ಮೇ 22ರಿಂದ ನೂತನ ಸರ್ಕಾರದ ಅಧಿವೇಶನ: ಹಂಗಾಮಿ ಅಧ್ಯಕ್ಷರಾಗಿ ಆರ್ ವಿ ದೇಶಪಾಂಡೆ

Date:

  • ಮೇ 22ರಿಂದ 24 ರವರೆಗೆ ವಿಧಾನಸಭೆ ಅಧಿವೇಶನ
  • ಹಂಗಾಮಿ ಸ್ಪೀಕರ್ ದೇಶಪಾಂಡೆ ನೇತೃತ್ವದಲ್ಲಿ ಕಲಾಪ

ನೂತನ ಕಾಂಗ್ರೆಸ್ ಸರ್ಕಾರ ತನ್ನ ಮೊದಲ ಅಧಿವೇಶನವನ್ನು ಮೇ 22ರಿಂದ ಮೂರು ದಿನಗಳ ಕಾಲ ನಡೆಸಲು ನಿರ್ಧರಿಸಿದೆ. ಈ ಸಂಬಂಧ ರಾಜ್ಯಪಾಲರಿಗೆ ಮನವಿ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ಕಾಲಾವಕಾಶ ಒದಗಿಸಿಕೊಡುವಂತೆ ಕೇಳಿಕೊಂಡಿದ್ದಾರೆ.

ಮುಖ್ಯಮಂತ್ರಿಯಾದ ಬಳಿಕ ಮೊದಲ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಈ ನಿರ್ಧಾರವನ್ನು ಸಿದ್ದರಾಮಯ್ಯ ಮಾಧ್ಯಮಗಳಿಗೆ ತಿಳಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇ 22ರ ಸೋಮವಾರದಿಂದ ಮೊದಲ ವಿಧಾನಸಭೆ ಅಧಿವೇಶನ ನಡೆಯಲಿದೆ. ಒಟ್ಟು ಮೂರು ದಿನಗಳ ಕಾಲ ಅಧಿವೇಶನ ನಡೆಸಲಾಗುವುದು ಎಂದರು.

ಹಂಗಾವಿ ಸ್ಪೀಕರ್ ದೇಶಪಾಂಡೆ ನೇತೃತ್ವದಲ್ಲಿ ಅಧಿವೇಶನ ನಡೆಯಲಿದೆ, ಇಲ್ಲಿ ನೂತನ ಶಾಸಕರುಗಳಿಗೆ ಪ್ರಮಾಣ ವಚನ ಬೋಧಿಸಲಾಗುವುದು. ಎಲ್ಲ ಶಾಸಕರ ಪ್ರಮಾಣವಚನ ಸ್ವೀಕಾರದ ನಂತರ ಹೊಸ ಸಭಾಪತಿ ಆಯ್ಕೆ ನಡೆಯಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಈ ಸುದ್ದಿ ಓದಿದ್ದೀರಾ?:ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಇಂದೇ ಜಾರಿಯಾಗಲಿವೆ : ರಾಹುಲ್ ಗಾಂಧಿ

ಇನ್ನು ಮೊದಲ ಸಚಿವ ಸಂಪುಟ ಸಭೆಯ ಬಗ್ಗೆ ಚುಟುಕು ಮಾಹಿತಿ ನೀಡಿದ ಸಿಎಂ, ಚುನಾವಣಾ ಪ್ರಣಾಳಿಕೆಯನ್ನು ಘೋಷಣೆ ಮಾಡಿದ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ಪಡೆಯಲಾಗಿದೆ.

ನಾವು ನೀಡಿದ ಐದು ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ. ಇದರಿಂದ ಹಿಂದೆ ಸರಿಯುವುದಿಲ್ಲ. ಕಟ್ಟುನಿಟ್ಟಾಗಿ ತೆರಿಗೆಯನ್ನು ವಸೂಲಿ ಮಾಡಿ ಗ್ಯಾರಂಟಿ ಜಾರಿ ಮಾಡಲಾಗುವುದು ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ 1500 ಪ್ರಯಾಣಿಕರಿಗೆ ಅಗತ್ಯ ನೆರವು

1500 ಕಾರ್ಮಿಕರಿಗೆ ಬಿಬಿಎಂಪಿ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳಿಂದ ನೆರವು ಕಾರ್ಮಿಕರ ನೆರವಿಗೆ...

ಸಚಿವ ವೆಂಕಟೇಶ್ ಹೇಳಿಕೆಯಿಂದ ಗೋವುಗಳ ಕಳ್ಳ ಸಾಗಾಣಿಕೆ, ಸಾಮೂಹಿಕ ಗೋಹತ್ಯೆ‌ ತಲೆ ಎತ್ತಲಿದೆ: ಮಾಜಿ ಸಿಎಂ ಬೊಮ್ಮಾಯಿ

ಗೋವುಗಳನ್ನು ಏಕೆ ಕಡಿಯಬಾರದು ಎಂಬ ಸಚಿವರ ಹೇಳಿಕೆಗೆ ಬೊಮ್ಮಾಯಿ ಆಕ್ಷೇಪ 'ತಮಗೆ ನೀಡಿರುವ...

15,000 ಪೊಲೀಸ್ ಕಾನ್ಸ್‌ಟೆಬಲ್ ಹುದ್ದೆ ಶೀಘ್ರ ಭರ್ತಿ; ಗೃಹ ಸಚಿವ ಪರಮೇಶ್ವರ್

ಪೊಲೀಸ್ ಇಲಾಖೆಗೆ ಬಲ ತುಂಬಲು ಮುಂದಾದ ಸರ್ಕಾರ ಹೊಸ ನೇಮಕಾತಿ ಆರಂಭಿಸಲು ಸೂಚನೆ...

ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಉತ್ತರ ಒಳನಾಡಿನ ಕೆಲವು...