ಮುಡಾ ಅಕ್ರಮ | ಬಿಜೆಪಿ ಪ್ರತಿಭಟನೆ ಹತ್ತಿಕ್ಕುತ್ತಿರುವ ಸಿದ್ದರಾಮಯ್ಯ: ಬಿ ವೈ ವಿಜಯೇಂದ್ರ

Date:

ಮುಡಾದಲ್ಲಿ ಸಾವಿರಾರು ಕೋಟಿ ರೂಪಾಯಿಗೂ ಮೀರಿದ ದೊಡ್ಡ ಹಗರಣ ಬಯಲಾಗಿದೆ. ಇದರಿಂದ ಮುಖ್ಯಮಂತ್ರಿಗಳು ಆತಂಕಗೊಂಡಿದ್ದಾರೆ. ಸಿಎಂ ಆದೇಶದ ಮೇರೆಗೆ ಪೊಲೀಸರು ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸವನ್ನು ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟೀಕಿಸಿದರು.

- Advertisement -

ಮೈಸೂರಿನಲ್ಲಿ ಮುಡಾ ಎದುರು ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾತನಾಡಿದ ಅವರು, “ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ ಮಾಡಲು ತೀರ್ಮಾನ ಮಾಡಿದ್ದೆವು. ಆದರೆ, ನಮ್ಮ ಕಾರ್ಯಕರ್ತರನ್ನು ಮತ್ತು ಮುಖಂಡರನ್ನು ಬಂಧಿಸುವ ಪ್ರಯತ್ನ ಖಂಡನೀಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ಮಾಜಿ ಸಚಿವ ನಾಗೇಂದ್ರ ಅವರು ಇ.ಡಿ ಬಂಧನಕ್ಕೆ ಒಳಗಾಗಿದ್ದಾರೆ. ಕಾಂಗ್ರೆಸ್ಸಿನ ಪಾಪದ ಕೊಡ ತುಂಬಿದೆ. ದಲಿತರ ಹಣ ಲೂಟಿ ಮಾಡಿದ್ದೀರಿ; ಅಲ್ಲದೆ ದಲಿತರು, ಬಡವರಿಗೆ ಮೀಸಲಿಟ್ಟ ನಿವೇಶನಗಳನ್ನು ಲಪಟಾಯಿಸಿದ್ದೀರಿ. ಇದನ್ನು ಸಿಬಿಐ ತನಿಖೆಗೆ ಕೊಡಬೇಕಲ್ಲದೆ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು” ಎಂದು ಆಗ್ರಹಿಸಿದರು.

“ಯಾವುದೇ ಕ್ಷಣದಲ್ಲೂ ಸರಕಾರ ಬೀಳಬಹುದು. ಸಿದ್ದರಾಮಯ್ಯರ ಸರಕಾರ ದಬ್ಬಾಳಿಕೆ ಮಾಡುತ್ತಿದೆ. ತುಘಲಕ್ ದರ್ಬಾರ್ ಮಾಡಲು ಮುಂದಾಗಿದೆ. ಬಿಜೆಪಿ, ಬಿಜೆಪಿಯ ಕಾರ್ಯಕರ್ತರು ಇದೆಲ್ಲದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ” ಎಂದರು.

“ಹೋರಾಟ ಹತ್ತಿಕ್ಕುವುದು ಅಕ್ಷಮ್ಯ ಅಪರಾಧ. ಬೆಳಗ್ಗೆ 7 ಗಂಟೆಗೇ ನಮ್ಮ ಮುಖಂಡರನ್ನು ಬಂಧಿಸಿದ್ದಾರೆ. ನೈಸ್ ರಸ್ತೆ ಬಳಿ ನಮ್ಮ ಬ್ಯಾನರ್, ಬಾವುಟಗಳನ್ನು ಕಿತ್ತು ಬಿಸಾಕಿ, ಕಾರ್ಯಕರ್ತರಿಗೆ ಕೊಡಲು ತಂದ ತಿಂಡಿಯನ್ನೂ ಒದ್ದು ಬಿಸಾಕಿದ್ದಾರೆ” ಎಂದು ಆಕ್ಷೇಪಿಸಿದರು.

“ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ವಾಲ್ಮೀಕಿ ನಿಗಮದ ಹಣವನ್ನು ದೋಚಿ ಕಾಂಗ್ರೆಸ್ ಸರಕಾರವು ಚುನಾವಣೆಗೆ ಬಳಸಿದೆ. ರಾಜ್ಯವನ್ನು ಕಾಂಗ್ರೆಸ್ ಎಟಿಎಂ ಆಗಿ ಪರಿವರ್ತನೆ ಮಾಡಿಕೊಂಡಿದ್ದಾರೆ. ರಾಹುಲ್ ಗಾಂಧಿಯವರಿಗೆ ದುಡ್ಡನ್ನು ಕರ್ನಾಟಕದಿಂದ ಕಳುಹಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ಮುಖ್ಯಮಂತ್ರಿಗಳು ಮುಡಾ ಹಗರಣ ಮೂಲಕ ತಮ್ಮ ಕುಟುಂಬಕ್ಕೆ ನಿವೇಶನ ಹಂಚಿಕೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪುಡಾರಿಗಳಿಗೆ ನಿವೇಶನ ನೀಡಿದ 5 ಸಾವಿರ ಕೋಟಿಯ ಹಗರಣ ಇದಾಗಿದೆ. ಈ ಮೂಲಕ ಕಾಂಗ್ರೆಸ್ ಸರಕಾರದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ. ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಉತ್ತರ ನೀಡಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...