದಾಗಲೂ ಸಹ ಈ ಜಾಗವು ಮೂಡಾ ಆರ್‌ಟಿಸಿಯಲ್ಲಿ ನಮೂದಾಗಿತ್ತು. ಭೂಮಿ ಖರೀದಿ ಆಗಿ ಕನ್ವರ್ಷನ್ ಆಗಿತ್ತು. ಗಿಫ್ಟ್ ಡೀಡ್ ಎಂದು ಮಾಹಿತಿ ಕೊಡುವಾಗಲೂ ಅದು ಕೃಷಿ ಭೂಮಿ ಆಗಿರಲಿಲ್ಲ. ಇದು ಕೂಡ ತಪ್ಪು ಮಾಹಿತಿ” ಎಂದರು.

2 ನಿವೇಶನಕ್ಕೆ ಅರ್ಹತೆ- 14 ನಿವೇಶನ ಹಂಚಿಕೆ

“2022ರ ಜನವರಿ 12ರಂದು ಕ್ರಯಪತ್ರ ಆಗಿದ್ದು, ಇದರಲ್ಲಿ ಗಮನಿಸಬೇಕಾದ ಅಂಶ ಏನೆಂದರೆ ಮೂಡಾ ಪ್ರೋತ್ಸಾಹದಾಯಕ ಯೋಜನೆಯಡಿಯಲ್ಲಿ ನಿಯಮಗಳು 1991ರ ಮೇರೆಗೆ ಎಂದು ಉಲ್ಲೇಖಿಸಿ 14 ಸೈಟ್ ಕೊಟ್ಟಿದ್ದಾರೆ. ಇದು ಕ್ರಯಪತ್ರದಲ್ಲಿ ಉಲ್ಲೇಖವಾಗಿದೆ. ಆದರೆ, 1991ರ ಕಾನೂನು ಪ್ರಕಾರ ಅವರಿಗೆ 1 ಎಕರೆ ಮೀರಿದ ಜಮೀನಾದರೆ 40-60 ಒಂದೇ ನಿವೇಶನ ಕೊಡಬೇಕು. 3ರಿಂದ 4 ಎಕರೆ ಆಗಿದ್ದರೆ 4,800 ಅಡಿಯ ನಿವೇಶನ (40-60ರ ಎರಡು ನಿವೇಶನ) ಕೊಡಬೇಕಿತ್ತು. ಮುಖ್ಯಮಂತ್ರಿಯವರ ಧರ್ಮಪತ್ನಿ ಪಾರ್ವತಮ್ಮ ಅವರಿಗೆ 2 ನಿವೇಶನ ಮಾತ್ರ ಕೊಡಬೇಕಿತ್ತು. 2 ನಿವೇಶನದ ಬದಲು 14 ನಿವೇಶನ ಕೊಟ್ಟಿದ್ದು, ಇದು ಸಂಪೂರ್ಣ ಕಾನೂನು ಬಾಹಿರ” ಎಂದು ವಿಜಯೇಂದ್ರ ಆಕ್ಷೇಪಿಸಿದರು.

ಮೈಸೂರಿನದು ಲ್ಯಾಂಡ್ ಸ್ಕ್ಯಾಮ್

“ಮೂಡಾ ಪ್ರಾಧಿಕಾರದ ಭೂಮಿ ಸಂಬಂಧ ದೊಡ್ಡ ಹಗರಣ ಅಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯನವರು ಅನೇಕ ತಪ್ಪು ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿಗಳ ಮುಖವಾಡ ಕಳಚಿಬಿದ್ದಿದೆ. ಹೇಗಾದರೂ ಬೆಲೆಬಾಳುವ ನಿವೇಶನ ಕಬಳಿಸಬೇಕು ಎಂದುಕೊಂಡು ನಿಯಮ ಗಾಳಿಗೆ ತೂರಿ ಅಕ್ರಮ ನಡೆಸಿದ್ದಾರೆ. ಈ ವಿಷಯದಲ್ಲಿ ಮುಖ್ಯಮಂತ್ರಿಗಳು ಜನತೆಗೆ ಉತ್ತರಿಸಬೇಕು. ಈ ಹಗರಣಕ್ಕೆ ಹೊಣೆ ಹೊರಬೇಕು” ಎಂದು ಒತ್ತಾಯಿಸಿದರು.

ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ ಎನ್ ಅಶ್ವತ್ಥನಾರಾಯಣ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಮಾಜಿ ಸಚಿವ ನಾರಾಯಣಗೌಡ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಹರೀಶ್ ಪೂಂಜ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಮಂಜುಳಾ ಅವರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಿಡಿಪಿ ಅಂಕಿಅಂಶಗಳ ಆಚೆಗಿನ ವಾಸ್ತವ: ಭಾರತದ ಆರ್ಥಿಕ ಸವಾಲುಗಳ ಕುರಿತು ರಘುರಾಮ್ ರಾಜನ್ ಒಳನೋಟ

ಜಾಗತಿಕ ಆರ್ಥಿಕತೆಯು ಭೌಗೋಳಿಕ-ರಾಜಕೀಯ ಸಂಘರ್ಷಗಳು ಮತ್ತು ತಂತ್ರಜ್ಞಾನದ ಕ್ಷಿಪ್ರ ಬದಲಾವಣೆಗಳ ನಡುವೆ...

ವಿಧಾನ ಪರಿಷತ್ ಸದಸ್ಯರಾಗಿ ರಂಗನಾಥ್, ನಮೋಶಿ, ಸಂಕನೂರ ಮತ್ತು ಸುರೇಶ್ ಪ್ರಮಾಣ ವಚನ ಸ್ವೀಕಾರ

ವಿಧಾನ ಪರಿಷತ್ ಸದಸ್ಯರಾಗಿ ಎ.ಪಿ. ರಂಗನಾಥ್, ಶಶೀಲ್ ಜಿ. ನಮೋಶಿ, ಎಸ್.ವಿ....

ಹಾಸನ | ಕಾಡಾನೆ ದಾಳಿ: ಕಾರ್ಮಿಕ ಸಾವು; ಗ್ರಾಮಸ್ಥರ ಆಕ್ರೋಶ 

ಬೇಲೂರು ತಾಲೂಕಿನಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬ ವ್ಯಕ್ತಿ ಸಾವನಪ್ಪಿರುವ ಘಟನೆ ನಡೆದಿದೆ....

ಶಿವಸೇನೆ ಪಕ್ಷಾಂತರದ ವದಂತಿಗಳ ನಡುವೆ ಪುಣೆಯಲ್ಲಿ ಅಮಿತ್ ಶಾ-ಏಕನಾಥ್ ಶಿಂದೆ ಭೇಟಿ

ಶಿವಸೇನೆಯಲ್ಲಿನ (ಉದ್ಧವ್ ಬಣ) ಪಕ್ಷಾಂತರದ ವದಂತಿಗಳು ತೀವ್ರಗೊಂಡಿರುವ ಬೆನ್ನಲ್ಲೇ, ಮಹಾರಾಷ್ಟ್ರ ಉಪಮುಖ್ಯಮಂತ್ರಿ...