ಫೇಸ್‌ಬುಕ್ ಲೈವ್‌ ಅಲ್ಲಿರುವಾಗಲೇ ಉದ್ಧವ್ ಠಾಕ್ರೆ ಬಣದ ಮುಖಂಡನ ಮೇಲೆ ಗುಂಡಿನ ದಾಳಿ: ಪರಿಸ್ಥಿತಿ ಚಿಂತಾಜನಕ

Date:

ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಬಣದ ಮಾಜಿ ಕಾರ್ಪೊರೇಟರ್ ಮತ್ತು ಶಿವಸೇನೆಯ ಮಾಜಿ ಶಾಸಕರ ಪುತ್ರ ಅಭಿಷೇಕ್ ಘೋಸಲ್ಕರ್ ಅವರ ಮೇಲೆ ಗುರುವಾರ ರಾತ್ರಿ ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಗುಂಡಿನ ದಾಳಿ ನಡೆಸಿರುವ ಘಟನೆ ವರದಿಯಾಗಿದೆ.

ಮುಂಬೈನ ದಹಿಸರ್‌ನಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ಕಾರ್ಯಕರ್ತನಾಗಿದ್ದ ಹಾಗೂ ಲೈವ್‌ ವೇಳೆ ಜೊತೆಗಿದ್ದ ಮೌರಿಸ್ ನೊರೊನ್ಹಾ ಎಂಬಾತನು ಈ ದಾಳಿ ನಡೆಸಿರುವುದಾಗಿ ‘ದಿ ಫ್ರೀ ಪ್ರೆಸ್ ಜರ್ನಲ್’ ವರದಿ ಮಾಡಿದ್ದು, ಅಭಿಷೇಕ್ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿರುವುದಾಗಿ ತಿಳಿಸಿದೆ.

ಘೋಸಲ್ಕರ್‌ಗೆ ಎರಡರಿಂದ ಮೂರು ಗುಂಡುಗಳು ತಗುಲಿವೆ ಎಂದು ತಿಳಿದುಬಂದಿದೆ. ಕೂಡಲೇ ದಹಿಸರ್‌ನ ಕರುಣಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಘಟನೆಯ ವಿಡಿಯೋದಲ್ಲಿ, ಘೋಸಲ್ಕರ್ ಅವರು ಫೇಸ್‌ಬುಕ್ ಲೈವ್‌ನಲ್ಲಿ ನೊರೊನ್ಹಾ ಅವರೊಂದಿಗೆ ಕುಳಿತಿರುವುದನ್ನು ಕಾಣಬಹುದು. ಆದರೆ ಘಟನೆಗಳ ನಾಟಕೀಯ ತಿರುವಿನಲ್ಲಿ, ಕೆಲವೇ ಕ್ಷಣಗಳ ನಂತರ ನೊರೊನ್ಹಾ ಲೈವ್ ಸ್ಟ್ರೀಮಿಂಗ್ ಕೊನೆಗೊಳ್ಳುತ್ತಿದ್ದಂತೆ ಘೋಸಲ್ಕರ್ ಮೇಲೆ ಗುಂಡು ಹಾರಿಸಿದ್ದಾನೆ.

ಘೋಸಲ್ಕರ್ ಮೇಲೆ ಗುಂಡು ಹಾರಿಸಿದ ಬಳಿಕ ಮೌರಿಸ್ ನೊರೊನ್ಹಾ ಕೂಡ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಅಭಿಷೇಕ್ ಘೋಸಲ್ಕರ್‌ಗೆ ಗುಂಡು ಹಾರಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2000 ಕೋಟಿ ರೂ. ಮೊತ್ತದ ಅಂತಾರಾಷ್ಟ್ರೀಯ ಮಟ್ಟದ ಡ್ರಗ್ ಜಾಲ ಪತ್ತೆ: ತಮಿಳು ನಿರ್ಮಾಪಕ ಜಾಲದ ಪ್ರಮುಖ ರೂವಾರಿ

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ (ಎನ್‌ಸಿಬಿ) ಹಾಗೂ ದೆಹಲಿ ವಿಶೇಷ ಪೊಲೀಸ್ ಜಂಟಿ...

ಪೊಲೀಸ್‌ ಕಸ್ಟಡಿಯಲ್ಲೇ ನಡೆದಿವೆ 275 ಅತ್ಯಾಚಾರ ಪ್ರಕರಣಗಳು: ಎನ್‌ಸಿಆರ್‌ಬಿ ಡೇಟಾ

2017 ರಿಂದ 2022ರವರೆಗೆ 275 'ಪೊಲೀಸ್‌ ಕಸ್ಟಡಿಯಲ್ಲಿ ಅತ್ಯಾಚಾರ' ಪ್ರಕರಣಗಳು ದಾಖಲಾಗಿವೆ...

ಮಾನನಷ್ಟ ಪ್ರಕರಣಗಳಲ್ಲಿ ಪಕ್ಷವನ್ನೂ ಆರೋಪಿಯಾಗಿ ಮಾಡಬಹುದು: ಕರ್ನಾಟಕ ಹೈಕೋರ್ಟ್

ಮಾನನಷ್ಟ ಮೊಕದ್ದಮೆಗಳಲ್ಲಿ ಒಬ್ಬ ವ್ಯಕ್ತಿ ಮಾತ್ರವಲ್ಲ, ರಾಜಕೀಯ ಪಕ್ಷಗಳಂತಹ ಸಂಸ್ಥೆಗಳು ಸೇರಿದಂತೆ...

ನನ್ನ ವಿರುದ್ಧ ಪ್ರಾಯೋಜಿತ ಅಪಪ್ರಚಾರ ನಡೆಯುತ್ತಿದೆ: ಸಚಿವೆ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು-ಉಡುಪಿ ಜಿಲ್ಲೆಗಳಲ್ಲಿ ಅಲ್ಲಿನ ಸಂಸದೆ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ...