ಗ್ಯಾಂಗ್‌ಸ್ಟರ್ ಮುಖ್ತಾರ್ ಅನ್ಸಾರಿ ಕಿರಿಯ ಪುತ್ರ ಉಮರ್ ಅನ್ಸಾರಿ ಬಂಧನ

Date:

ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್, ರಾಜಕಾರಣಿ ದಿವಂಗತ ಮುಖ್ತಾರ್ ಅನ್ಸಾರಿ ಕಿರಿಯ ಪುತ್ರ ಉಮರ್ ಅನ್ಸಾರಿಯನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ತಂದೆಯ ವಶಪಡಿಸಿಕೊಂಡ ಆಸ್ತಿಗಳನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ಸಲ್ಲಿಸಿದ ಆರೋಪದ ಮೇಲೆ ಉಮರ್ ಅನ್ಸಾರಿ ಬಂಧನ ಮಾಡಲಾಗಿದೆ.

- Advertisement -

ಗ್ಯಾಂಗ್‌ಸ್ಟರ್ ಮುಖ್ತಾರ್ ಅನ್ಸಾರಿ ಆಸ್ತಿಯನ್ನು ಉತ್ತರ ಪ್ರದೇಶ ದರೋಡೆಕೋರರ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ವಶಪಡಿಸಿಕೊಳ್ಳಲಾಗಿದೆ. ಈ ಆಸ್ತಿಯನ್ನು ಅನ್ಸಾರಿ ಪುತ್ರ ಉಮರ್ ಮರಳಿ ಪಡೆಯುವ ನಿಟ್ಟಿನಲ್ಲಿ ಕಾನೂನು ಹೋರಾಟ ನಡೆಸುತ್ತಿದ್ದಾರೆ. ಇನ್ನು ಅನ್ಸಾರಿ ಈ ವರ್ಷದ ಮಾರ್ಚ್‌ನಲ್ಲಿ ಉತ್ತರ ಪ್ರದೇಶದ ಬಂಡಾದ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನು ಓದಿದ್ದೀರಾ? ಮುಖ್ತಾರ್ ಅನ್ಸಾರಿಗೆ ಜೈಲಿನಲ್ಲಿ ‘ಸ್ಲೋ ಪಾಯ್ಸನ್’ ನೀಡಲಾಗಿದೆ; ಪುತ್ರ ಉಮರ್ ಅನ್ಸಾರಿ ಆರೋಪ

ಉಮರ್ ಅನ್ಸಾರಿ ಅಕ್ರಮವಾಗಿ ಆಸ್ತಿಯನ್ನು ಪಡೆಯುವ ಉದ್ದೇಶ ಹೊಂದಿದ್ದರು. ಹಾಗೆಯೇ ತಮ್ಮ ತಾಯಿ ಅಫ್ಶಾನ್ ಅನ್ಸಾರಿ ಅವರ ನಕಲಿ ಸಹಿಗಳನ್ನು ಹೊಂದಿರುವ ನಕಲಿ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇನ್ನು ಅಫ್ಶಾನ್ ಅನ್ಸಾರಿ ಪ್ರಸ್ತುತ ತಲೆಮರೆಸಿಕೊಂಡಿದ್ದು, ಸುಲಿವು ನೀಡಿದವರಿಗೆ 50 ಸಾವಿರ ರೂಪಾಯಿ ಬಹುಮಾನ ಘೋಷಿಸಲಾಗಿದೆ.

ಉಮರ್ ಅನ್ಸಾರಿ ವಂಚನೆ ಮಾಡುತ್ತಿರುವ ಬಗ್ಗೆ ತಿಳಿದ ಬಳಿಕ ಅನ್ಸಾರಿ ವಿರುದ್ಧ ಮೊಹಮ್ಮದಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್) ನ ವಿವಿಧ ವಿಭಾಗಗಳ ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ. ಸದ್ಯ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...