ಮುಡಾ ಹಗರಣ | ಸಿದ್ದರಾಮಯ್ಯ ಮಾತ್ರವಲ್ಲ, ಅವರ ಬೆಂಬಲಿಗರು 500ಕ್ಕೂ ಹೆಚ್ಚು ಸೈಟ್ ನುಂಗಿದ್ದಾರೆ: ಆರ್‌ ಅಶೋಕ್‌ ಆರೋಪ

Date:

ಸಿದ್ದರಾಮಯ್ಯ ಅವರು ಮುಡಾದಲ್ಲಿ 14 ಸೈಟ್ ತಗೊಂಡಿರೋದು ಯಾರ ಜಮೀನು? ಇದು ನಿಂಗ ಎಂಬುವರು 1936 ನೇ ಇಸವಿಯಲ್ಲಿ 1 ರೂಪಾಯಿಗೆ ತೆಗೆದುಕೊಂಡಿದ್ದರು. ಇದಾದ ನಂತರ ನಿಂಗ ಎಂಬುವವರು ಸಾವನ್ನಪ್ಪಿದರು. ನಿಂಗ ಅವರ ಹೆಂಡತಿ ನಿಂಗಮ್ಮ ಅವರು 1990ರಲ್ಲಿ ನಿಧನರಾದರು. ನಿಂಗ ಕುಟುಂಬಸ್ಥರ ವಂಶ ವೃಕ್ಷದಲ್ಲಿ 27 ಜನರು ಇದ್ದಾರೆ. ಆದರೆ ಸಿದ್ದರಾಮಯ್ಯ ನಿಂಗ ಕುಟುಂಬದ ದೇವರಾಜು ಎಂಬುವವನಿಂದ ಮಾತ್ರ ಸಹಿ ಹಾಕಿಸಿಕೊಂಡಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಆರೋಪಿಸಿದರು.

- Advertisement -

ಮಂಡ್ಯದಲ್ಲಿ ಬುಧವಾರ ತುರ್ತುಸುದ್ದಿಗೋಷ್ಠಿ ಕರೆದು, ಮುಡಾ ಹಗರಣಕ್ಕೆ ಸಂಬಂಧಿಸಿದ ದಾಖಲೆ ಬಿಡುಗಡೆ ಮಾಡಿ ಮಾತನಾಡಿದ ಅವರು, “ಒಬ್ಬರ ಕೈಯಿಂದ ಸಹಿ ಹಾಕಿಸಿಕೊಂಡು ರಿಜಿಸ್ಟರ್ ಮಾಡಿಕೊಳ್ಳಲು ಆಗಲ್ಲ. ಅಂದು ಬಡಾವಣೆಗೆ 462 ಎಕರೆ ಜಮೀನು ನಿಗದಿ ಮಾಡಲಾಗಿತ್ತು. ದೇವರಾಜು ಎಂಬಾತ ತನ್ನ ಕುಟುಂಬಸ್ಥರಿಂದ ಖಾಲಿ ಪತ್ರಕ್ಕೆ ಸಹಿ ಹಾಕಿಸಿಕೊಳ್ಳುತ್ತಾನೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“1998ರಲ್ಲಿ ಭೂಸ್ವಾಧೀನ ಮಾಡಿಕೊಳ್ಳಲಾಗಿದೆ. ಈ ವೇಳೆ ನಿಂಗ ಕುಟುಂಬಸ್ಥರು ಪರಿಹಾರ ತೆಗೆದುಕೊಂಡಿದ್ದಾರೆ. ಆಗ ಉಪಮುಖ್ಯಮಂತ್ರಿ ಆಗಿದ್ದು ಸಿದ್ದರಾಮಯ್ಯ. ನಿಯಮ ಬಾಹಿರವಾಗಿ ಭೂಸ್ವಾಧೀನ ಮಾಡಲಾಗಿದೆ. 2001ರಲ್ಲಿ 11.58 ಕೋಟಿಗೆ ಬಡಾವಣೆ ಅಭಿವೃದ್ಧಿಗೆ ಹಣ ಬಿಡುಗಡೆ ಆಗಿದೆ. 2004ರಲ್ಲಿ 3.15 ಗುಂಟೆಯನ್ನು ಸಿದ್ದರಾಮಯ್ಯ ಅವರ ಬಾಮೈದ ಅಕ್ರಮವಾಗಿ ಕ್ರಯ ಮಾಡಿಕೊಳ್ಳುತ್ತಾರೆ” ಎಂದು ಆರೋಪಿಸಿದರು.

“2005 ರಿಂದ ವ್ಯವಸಾಯ ಭೂಮಿಯಿಂದ ನಿವೇಶನದ ಭೂಮಿಯಾಗಿ‌ ಪರಿವರ್ತನೆ ಆಗುತ್ತೆ. 2001ರಲ್ಲಿ ಬಡಾವಣೆ ಕೆಲಸ ನಡೆಯುತ್ತಿರುತ್ತೆ, ಆದ್ರೆ 2005 ರಲ್ಲಿ ಪರಿವರ್ತನೆ ಆಗುತ್ತೆ. ಡಿಸಿ, ತಹಶೀಲ್ದಾರ್ ಎಲ್ಲರೂ ಸ್ಥಳ ಪರಿಶೀಲನೆ ಮಾಡಿದ್ದೇವೆ ಎಂದಿದ್ದಾರೆ. 2005ರಲ್ಲಿ ಮುಡಾ ಇಲ್ಲಿ ಯಾವುದೇ ಕಟ್ಟಡ ಕಟ್ಟುವಂತಿಲ್ಲ ಎಂದು ಆದೇಶ ಮಾಡಿದೆ. ಆಗಿನ ಡಿಸಿಗೆ ಇದ್ಯಾವುದು ಸಹ ಕಂಡಿಲ್ಲ. 2003ರಲ್ಲಿ ಭೂ ಪರಿವರ್ತನೆ ಆಗುವ ಮುನ್ನವೇ 12 ಸೈಟ್‌ಗಳನ್ನು ಅಲರ್ಟ್ ಮಾಡಲಾಗಿದೆ” ಎಂದರು.

“2010ರಲ್ಲಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಅವರ ಅಣ್ಣ ಅರಿಶಿಣ ಕುಂಕುಮಕ್ಕೆ 3.16 ಎಕರೆ ಜಮೀನು ನೀಡಲಾಗುತ್ತೆ.
2014ರಲ್ಲಿ ಪಾರ್ವತಿ ಅವರು ಮುಡಾಗೆ ಪತ್ರೆ ಬರೆಯುತ್ತಾರೆ. ನನಗೆ ಬಂದ ಜಮೀನಿನಲ್ಲಿ ನೀವು ಬಡಾವಣೆ ಮಾಡಿದ್ದೀರಾ.
ಬದಲಿ ಜಾಗವನ್ನು ನನಗೆ ನೀಡಿ ಎಂದು ಪತ್ರದಲ್ಲಿ ಉಲ್ಲೇಖ ಮಾಡ್ತಾರೆ. 2014 ರಲ್ಲಿ ಸಿದ್ದರಾಮಯ್ಯ ಸಿಎಂ ಆದಾಗ 50:50 ಸ್ಕೀಮ್ ಬಂತು. 2017ರಲ್ಲಿ ಮುಡಾದಲ್ಲಿ ಪಾರ್ವತಿ ಅವರ ಜಮೀನಿನ ಚರ್ಚೆ ಬಂತು. ಆಗ 50:50 ಚರ್ಚೆಯಲ್ಲಿ ಬದಲಿ ನಿವೇಶನ ಕೊಡಲು ನಿರ್ಧಾರ ಮಾಡಿದ್ದರು. ಇದಾದ ನಂತರ ಪಾರ್ವತಿ ಅವರಿಗೆ ಸೈಟ್ ನೀಡಲಾಗಿದೆ” ಎಂದು ಹೇಳಿದರು.

ಸ್ವಜನಪಕ್ಷಪಾತ ಎದ್ದು ಕಾಣುತ್ತೆ

“ಮುಡಾ ಪ್ರಕರಣದ ಪ್ರತಿಹಂತದಲ್ಲಿ ಸ್ವಜನಪಕ್ಷಪಾತ, ಭ್ರಷ್ಟಾಚಾರ ಎದ್ದು ಕಾಣುತ್ತಿದೆ. ಲಾಯರ್ ಓದಿದ್ದೀನಿ ಅಂತೀರಾ, ಎರಡು ವರ್ಷ ಪಾಠ ಮಾಡಿದ್ದೀನಿ ಅಂತೀರಾ‌. ಬೇರೆ ಕಡೆ ಖಾಲಿ ಇದೆ ಎಂದು ಸೈಟ್ ಬರೆಸಿಕೊಳ್ತೀರಾ?” ಎಂದು ಸಿದ್ದರಾಮಯ್ಯ ದಾಟಿಯಲ್ಲೇ ಆರ್.ಅಶೋಕ್ ಪ್ರಶ್ನಿಸಿದರು.

“ಕೇವಲ 14 ಸೈಟ್ ಮಾತ್ರ ನುಂಗಿಲ್ಲ, ಸಿದ್ದರಾಮಯ್ಯ ಬೆಂಬಲಿಗರು 500 ಕ್ಕೂ ಹೆಚ್ಚು ಸೈಟ್ ನುಂಗಿದ್ದಾರೆ. 50:50 ಸ್ಕೀಮ್ ನಲ್ಲಿ ಸಾವಿರಾರು ಕೋಟಿ ಲೂಟಿ ಮಾಡಿದ್ದಾರೆ. ಇದನ್ನು ಮುಡಾ ಅಧ್ಯಕ್ಷ ಮರೀಗೌಡನೆ ಪತ್ರದ ಮೂಲಕ ತಿಳಿಸಿದ್ದಾನೆ. 82 ಸಾವಿರ ನಾಗರೀಕರು ಸೈಟ್‌ಗಾಗಿ ಕಾಯುತ್ತಿದ್ದಾರೆ. ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು‌. ಸಿದ್ದರಾಮಯ್ಯ ಪಡೆದಿರುವ 14 ಸೈಟ್ ಅನ್ನೂ ವಾಪಸ್ಸು ನೀಡಬೇಕು. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ ಕಲಿಕೆಯ ವಾತಾವರಣ ಅಗತ್ಯ

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ...

ಪಶ್ಚಿಮ ಬಂಗಾಳ | ದುರ್ಗಾ ಪೂಜೆ ಪಂಡಾಲ್‌ನಲ್ಲಿ ಮಮತಾ ಮೇಲೆ ದಾಳಿ; ಟಿಎಂಸಿ ಮುಖಂಡರೇ ಗುರಿಯೆ?

ಈಗಾಗಲೇ ಸರಣಿ ದಾಳಿಯು ಟಿಎಂಸಿ ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಸಿದೆ. ಹೀಗಿರುವಾಗ ನಿನ್ನೆಯಷ್ಟೇ...

ದಿನಸಿ ಬೆಲೆ ಏರಿಕೆ ಬರೆ; ಗ್ರಾಮೀಣ ಕುಟುಂಬಗಳ ಬಜೆಟ್‌ಗೆ ಕತ್ತರಿ

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲದ ಬೆಲೆ ಏರಿಕೆಯ...

KPSC ಅಕ್ರಮ | ಫೋನ್ ಟ್ಯಾಪಿಂಗ್ ಆರೋಪದ ನೆರಳು; ಹೈಕೋರ್ಟ್ ಎಸ್‌ಐಟಿ ತಂಡಕ್ಕೆ ಸುಪ್ರೀಂ ಬ್ರೇಕ್

ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ...