ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದರ ವಿರುದ್ಧ ಕಾಂಗ್ರೆಸ್ ನೀಡಿದ್ದ ದೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ಪಂದಿಸಿದ್ದಾರೆ.
ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ, ಮಾಜಿ ವಿಧಾನ ಪರಿಷತ್ ರಮೇಶ್ ಬಾಬು ನೀಡಿರುವ ದೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ಪಂದಿಸಿದ್ದು, ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಇದನ್ನು ಓದಿದ್ದೀರಾ? ರಾಜಭವನ ಚಲೋ ಮೂಲಕ ರಾಜ್ಯಪಾಲರನ್ನು ಭೇಟಿಯಾದ ಕಾಂಗ್ರೆಸ್ ಮುಖಂಡರು
ರಾಷ್ಟ್ರಪತಿಗಳ ಕಾರ್ಯದರ್ಶಿ ರಾಜೇಶ್ ವರ್ಮ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ಗೆ ಪತ್ರ ಬರೆದು, ರಮೇಶ್ ಬಾಬು ನೀಡಿದ ದೂರಿನ ಬಗ್ಗೆ ಸೂಕ್ತ ಗಮನ ಹರಿಸುವಂತೆ ತಿಳಿಸಿದ್ದಾರೆ. ಅಲ್ಲದೆ, ಈ ಸಂಬಂಧ ದೂರುದಾರರಿಗೆ ನೇರವಾಗಿ ಮಾಹಿತಿ ನೀಡಲು ಸೂಚನೆ ನೀಡಿದ್ದಾರೆ.
