ಮುಡಾ ಅಕ್ರಮ | ಸಿದ್ದರಾಮಯ್ಯ ಸೇರಿ ಎಲ್ಲರಿಂದ ಮುಡಾ ಮಾನ ಹರಾಜು: ಎಚ್ ವಿಶ್ವನಾಥ್

Date:

“ಮುಡಾದಲ್ಲಿ ನಡೆದಿರುವ ಅಕ್ರಮ ಸುಮಾರು ಹತ್ತು ಸಾವಿರ ಕೋಟಿಯಷ್ಟಿದೆ. ಇಲ್ಲಿನ ಪೊಲೀಸರಿಂದ ಈ ಪ್ರಕರಣದ ತನಿಖೆ ನಡೆಸಲು ಸಾಧ್ಯವಾಗುವುದಿಲ್ಲ. ಸಿಬಿಐ ನವರಿಂದ ಮಾತ್ರ ಮುಡಾ ಅಕ್ರಮ ತನಿಖೆ ನಡೆಸಲು ಸಾಧ್ಯ. ಹಾಗಾಗಿ ಇಡೀ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು” ಎಂದು ಎಂಎಲ್‌ಸಿ ಎಚ್ ವಿಶ್ವನಾಥ್ ಆಗ್ರಹಿಸಿದರು.

- Advertisement -

ಮುಡಾದಲ್ಲಿ ಸಾವಿರಾರು ಕೋಟಿ ಹಗರಣ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಮೈಸೂರಿನ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಮಹಾರಾಜರು ಸ್ಥಾಪಿಸಿದ ಮುಡಾದ ಮಾನವನ್ನು ಎಲ್ಲರೂ ಸೇರಿಕೊಂಡು ಹರಾಜು ಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಸೇರಿಕೊಂಡು ಮುಡಾದ ಮಾನ ಹರಾಜು ಹಾಕಿದ್ದಾರೆ. ಅಹಿಂದ ಹೆಸರಿನಲ್ಲಿ ಓಟು ತೆಗೆದುಕೊಂಡು ಅಹಿಂದ ಸಮುದಾಯಕ್ಕೆ ಟೋಪಿ ಹಾಕುವ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ. ಮುಡಾ ಹಗರಣವನ್ನು ಅಷ್ಟು ಸುಲಭವಾಗಿ ಮುಚ್ಚಿ ಹಾಕಲು ಸಾಧ್ಯವಿಲ್ಲ” ಎಂದು ಹೇಳಿದರು.

“ಬದಲಿ ನಿವೇಶನ ಪಡೆದಿದ್ದೇನೆ ಎಂದು ನನ್ನ ವಿರುದ್ಧ ಆರೋಪಿಸಿದ್ದಾರೆ. ಮುಡಾದ ಅಕ್ರಮದಲ್ಲಿ ನನ್ನ ಪಾಲು ಇದೆ ಎಂದಿದ್ದಾರೆ. ನನ್ನ ಪತ್ನಿಗೆ ದೇವನೂರು 3ನೇ ಹಂತದಲ್ಲಿ ನೀಡಿದ್ದ ನಿವೇಶನದ ಬಳಿ ವರುಣ ನಾಲೆ ಹಾದು ಹೋಗಿದೆ. ಆ ಸ್ಥಳ ಮನೆ ನಿರ್ಮಿಸಲು ಯೋಗ್ಯವಾಗಿರಲಿಲ್ಲ. ಹಾಗಾಗಿ ಬೇರೆಡೆ ನಿವೇಶನ ನೀಡಿದ್ದಾರಷ್ಟೇ. ನನ್ನ ವಿರುದ್ಧ ಆರೋಪ ಮಾಡಿರುವ ಮುಡಾದ ಅಧ್ಯಕ್ಷ ಓರ್ವ ಮೂಢ” ಎಂದರು.

ಎಚ್ ವಿಶ್ವನಾಥ್ ಕೂಡ ಬದಲಿ ನಿವೇಶನ ಪಡೆದಿದ್ದಾರೆಂದು ಮುಡಾ ಅಧ್ಯಕ್ಷ ಕೆ ಮರೀಗೌಡ ಆರೋಪಿಸಿದ್ದರು. ಇದಕ್ಕೆ ಉತ್ತರಿಸಿದ ವಿಶ್ವನಾಥ್, “ಎಲ್ಲ ಕಾನೂನು ಬದ್ದವಾಗಿ ನಡೆದಿದೆ ಎಂದಿದ್ದಾರೆ. ಈ ವಿಚಾರದಲ್ಲಿ ಮುಡಾದವರು, ಸಚಿವರು ಬಾಯಿಗೆ ಬಂದಂತೆ ಮಾತನಾಡದಂತೆ ಸಿಎಂ ಸಿದ್ದರಾಮಯ್ಯ ಸೂಚಿಸಬೇಕು” ಎಂದು ತಿಳಿಸಿದರು.

“ನಮ್ಮ ಕುಟುಂಬಕ್ಕೆ ವಿಜಯನಗರ ಬಡಾವಣೆಯಲ್ಲಿ ಸೈಟ್ ಕೊಟ್ಟಿಲ್ಲ. ನನಗೂ ಸಿದ್ದರಾಮಯ್ಯಗೂ ಒಂದೇ ಅವಧಿಯಲ್ಲಿ ನಿವೇಶನ ಮಂಜೂರು ಆಗಿದೆ. ಕೆಳಗಿನ ಸೈಟ್ ಬದಲು ಮೇಲುಗಡೆ ಕೊಟ್ಟಿದ್ದಾರೆ. ನನಗೆ ಸೈಟ್ ಇದೆ ಅನ್ನೋದಾದ್ರೆ ನಿಮಗೆ ಯಾಕೆ ಸೈಟ್ ಇಲ್ಲ? ಈ ವಿಚಾರದಲ್ಲಿ ನನ್ನ ಹೆಂಡತಿಗೊಂದು ನ್ಯಾಯ, ಸಿದ್ದರಾಮಯ್ಯ ಅವರ ಹೆಂಡತಿಗೊಂದು ನ್ಯಾಯವೇ? ಇದೊಂದು ಕರ್ಮಕಾಂಡ” ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಪ್ರೀಂ ಕೋರ್ಟ್’ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ: ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ನಕಲಿ ಸುಪ್ರೀಂ ಕೋರ್ಟ್ ಆದೇಶವನ್ನು ಬಳಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬನನ್ನು...

ರೈತನ ಭೂಹಕ್ಕಿಗೆ ‘ಪೋಡಿ’ ಅಡ್ಡಿ: ಆನ್‌ಲೈನ್ ಸೇವೆಯಿದ್ದರೂ ಮುಗಿಯದ ಅಲೆದಾಟ!

ರೈತನಿಗೆ ಭೂಮಿಯೇ ಬದುಕು. ಆ ಭೂಮಿಯ ಗಡಿ ಎಲ್ಲಿ? ಎಷ್ಟು ವಿಸ್ತೀರ್ಣ?...

161 ಕಾಮಗಾರಿಗಳಿಗೆ ಶಂಕುಸ್ಥಾಪನೆ-ಉದ್ಘಾಟನೆ; ಜನಕಲ್ಯಾಣವೇ ಸರ್ಕಾರದ ಸಂಕಲ್ಪ: ಸಿದ್ದರಾಮಯ್ಯ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲಾಗಿದ್ದು, ದಾಸನೂರು...

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...