ಮುಡಾ ಹಗರಣ | ನಿವೇಶನಗಳು ಅಮಾನತ್ತಿನಲ್ಲಿದ್ದು ಸರ್ಕಾರಕ್ಕೆ ನಷ್ಟವಾಗಿಲ್ಲ: ಸಿದ್ದರಾಮಯ್ಯ

Date:

Advertisements

ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ ಇಲ್ಲವೋ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು ಎಲ್ಲ ನಿವೇಶನಗಳನ್ನು ಅಮಾನತ್ತಿನಲ್ಲಿ ಇಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಸರ್ಕಾರಕ್ಕೆ ನಷ್ಟವಾಗಿಲ್ಲ. ನಿವೇಶನಗಳನ್ನು ಹಂಚಿಕೆ ಮಾಡಿದ್ದವರನ್ನು ವರ್ಗಾವಣೆ ಮಾಡಿ ಹಿರಿಯ ಐಎಎಸ್ ಅಧಿಕಾರಿಗಳಿಂದ ತನಿಖೆ ಮಾಡಿಸಲಾಗುತ್ತಿದೆ. ವರದಿ ಬಂದ ನಂತರ ತೀರ್ಮಾನ ಈ ಬಗ್ಗೆ ಮಾಡಲಾಗುವುದು” ಎಂದರು.

ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗವಾಗಿದೆ ಎಂದು ಬಿಜೆಪಿ ಆರೋಪ ಮಾಡಿದ್ದು ಸಿಬಿಐಗೆ ಪ್ರಕರಣ ಹಸ್ತಾಂತರ ಮಾಡಲು ಒತ್ತಾಯಿಸಿರುವ ಬಗ್ಗೆ ಮಾತನಾಡಿ, “ಎಲ್ಲವನ್ನೂ ಸಿಬಿಐಗೆ ಹಸ್ತಾಂತರಿಸಲು ಏಕೆ ಹೇಳುತ್ತಾರೆ? ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐಗೆ ಹಸ್ತಾಂತರ ಮಾಡಿದ್ದರು ಎಂದು ಪ್ರಶ್ನಿಸಿ, ಜಮೀನು ಕೊಟ್ಟವರಿಗೆ ಪರ್ಯಾಯವಾಗಿ ನಿವೇಶನ ನೀಡಬೇಕೆಂದು ಬಿಜೆಪಿಯೇ ಕಾನೂನು ಮಾಡಿದೆ” ಎಂದರು.

Advertisements

ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮುಖ್ಯಮಂತ್ರಿಗಳು ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಪ್ರಕರಣದಲ್ಲಿ ನನ್ನ ಪಾತ್ರವೇನಿದೆ? ಆರ್. ಅಶೋಕ್ ಕರ್ತವ್ಯ ಲೋಪವೆಸಗಿದ್ದಾರೆ ಎಂದರೆ ರಾಜಿನಾಮೆ ಕೊಡುತ್ತಾರೆಯೇ” ಎಂದು ಪ್ರಶ್ನಿಸಿದರು.

“ಬಿಜೆಪಿ ಕಾಲದಲ್ಲಿ ಅಕ್ರಮ ಸಕ್ರಮ ಸರಿಯಾದ ರೀತಿಯಲ್ಲಿ ಆಗಿಲ್ಲ ಎಂದು ಆರೋಪ ಕೇಳಿ ಬಂದಾಗ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ. ಅದಕ್ಕೆ ರಾಜೀನಾಮೆ ಕೊಡಿ ಅಂದರೆ ಕೊಡುತ್ತಾರೆಯೇ?” ಎಂದರು.

ವಾಲ್ಮೀಕಿ ನಿಗಮದ ಅಕ್ರಮಗಳ ಬಗ್ಗೆ ತನಿಖೆ

ಬಿಜೆಪಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅಕ್ರಮಗಳ ಬಗ್ಗೆಯೂ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮಾತನಾಡಿ, “ವಾಲ್ಮೀಕಿ ನಿಗಮದ ಪ್ರಕರಣವನ್ನು ಎಸ್‍ಐಟಿಗೆ ವಹಿಸಲಾಗಿದ್ದು ತನಿಖೆ ನಡೆಯುತ್ತಿದೆ. ಸಚಿವರಾಗಿದ್ದ ನಾಗೇಂದ್ರ ಅವರಿಂದ ರಾಜಿನಾಮೆ ಪಡೆಯಲಾಗಿದೆ. ಡೆತ್ ನೋಟಿನಲ್ಲಿ ಮಂತ್ರಿಗಳು ವ್ಯವಸ್ಥಾಪಕ ನಿರ್ದೇಶಕರಿಗೆ ಮೌಖಿಕ ಆದೇಶ ನೀಡಿದ್ದರು ಎಂದು ಬರೆದಿರುವ ಕಾರಣ ರಾಜಿನಾಮೆ ಪಡೆದೆವು. ಬ್ಯಾಂಕ್ ವ್ಯವಹಾರಗಳ ಬಗ್ಗೆ ಸಿಬಿಐ ತನಿಖೆ ಕೈಗೊಂಡಿದೆ” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ : ‘ಎಕೆ, ಎಡಿ, ಎಎ’ ಸಮಸ್ಯೆ ಜೀವಂತ ಉಳಿಸಿದ ರಾಜ್ಯ ಸರ್ಕಾರ

'ಸಿ' ಮತ್ತು 'ಡಿ' ಗ್ರೂಪ್ ನೌಕರರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಇತರೆ ಅಸ್ಪೃಶ್ಯ...

ಧರ್ಮಸ್ಥಳ ಸುತ್ತ ವ್ಯವಸ್ಥಿತ ಷಡ್ಯಂತ್ರ, ಹಿಂದಿನ ಶಕ್ತಿಗಳನ್ನು ಎಸ್‌ಐಟಿ ಪತ್ತೆ ಮಾಡಲಿ: ಸುನಿಲ್‍ ಕುಮಾರ್

ಧರ್ಮಸ್ಥಳಕ್ಕೆ ಸಂಬಂಧಿಸಿ ಎಸ್‍ಐಟಿ ತನಿಖೆಯಲ್ಲಿ ಬಿಜೆಪಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು...

ಪ್ರಧಾನಿ ಪದವೀಧರರಾಗದಿರುವುದು ಅಪರಾಧವಲ್ಲ, ಸುಳ್ಳು ಹೇಳುವುದು ಮಹಾಪರಾಧ: ಪ್ರಕಾಶ್ ರಾಜ್

ಪ್ರಧಾನಿ ಪದವೀಧರರಾಗದಿರುವುದು ಅಪರಾಧವಲ್ಲ, ಆದರೆ ಸುಳ್ಳು ಹೇಳುವುದು, ಆ ಸುಳ್ಳು ಮರೆಮಾಚಲು...

ನಾನು ದಲಿತರನ್ನು ವಿರೋಧಿಸಿಲ್ಲ, ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಇರಲಿ: ಶಾಸಕ ಜಿ.ಟಿ.ದೇವೇಗೌಡ

ಸರ್ಕಾರದ ಪಾಲುಗಾರಿಕೆ ಇರುವ ಸಂಘಗಳಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸೇರಿಸಿ ಹಾಗೂ ಒಬ್ಬ...

Download Eedina App Android / iOS

X