ಮುಂದಿನ ಅಧಿವೇಶನದಲ್ಲಿಯೇ ದ್ವಿಭಾಷಾ ನೀತಿ ಜಾರಿಗೊಳಿಸಿ: ಮುಖ್ಯಮಂತ್ರಿ ಚಂದ್ರು ಆಗ್ರಹ

Date:

Advertisements

ರಾಜ್ಯದಲ್ಲಿ ಹಲವು ವರ್ಷಗಳಿಂದ ರಾಜ್ಯದ ಶಾಲೆಗಳಲ್ಲಿ ನೆನೆಗುದಿಗೆ ಬಿದ್ದಿರುವ ದ್ವಿಭಾಷಾ ನೀತಿಯನ್ನು ರಾಜ್ಯದಲ್ಲಿಯೂ ಶೀಘ್ರದಲ್ಲಿಯೇ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಆಮ್ ಆದ್ಮಿ ಪಕ್ಷದ(ಎಎಪಿ) ರಾಜ್ಯಾಧ್ಯಕ್ಷ, ನಟ ಡಾ. ಮುಖ್ಯಮಂತ್ರಿ ಚಂದ್ರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

“ಇತ್ತೀಚಿನ ದಿನಗಳಲ್ಲಿ ಆಗುತ್ತಿರುವ ಪ್ರಾದೇಶಿಕ ಅಸಮತೋಲನವನ್ನು ಸರಿಪಡಿಸಲು, ಕನ್ನಡ ಭಾಷೆಯ ಹಿರಿಮೆಯನ್ನು ಎತ್ತಿ ಹಿಡಿಯಲು, ದೇಶದಲ್ಲಿ ಸ್ಥಳೀಯ ಭಾಷೆಗಳ ಉಳಿವಿಗಾಗಿ, ವಿದ್ಯಾರ್ಥಿಗಳ ಮೇಲಿನ ಅನಗತ್ಯ ಹೊರೆಯನ್ನು ತಪ್ಪಿಸಲು, ಮಕ್ಕಳ ಜ್ಞಾನಾರ್ಜನೆಯ ವೃದ್ಧಿಗಾಗಿ, ಹಿಂದಿ ಭಾಷೆಯ ಏರಿಕೆಯಿಂದ ವಿದ್ಯಾರ್ಥಿಗಳ ಶಿಕ್ಷಣ ಮೊಟಕುಗೊಳ್ಳುವಿಕೆಯನ್ನು ತಡೆಗಟ್ಟಲು ಹಾಗೂ ಎಲ್ಲ ಕನ್ನಡಪರ ಮನಸ್ಸುಗಳ ಹಲವು ದಶಕಗಳ ಬೇಡಿಕೆಯನ್ನು ಈಡೇರಿಸಲು ತಾವು ಕೂಡಲೇ ಮುಂದಾಗಬೇಕು” ಎಂದು ಪತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಅಬಕಾರಿ ಸಚಿವರ ರಾಜೀನಾಮೆ ಪಡೆದು, ತನಿಖೆಗೆ ಆದೇಶಿಸಿ: ಸಿಎಂಗೆ ಮುಖ್ಯಮಂತ್ರಿ ಚಂದ್ರು ಪತ್ರ

Advertisements

“ಈಗಾಗಲೇ ಪ್ರತಿ ವರ್ಷವೂ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈಗಿರುವ ತ್ರಿಭಾಷಾ ಸೂತ್ರದ ಅನುಸಾರ ಹಿಂದಿ ಭಾಷೆಯಲ್ಲಿ ಅನುತ್ತೀರ್ಣರಾಗುವ ಮೂಲಕ ತಮ್ಮ ಶಿಕ್ಷಣ ಭವಿಷ್ಯವನ್ನೇ ತ್ಯಜಿಸುವಂತಹ ಅನಿವಾರ್ಯ ಪರಿಸ್ಥಿತಿ ರಾಜ್ಯದಲ್ಲಿ ಇದೆ. ಈಗಾಗಲೇ ಆಮ್ ಆದ್ಮಿ ಪಕ್ಷದ ಸರ್ಕಾರವಿರುವ ಪಂಜಾಬ್ ರಾಜ್ಯದಲ್ಲಿ ಹಾಗೂ ದೆಹಲಿ ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಯಲ್ಲಿದೆ. ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರವು ಸಹ ಹೋರಾಟಗಾರರ ಒತ್ತಡಕ್ಕೆ ಮಣಿದು ತ್ರಿಭಾಷಾ ಸೂತ್ರವನ್ನು ಕೈಬಿಟ್ಟಿದೆ” ಎಂದು ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.

“ತಾವು ಸಹ ನಮ್ಮ ರಾಜ್ಯದ ಲಕ್ಷಾಂತರ ಮಕ್ಕಳ ಶಿಕ್ಷಣ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಈ ಕೂಡಲೇ ಮುಂಬರುವ ರಾಜ್ಯದ ವಿಧಾನಸಭಾ ಅಧಿವೇಶನದಲ್ಲಿ ದ್ವಿಭಾಷಾ ನೀತಿಯ ಮಸೂದೆ ಮಂಡಿಸುವ ಮೂಲಕ ಅಂಗೀಕಾರ ಮಾಡಬೇಕು. ಮಕ್ಕಳನ್ನು ಶೈಕ್ಷಣಿಕ ಅಂಧಕಾರದಲ್ಲಿ ದೂಡುವ ಈ ತ್ರಿಭಾಷಾ ನೀತಿಯನ್ನು ಕೂಡಲೇ ರದ್ದುಗೊಳಿಸಬೇಕು. ಕನ್ನಡ ಭಾಷೆಯ ಅಳಿವು ಉಳಿವಿನ ಸಂದರ್ಭದಲ್ಲಿ ಕೂಡಲೇ ಮುಂಬರುವ ಅಧಿವೇಶನದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳಬೇಕು” ಎಂದು ಮುಖ್ಯಮಂತ್ರಿ ಚಂದ್ರು ಸಿಎಂಗೆ ಬರೆದಿರುವ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಹೊಸ ಶಿಕ್ಷಣ ನೀತಿ(ಎನ್‌ಇಪಿ) ಅಡಿಯಲ್ಲಿ ತ್ರಿಭಾಷಾ ಸೂತ್ರದ ಜಾರಿಯನ್ನು ದಕ್ಷಿಣ ಭಾರತದ ರಾಜ್ಯಗಳು ತೀವ್ರವಾಗಿ ಖಂಡಿಸಿದೆ. ಈಗಾಗಲೇ ಕೇಂದ್ರ ಮತ್ತು ತಮಿಳುನಾಡು ಸರ್ಕಾರದ ನಡುವೆ ಹಿಂದಿ ಹೇರಿಕೆ ವಿಚಾರದಲ್ಲಿ ಶೀತರ ಸಮರ ಏರ್ಪಟ್ಟಿದೆ. ತಮಿಳುನಾಡು ಸರ್ಕಾರ ನೀತಿ ಜಾರಿಗೆ ತಂದು ಕೊನೆಗೂ ಮರಾಠಿ ಸಂಘಟನೆಗಳು ಮತ್ತು ವಿಪಕ್ಷಗಳ ಒತ್ತಡಕ್ಕೆ ಮಣಿದು ಆದೇಶವನ್ನು ಹಿಂಪಡೆದಿದೆ. ಇವೆಲ್ಲವುದರ ನಡುವೆ ಸದ್ಯ ಕರ್ನಾಟಕದಲ್ಲಿ ತ್ರಿಭಾಷಾ ನೀತಿಯೇ ಜಾರಿಯಲ್ಲಿದೆ. 1968ರಿಂದಲೇ ರಾಜ್ಯದಲ್ಲಿ ಈ ಸೂತ್ರ ಜಾರಿಯಲ್ಲಿದ್ದು, ಪ್ರೌಢ ಶಾಲೆಯವರೆಗೆ ಪ್ರಥಮ, ದ್ವಿತೀಯ ಭಾಷೆಯಾಗಿ ಕನ್ನಡ, ಇಂಗ್ಲೀಷ್ ಇದ್ದರೆ, ತೃತೀಯ ಭಾಷೆಯಾಗಿ ಹಿಂದಿ ಕಡ್ಡಾಯವಾಗಿದೆ. ಪಿಯುಸಿಯಿಂದ ಎರಡನೇ ಭಾಷೆಯಾಗಿ ಹಿಂದಿ ಅಥವಾ ಕನ್ನಡ ಇತರೆ ಆಯ್ಕೆ ನೀಡಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X