ಮುಂಬೈ | ಆರ್‌ಎಸ್‌ಎಸ್ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಟ ಸಲ್ಮಾನ್ ಖಾನ್ ಭಾಗಿ

Date:

ಮುಂಬೈನಲ್ಲಿ ಶನಿವಾರ ನಡೆದ ಆರ್‌ಎಸ್‌ಎಸ್‌ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಸಲ್ಮಾನ್‌ ಖಾನ್ ಭಾಗಿಯಾಗಿದ್ದರು. ಅವರ ಸಮ್ಮುಖದಲ್ಲಿ ಮಾತನಾಡಿದ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್, “ಸಂಘವು ಯಾರನ್ನೂ ವಿರೋಧಿಸುವುದಿಲ್ಲ. ದೇಶಕ್ಕಾಗಿ ಕೆಲಸ ಮಾಡುತ್ತದೆ” ಎಂದು ಹೇಳಿದರು. ಭಾಗವತ್ ಮಾತಿಗೆ ಸನ್ಮಾಲ್‌ ಖಾನ್ ತಲೆದೂಗಿದರು ಎಂದು ವರದಿಯಾಗಿದೆ.

- Advertisement -

ಬ್ರಿಟಿಷ್ ಆಡಳಿತದ ಸಮಯದಲ್ಲಿ ಜನರ ಆಕ್ರೋಶವನ್ನು ಬ್ರಿಟಿಷರಿಂದ ಮುಸ್ಲಿಮರ ಎಡೆಗೆ ತಿರುಗಿಸುವ, ಹಿಂದುತ್ವ ಕೋಮುದ್ವೇಷ ಬಿತ್ತಿ ಬ್ರಿಟಿಷರಿಗೆ ನೆರವಾಗಲು ಹುಟ್ಟಿಕೊಂಡದ್ದೇ ಆರ್‌ಎಸ್‌ಎಸ್‌ ಎಂಬ ಗಂಭೀರ ಆರೋಪಗಳಿವೆ. ಸ್ವಾತಂತ್ರ್ಯ ಪೂರ್ವದಲ್ಲಿಯೇ ಬಹುತ್ವದ ನಾಡಿನಲ್ಲಿ ದ್ವೇಷದ ವಿಷ ಬಿತ್ತಲಾರಂಭಿಸಿದ್ದ ಸಂಘ, ಈಗ ಯಾರನ್ನೂ ವಿರೋಧಿಸುವುದಿಲ್ಲವೆಂದು ಭಾಗವತ್ ಹೇಳಿದ್ದಾರೆ. ಅವರ ಮಾತನ್ನು ಸಲ್ಮಾನ್‌ ಖಾನ್ ಹರ್ಷಚಿತ್ತದಿಂದ ಕೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಶನಿವಾರದ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, “ಸಂಘವು ಅಧಿಕಾರ ಅಥವಾ ಜನಪ್ರಿಯತೆಯನ್ನು ಬಯಸುವುದಿಲ್ಲ. ಒತ್ತಡದ ಗುಂಪಾಗುವ ಗುರಿಯೂ ಇಲ್ಲ. ಆದರೆ, ಸಮಾಜವನ್ನು ಒಗ್ಗೂಡಿಸುವುದು ಸಂಘದ ಉದ್ದೇಶ” ಎಂದು ಹೇಳಿದ್ದಾರೆ.

“ಸಮಾಜವನ್ನು ಏಕೀಕರಿಸುವುದನ್ನು ಹೊರತುಪಡಿಸಿ ಬೇರೆ ಯಾವುದೇ ಕೆಲಸವನ್ನು ಕೈಗೆತ್ತಿಕೊಳ್ಳುವುದಿಲ್ಲವೆಂದು ಆರ್‌ಎಸ್‌ಎಸ್ ಬಹಳ ಹಿಂದೆಯೇ ನಿರ್ಧರಿಸಿದೆ. ಸಂಘದ ಚಟುವಟಿಕೆಗಳನ್ನು ವೀಕ್ಷಿಸಲು ವಿವಿಧ ದೇಶಗಳ ಜನರು ಭಾರತಕ್ಕೆ ಬರುತ್ತಿದ್ದಾರೆ. ಆರ್‌ಎಸ್‌ಎಸ್ ಕಚೇರಿಗಳಿಗೆ ಭೇಟಿ ನೀಡುತ್ತಿದ್ದಾರೆ. ಅವರು ತಮ್ಮ ಯುವಜನರಿಗಾಗಿ ನಮ್ಮ ಮಾದರಿಯನ್ನು ಜಾರಿಗೆ ತರಲು ಬಯಸುತ್ತಾರೆ” ಎಂದು ಭಾಗವತ್ ಹೇಳಿದ್ದಾರೆ.

“ಸಂಘವು ಯಾರನ್ನೂ ವಿರೋಧಿಸದೆ ಕೆಲಸ ಮಾಡುತ್ತದೆ. ದೇಶದಲ್ಲಿ ನಡೆಯುತ್ತಿರುವ ಎಲ್ಲ ಒಳ್ಳೆಯ ಕೆಲಸಗಳನ್ನು ಸರಿಯಾಗಿ ಮಾಡಬೇಕು. ಸಂಘದ ಸ್ವಯಂಸೇವಕರು ಸರ್ಕಾರದಿಂದ ಯಾವುದೇ ಹಣವನ್ನು ತೆಗೆದುಕೊಳ್ಳದೆ 1.3 ಲಕ್ಷಕ್ಕೂ ಹೆಚ್ಚು ಸೇವಾ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಸಮಾಜದ ಸಹಕಾರದೊಂದಿಗೆ ತಮ್ಮ ಸ್ವಂತ ಹಣವನ್ನು ಖರ್ಚು ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...