ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ ಅವ್ಯವಹಾರ ಪ್ರಕರಣ: ಸಿಬಿಐ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

Date:

ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ಗಳಲ್ಲಿ ನಡೆದ ಅವ್ಯವಹಾರ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಿದ್ದಾರೆ.

- Advertisement -

ಈ ಬ್ಯಾಂಕ್‌ಗಳಿಂದ ಠೇವಣಿದಾರರಿಗೆ ಆಗಿರುವ ನಷ್ಟ ಮತ್ತು ವಂಚನೆಯ ವಿರುದ್ಧ ಪ್ರತಿಪಕ್ಷದ ನಾಯಕರಾಗಿದ್ದಾಗ ಸಿದ್ದರಾಮಯ್ಯ ಅವರು ಸದನದ ಒಳಗೆ ಮತ್ತು ಹೊರಗೆ ಪ್ರತಿಭಟನೆ ಮಾಡಿ, ಸೂಕ್ತ ತನಿಖೆ ನಡೆಸಿ ಬ್ಯಾಂಕಿನ ಗ್ರಾಹಕರಿಗೆ ಮತ್ತು ಠೇವಣಿದಾರರಿಗೆ ನ್ಯಾಯ ಒದಗಿಸಲು ಆಗ್ರಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಮೂರೂ ಬ್ಯಾಂಕ್‌ಗಳ ಠೇವಣಿದಾರರು ನಡೆಸಿದ ಪ್ರತಿಭಟನೆಗೆ ವಿರೋಧ ಪಕ್ಷದ ನಾಯಕರಾಗಿ ಬೆಂಬಲ ಕೂಡ ಸೂಚಿಸಿದ್ದರು. ಈಗ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಠೇವಣಿ ಹಣ ಕಳೆದುಕೊಂಡವರ ಹತಾಶೆ, ಸಂಕಟವನ್ನು ಕಣ್ಣಾರೆ ಕಂಡಿದ್ದೇನೆ. ಈ ಕಾರಣಕ್ಕಾಗಿ ಸೂಕ್ತ ತನಿಖೆ ನಡೆದು, ಎಲ್ಲ ಸಂತ್ರಸ್ತರಿಗೂ ನ್ಯಾಯ ಸಿಗಲಿ ಎಂಬ ಉದ್ದೇಶದಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.

ಏನಿದು ಪ್ರಕರಣ?

ಚಾಲ್ತಿಯಲ್ಲಿರುವ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿದ ಆರೋಪ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಮೇಲಿದೆ. ಹೆಚ್ಚಿನ ಬಡ್ಡಿ ಆಸೆಗೆ ಸಾವಿರಾರು ಗ್ರಾಹಕರು ಈ ಸಂಸ್ಥೆಯಲ್ಲಿ ನೂರಾರು ಕೋಟಿ ರೂ. ಠೇವಣಿ ಇಟ್ಟಿದ್ದರು. ಸಾಲಗಾರರು, ಸಂಸ್ಥೆಯ ಆಡಳಿತ ಮಂಡಳಿ ಮತ್ತು ಉದ್ಯೋಗಿಗಳೊಂದಿಗೆ ಶಾಮೀಲಾಗಿ ನಕಲಿ ಠೇವಣಿ ಹಾಗೂ ನಿಶ್ಚಿತ ಠೇವಣಿಗಳ ಆಧಾರದಲ್ಲಿ ಭಾರೀ ಮೊತ್ತದ ಸಾಲ ಪಡೆದು ಮರು ಪಾವತಿಸದೆ ವಂಚಿಸಿದ್ದರು.

ಸಂಸ್ಥೆಯಿಂದ ವಂಚನೆಗೆ ಒಳಗಾದವರಲ್ಲಿ ಹಿರಿಯ ನಾಗರಿಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಹಿರಿಯ ನಾಗರಿಕರು ತಮ್ಮ ಉಳಿತಾಯ ಹಾಗೂ ನಿವೃತ್ತಿ ವೇತನದ ಹಣವನ್ನು ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆಗಾಗಿ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ನಿಯಮಿತದಲ್ಲಿ ಠೇವಣಿ ಇಟ್ಟಿದ್ದರು. ಆದರೆ, ಸಂಸ್ಥೆಯ ಆಡಳಿತ ಮಂಡಳಿಯು ಸಾಲಗಾರರಿಂದ ಸೂಕ್ತ ಶ್ಯೂರಿಟಿ ಪಡೆಯದೆ ಸಾಲ ನೀಡಿತ್ತು. ಜತೆಗೆ ನಕಲಿ ಖಾತೆಗಳನ್ನು ಸೃಷ್ಟಿಸಿ ಸಾಲ ಮಂಜೂರು ಮಾಡಿತ್ತು.

ಈ ಪ್ರಕರಣದಲ್ಲಿ ಸಂಸ್ಥೆಯ ಅಧ್ಯಕ್ಷ ಸೇರಿದಂತೆ 4 ಮಂದಿಯನ್ನು ಬಂಧಿಸಿದ್ದರು. ಅದಕ್ಕೂ ಮೊದಲು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಬಡ್ಡಿ ಠೇವಣಿದಾರರ ರಕ್ಷಣಾ ಕಾಯಿದೆ-2004 ಮತ್ತು ಐಪಿಸಿಯ ವಿವಿಧ ಸೆಕ್ಷನ್‌ಗಳಡಿ ಸಂಸ್ಥೆ ಹಾಗೂ ಇತರರ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದರು.

ಬಳಿಕ ಇ.ಡಿ. ಅಧಿಕಾರಿಗಳು 2020ರಲ್ಲಿ ಪಿಎಂಎಲ್‌ಎ ಅಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿ, ಬ್ಯಾಂಕ್‌ಗೆ ಸೇರಿದ 114.19 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ, ಜತೆಗೆ ಸಂಸ್ಥೆಯ ಖಾತೆಯಲ್ಲಿದ್ದ 3.15 ಕೋಟಿ ರೂ. ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರ್ಮಿಕರನ್ನು ಮರೆತ ಡೆಮಾಕ್ರಟ್ ಪಾರ್ಟಿ: ಮೂಲಭೂತ ಬದಲಾವಣೆಗೆ ಬರ್ನಿ ಸ್ಯಾಂಡರ್ಸ್ ಖಡಕ್ ತಾಕೀತು

ಅಮೆರಿಕದ ಮಧ್ಯಂತರ ಚುನಾವಣೆಗಳಲ್ಲಿ ಡೆಮಾಕ್ರಟ್ ಪಕ್ಷ ಭಾರೀ ಜಯ ಗಳಿಸಿದೆಯಾದರೂ ಆತ್ಮನಿರೀಕ್ಷಣೆ...

ಹಾಲು, ಬಸ್ ದರ ಏರಿಕೆ; ಕಾಂಗ್ರೆಸ್ ಸರ್ಕಾರದ ಸರಣಿ ಎಡವಟ್ಟು!

ರಾಜ್ಯದಲ್ಲಿ ನವೆಂಬರ್ ತಿಂಗಳು ಜನಸಾಮಾನ್ಯರ ದೈನಂದಿನ ಬದುಕಿನ ಮೇಲಿನ ಭಾರೀ ಆರ್ಥಿಕ...

2032ರ ವೇಳೆಗೆ ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವ ಗುರಿಯತ್ತ ನಮ್ಮ ರಾಜ್ಯ ಸಾಗುತ್ತಿದೆ: ಡಿ ಕೆ ಶಿವಕುಮಾರ್

"ಕರ್ನಾಟಕವು 2032ರ ವೇಳೆಗೆ ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವ ಗುರಿಯತ್ತ ಸಾಗುತ್ತಿದೆ....

ಮಣಿಪುರ | ಗುಂಪುಗಳ ನಡುವೆ ಭಾರಿ ಗುಂಡಿನ ಚಕಮಕಿ: ಮೂವರು ಸಾವು

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಮತ್ತೆ ಮೂವರು ಸಾವನ್ನಪ್ಪಿದ್ದಾರೆ. ನೋನಿ ಜಿಲ್ಲೆಯಲ್ಲಿ ಪೈಪೋಟಿ...