ಮುಂಬೈ | ಐದು ತಿಂಗಳ ಹಿಂದೆ ಪ್ರಧಾನಿ ಮೋದಿ ಉದ್ಘಾಟಿಸಿದ್ದ ಅಟಲ್ ಸೇತು ರಸ್ತೆಯಲ್ಲಿ ಬಿರುಕು!

Date:

ಈ ವರ್ಷದ ಜನವರಿ 12ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದ ಮುಂಬೈನ ಅಟಲ್ ಬಿಹಾರಿ ವಾಜಪೇಯಿ ಸೆವ್ರಿ-ನವ ಸೇವಾ ಅಟಲ್ ಸೇತು ಅಥವಾ ಮುಂಬೈ ಟ್ರಾನ್ಸ್‌ ಹಾರ್ಬರ್ ಲಿಂಕ್‌ (ಹೆಚ್‌ಟಿಹೆಚ್‌ಎಲ್‌) ಸೇತುವೆಯ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.

ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮಹಾರಾಷ್ಟ್ರದ ಕಾಂಗ್ರೆಸ್ ನಾಯಕ ನಾನಾ ಪಟೋಲೆ, “ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿಂಗಳುಗಳ ಹಿಂದೆಯಷ್ಟೇ ಉದ್ಘಾಟಿಸಿದ್ದ ಅಟಲ್ ಸೇತುವೆಯ ರಸ್ತೆ ಬಿರುಕು ಬಿಟ್ಟಿರುವುದು ಅತ್ಯಂತ ಕಳವಳಕಾರಿಯಾಗಿದೆ. ಹೆಚ್ಚಿನ ಸಂಖ್ಯೆಯ ಬಿರುಕುಗಳು ಪ್ರಯಾಣಿಕರಲ್ಲಿ ಭೀತಿಯ ವಾತಾವರಣವನ್ನು ಸೃಷ್ಟಿಸಿವೆ” ಎಂದಿದ್ದಾರೆ.

“ಬಿಹಾರದಲ್ಲಿ ನೂತನವಾಗಿ ನಿರ್ಮಿಸಲಾಗಿದ್ದ ಸೇತುವೆ ಕುಸಿದಿರುವ ಘಟನೆ ತಾಜಾ ಆಗಿರುವಾಗಲೇ ಮುಂಬೈನಲ್ಲೂ ಅಂತಹ ಆಘಾತಕಾರಿ ಘಟನೆ ಬೆಳಕಿಗೆ ಬಂದಿರುವುದರಿಂದ ಸರ್ಕಾರದ ಕಾರ್ಯವೈಖರಿ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ. ಸರ್ಕಾರದ ಭ್ರಷ್ಟಾಚಾರಗಳನ್ನು ಬಹಿರಂಗಪಡಿಸುವ ಕಾಂಗ್ರೆಸ್ ಪಕ್ಷದ ಆಂದೋಲನದ ಭಾಗವಾಗಿ ನಾನು ಸಹೋದ್ಯೋಗಿಗಳೊಂದಿಗೆ ಸೇತುವೆ ಪರಿಶೀಲಿಸಿದೆ. ಈ ವಿಷಯವು ತುಂಬಾ ಗಂಭೀರವಾಗಿದೆ. ಮಾನ್ಯ ಹೈಕೋರ್ಟ್ ಈ ಬಗ್ಗೆ ತಕ್ಷಣ ಗಮನಹರಿಸಿ ತನಿಖೆ ನಡೆಸಬೇಕು ಎಂದು ನಾವು ಒತ್ತಾಯಿಸುತ್ತೇವೆ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮುಂಬೈ ಟ್ರಾನ್ಸ್‌ ಹಾರ್ಬರ್ ಲಿಂಕ್‌ ಅಟಲ್ ಸೇತು ಭಾರತದ ಅತಿ ಉದ್ದದ ಸಮುದ್ರ ಸೇತುವೆಯಾಗಿದ್ದು, 21.8 ಕಿಮೀ ಉದ್ದವಿದೆ. ಈ ಪೈಕಿ 16.5 ಕಿಮೀ ರಸ್ತೆ ಸಮುದ್ರದ ಮೇಲಿದೆ. ವರದಿಯೊಂದರ ಪ್ರಕಾರ, ಈ ಸೇತುವೆ ಮೇಲೆ ಪ್ರತಿದಿನ 70,000 ಕ್ಕೂ ಹೆಚ್ಚು ವಾಹನಗಳು ಸಂಚರಿಸುತ್ತವೆ.

ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಿಸಲಾದ ಸೇತುವೆಯೊಂದು ಕುಸಿದುಬಿದ್ದ ಬೆನ್ನಲ್ಲೇ, ಅಟಲ್ ಸೇತುವೆಯ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಚುನಾವಣೆಗೂ ಮುನ್ನ ನಟಿ ರಶ್ಮಿಕಾ ಮಂದಣ್ಣ ಇದೇ ಅಟಲ್ ಸೇತುವೆಯನ್ನು ತೋರಿಸಿ ಮೋದಿವಯವರ ಅಭಿವೃದ್ದಿ ಎಂದು ಕೊಂಡಾಡಿದ್ದರು. ಅದು ಬಳಿಕ ವ್ಯಾಪಕ ಟ್ರೋಲ್‌ಗೂ ಕಾರಣವಾಗಿತ್ತು.

ತಗುಲಿದ ವೆಚ್ಚ ಎಷ್ಟು?

ಈ ಸೇತುವೆ ನಿರ್ಮಾಣಕ್ಕೆ ತಗುಲಿದ ವೆಚ್ಚ ಬರೋಬ್ಬರಿ 17,840 ಕೋಟಿ ರೂಪಾಯಿ. ಈ ಪೈಕಿ 15,000 ಕೋಟಿ ರೂ. ಸಾಲ ಪಡೆದುಕೊಳ್ಳಲಾಗಿದೆ. ಇದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನವೀ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೇಗದ ಸಂಪರ್ಕವನ್ನು ಒದಗಿಸುತ್ತದೆ ಮತ್ತು ಮುಂಬೈನಿಂದ ಪುಣೆ, ಗೋವಾ ಮತ್ತು ದಕ್ಷಿಣ ಭಾರತಕ್ಕೆ ಇರುವ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ. ಎಂಟಿಎಚ್ಎಲ್‌ನಲ್ಲಿ ಕಾರು, ಲಘು ವಾಹನಗಳು, ಮಿನಿ ಬಸ್‌ಗಳು ಮತ್ತು ಬಸ್‌ಗಳ ಗರಿಷ್ಠ ವೇಗದ ಮಿತಿ ಗಂಟೆಗೆ 100 ಕಿ.ಮೀ. ಬೈಕ್‌ಗಳು ಸೇರಿದಂತೆ ದ್ವಿಚಕ್ರ ವಾಹನಗಳು, ಆಟೋರಿಕ್ಷಾಗಳು ಮತ್ತು ಟ್ರ್ಯಾಕ್ಟರ್‌ಗಳ ಪ್ರವೇಶ ನಿಷೇಧಿಸಲಾಗಿದೆ.

ಈ ಅಟಲ್‌ ಸೇತು ದೇಶದ ಅತೀ ದೊಡ್ಡ ಮತ್ತು ಜಗತ್ತಿನ 12ನೇ ಅತೀ ದೊಡ್ಡ ಸಮುದ್ರ ಸೇತುವೆ ಎನಿಸಿಕೊಂಡಿದೆ. 21.8 ಕಿ.ಮೀ ಉದ್ದದ ಈ ಸೇತುವೆಯು 16.5 ಕಿ.ಮೀ ಸಮುದ್ರದಲ್ಲಿ ಮತ್ತು 5.5 ಕಿ.ಮೀ ಭೂ ಪ್ರದೇಶದಲ್ಲಿ ಚಾಚಿಕೊಂಡಿದೆ.

ಸಮುದ್ರ ಮಾರ್ಗವು ಎರಡೂ ಬದಿಗಳಲ್ಲಿ ಮೂರು ಮತ್ತು 2 ತುರ್ತು ಪಥಗಳನ್ನು ಒಳಗೊಂಡಿದೆ. ಈ ಸೇತುವೆಯು ನವೀ ಮುಂಬೈಯ ಉಲ್ವೆ ಮತ್ತು ದಕ್ಷಿಣ ಮುಂಬೈ ನಡುವಿನ ಎರಡು ಗಂಟೆಗಳ ಪ್ರಯಾಣದ ಸಮಯವನ್ನು ಕೇವಲ 15-20 ನಿಮಿಷಗಳಿಗೆ ಇಳಿಸಲಿದೆ. ಮೊದಲ ವರ್ಷ ಏಕಮುಖ ಟೋಲ್ ದರ 250 ರೂ. ಮತ್ತು ರೌಂಡ್-ಟ್ರಿಪ್ ಟೋಲ್ ದರ 375 ರೂ. ನಿಗದಿಪಡಿಸಲಾಗಿದೆ. ಕಾರ್ಯಾಚರಣೆ ಪ್ರಾರಂಭವಾದ ಒಂದು ವರ್ಷದ ನಂತರ ದರಗಳನ್ನು ಪರಿಷ್ಕರಿಸುವ ಸಾಧ್ಯತೆ ಇದೆ. ಅದಕ್ಕೂ ಮೊದಲೇ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿರುವುದು, ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಾಜಿಯ ನಿಜ ಭಕ್ತರು ಮನೆಗಳಿಗೆ ಬೆಂಕಿ ಹಚ್ಚಿ ಲೂಟಿ ಮಾಡ್ತಾರಾ?; ದುಷ್ಕರ್ಮಿಗಳ ಅಟ್ಟಹಾಸಕ್ಕೆ ಗ್ರಾಮವೇ ಧ್ವಂಸ

ಗ್ರಾಮದಲ್ಲಿ ನರಕಯಾತನೆ ಅನುಭವಿಸುವಂತಹ ಕೃತ್ಯಗಳನ್ನು ಎಸಗಿದ್ದಾರೆ. ಮಹಿಳೆಯರ ಚಿನ್ನದ ಸರ ಕಸಿದುಕೊಂಡಿದ್ದಾರೆ....

ರೀಲ್ಸ್ ಮಾಡುವಾಗ 300 ಅಡಿ ಜಲಪಾತಕ್ಕೆ ಬಿದ್ದು ‘ಸೋಶಿಯಲ್​ ಮೀಡಿಯಾ ಇನ್ಫ್ಲುಯೆನ್ಸರ್’ ಮೃತ್ಯು

ಮುಂಬೈ ಮೂಲದ 'ಸೋಶಿಯಲ್​ ಮೀಡಿಯಾ ಇನ್ಫ್ಲುಯೆನ್ಸರ್' ಆನ್ವಿ ಕಾಮ್ದಾರ್ (27) ರೀಲ್ಸ್...

ಬಿಜೆಪಿ ಭಿನ್ನಮತೀಯರಿಗೆ ‘ಮಾನ್ಸೂನ್ ಆಫರ್’ ನೀಡಿದ ಅಖಿಲೇಶ್ ಯಾದವ್

ಉತ್ತರ ಪ್ರದೇಶದಲ್ಲಿ ಬಿಜೆಪಿ ಭಿನ್ನಮತ ಸ್ಫೋಟಗೊಂಡಿರುವ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ...

ಉತ್ತರಾಖಂಡ | ಅನಾರೋಗ್ಯದಿಂದ ತಮಟೆ ಬಾರಿಸದ ವ್ಯಕ್ತಿ; ದಲಿತ ಕುಟುಂಬಗಳಿಗೆ ಗ್ರಾಮದಿಂದ ಬಹಿಷ್ಕಾರ!

ದಲಿತ ಸಮುದಾಯದ ವ್ಯಕ್ತಿಯೊಬ್ಬರು ಅನಾರೋಗ್ಯದ ಕಾರಣ ದೇವಸ್ಥಾನದಲ್ಲಿ ತಮಟೆ ಬಾರಿಸಲು ಬರದ...