ಮುಡಾ ಅಕ್ರಮ | ಬಿಜೆಪಿ ನಾಟಕ ಎಷ್ಟು ದಿನ ನಡೆಯುತ್ತೋ ನಡೆಯಲಿ: ಶಿವಲಿಂಗೇಗೌಡ

Date:

ಮುಡಾ ಅಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ಯಾವುದೇ ತಪ್ಪು ಆಗಿಲ್ಲ. ಇದೊಂದು ಬಿಜೆಪಿ ನಾಟಕ ಅಷ್ಟೇ. ಎಷ್ಟು ದಿನ ನಾಟಕ ನಡೆಯುತ್ತದೆ ಎಂದು ನೋಡೋಣ ಎಂದು ಶಾಸಕ ಶಿವಲಿಂಗೇಗೌಡ ಸವಾಲು ಹಾಕಿದರು.

- Advertisement -

ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, “ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರವನ್ನು ರಾಜ್ಯದ ಜನರ ಮುಂದೆ ಬಿಚ್ಚಿಡುತ್ತೇವೆ. ಬಿಜೆಪಿ, ಜೆಡಿಎಸ್ ನವರು ಸಿಎಂ ಕುಟುಂಬದ ಹೆಸರು ಇರುವುದಕ್ಕೆ ಇದನ್ನು ಇಷ್ಟು ದೊಡ್ಡದು ಮಾಡುತ್ತಿದ್ದಾರೆ. ಹಾಗಾದರೆ ಸಿಎಂ ಕುಟುಂಬದ ಜಮೀನು 3 ಎಕರೆ 16 ಗುಂಟೆ ವಾಪಸ್ ಕೊಡಲು ಆಗುತ್ತಾ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಸಿಎಂ ಅವರ ವ್ಯಕ್ತಿತ್ವ ಹಾಳು ಮಾಡಲು ಬಿಜೆಪಿ ಕುತಂತ್ರ ಮಾಡುತ್ತಿದೆ. ಅವತ್ತು ಸೈಟ್ ಕೊಟ್ಟು, ಈಗ ಸದನದಲ್ಲಿ ಬಂದು ಚರ್ಚೆ ಮಾಡಿದ್ರೆ ಹೇಗೆ? ಸಭೆಯಲ್ಲಿ ಸ್ಪೀಕರ್ ರೂಲಿಂಗ್ ವಿರುದ್ಧ ಹೋಗಲು ಆಗುತ್ತಾ?” ಎಂದು ಕೇಳಿದರು.

“ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರದ್ದು ತಪ್ಪಾಗಿದ್ರೆ ನಾವೇ ಶರಣಾಗುತ್ತೇವೆ. ಸುಮ್ಮನೆ ಸಿದ್ದರಾಮಯ್ಯ ಘನತೆ ಹಾಳು ಮಾಡಬೇಡಿ. ರಾಜ್ಯದ ಜನ ಇದನ್ನು ನಂಬುವುದಿಲ್ಲ. ಸಿದ್ದರಾಮಯ್ಯ ವ್ಯಕ್ತಿತ್ವ ರಾಜ್ಯಕ್ಕೆ ಗೊತ್ತಿದೆ” ಎಂದರು.

“ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸ್ತೇವೆ ಎಂಬ ಆಸೆ ಇದ್ರೆ ಬಿಜೆಪಿ ಬಿಟ್ಟುಬಿಡಲಿ. ಅವರಿಗೆ ಸೈಟ್ ಕೊಟ್ಟವರು ಅವರೇ. ಈಗ ಕೂಗಾಡುತ್ತಿರುವವರು ಅವರೇ” ಎಂದು ಶಿವಲಿಂಗೇಗೌಡ ಬಿಜೆಪಿ ವಿರುದ್ಧ  ಕಿಡಿಕಾರಿದರು.

ಮುಡಾ ಹಗರಣದ ಬಗ್ಗೆ ನ್ಯಾಯಾಂಗ ತನಿಖೆ

“ಮುಡಾ ಪ್ರಕರಣವನ್ನು ರಾಜ್ಯ ಸರಕಾರ ಜು.14ರಂದೇ ನ್ಯಾಯಾಂಗ ತನಿಖೆಗೆ ಒಪ್ಪಿಸಿದೆ. ತನಿಖೆಯ ಚೌಕಟ್ಟು ಕೂಡ ನಿಗದಿಯಾಗಿದೆ. ಹೀಗಾಗಿ, ನ್ಯಾಯಿಕ ಸ್ವರೂಪದ ಈ ಪ್ರಕರಣದ ಬಗ್ಗೆ ಚರ್ಚೆಗೆ ಅವಕಾಶವಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...