ಮುಂಬೈನ ಭಾಷೆ ಮರಾಠಿ, ಇತರರೂ ಅರ್ಥಮಾಡಿಕೊಳ್ಳಬೇಕು: ಆರ್‌ಎಸ್‌ಎಸ್‌ ನಾಯಕ ಯೂಟರ್ನ್

Date:

ಮರಾಠಿ ಮುಂಬೈನ ಭಾಷೆಯಾಗಿದೆ. ಹೊರಗಿನಿಂದ ಬರುವವರು ಮತ್ತು ಇತರೆ ಭಾಷೆ ಮಾತನಾಡುವವರೂ ಕೂಡಾ ಮರಾಠಿ ಭಾಷೆ ಕಲಿಯಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಾಯಕ ಸುರೇಶ್ ಬೈಯಾಜಿ ಜೋಶಿ ಗುರುವಾರ ಹೇಳಿದ್ದಾರೆ. ಈ ಮೂಲಕ ಯೂಟರ್ನ್ ಹೊಡೆದಿದ್ದಾರೆ.

- Advertisement -

ಬುಧವಾರ ಘಟಕ್‌ಪುರದಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ಜೋಶಿ ನೀಡಿದ ಹೇಳಿಕೆಯು ತೀವ್ರ ವಿವಾದಕ್ಕೆ ಕಾರಣವಾಗಿದೆ. ವಿಪಕ್ಷವಾದ ಶಿವಸೇನೆ (ಯುಬಿಟಿ) ಮತ್ತು ಕಾಂಗ್ರೆಸ್ ಜೋಶಿ ಹೇಳಿಕೆಯನ್ನು ಟೀಕಿಸಿದ್ದರು. ಇದಾದ ಬೆನ್ನಲ್ಲೇ ಜೋಶಿ ತನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಮರಾಠಿ ಪುಂಡರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ: ಸರಕಾರಕ್ಕೆ ವಿಜಯೇಂದ್ರ ಆಗ್ರಹ

ಘಟಕ್‌ಪುರದಲ್ಲಿ ಮಾತನಾಡಿದ್ದ ಆರ್‌ಎಸ್‌ಎಸ್ ನಾಯಕ, “ಮುಂಬೈನಲ್ಲಿ ಒಂದೇ ಭಾಷೆ ಇರುವುದಲ್ಲ. ಮುಂಬೈನ ಪ್ರತಿ ಭಾಗದಲ್ಲಿಯೂ ಬೇರೆ ಬೇರೆ ಭಾಷೆಯಿದೆ. ಘಟಕ್‌ಪುರದ ಭಾಷೆ ಗುಜರಾತಿಯಾಗಿದೆ. ಮುಂಬೈನಲ್ಲಿ ನೆಲೆಸಿದ್ದರೆ ಮರಾಠಿಯನ್ನೇ ಕಲಿಯಬೇಕು ಎಂಬ ಅಗತ್ಯವೇನಿಲ್ಲ” ಎಂದು ಹೇಳಿದ್ದರು.

ವಿಪಕ್ಷಗಳ ಟೀಕೆಗೆ ಒಳಗಾಗುತ್ತಿದ್ದಂತೆ ಯೂಟರ್ನ್ ಹೊಡೆದಿರುವ ಆರ್‌ಎಸ್‌ಎಸ್‌ ನಾಯಕ, “ಮರಾಠಿ ಮುಂಬೈನ ಸ್ಥಳೀಯ ಭಾಷೆ, ಈ ಬಗ್ಗೆ ನನಗೆ ಹೆಮ್ಮೆಯಿದೆ. ಆ ಬಗ್ಗೆ ಎರಡು ಅಭಿಪ್ರಾಯಗಳು ನನ್ನಲ್ಲಿ ಇಲ್ಲ. ಬೇರೆ ಬೇರೆ ಭಾಷೆಯನ್ನು ಮಾತನಾಡುವ ಜನರು ಮುಂಬೈನಲ್ಲಿ ಇದ್ದಾರೆ, ಆದರೆ ಸಾಮರಸ್ಯದಿಂದ ಬದುಕುತ್ತಿದ್ದಾರೆ” ಎಂದು ಹೇಳಿಕೊಂಡಿದ್ದಾರೆ.

“ಇತರೆ ರಾಜ್ಯಗಳಿಂದ ಬರುವವರು ಮತ್ತು ಇತರ ಭಾಷೆಗಳನ್ನು ಮಾತನಾಡುವವರೂ ಕೂಡಾ ಮರಾಠಿ ಅರ್ಥಮಾಡಿಕೊಳ್ಳಬೇಕು ಎಂದು ಬಯಸುತ್ತೇವೆ. ನಾನು ಘಟಕ್‌ಪುರದಲ್ಲಿ ನೀಡಿದ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಸ್ಕ್–ಅಂಬಾನಿ ವಾಕ್ಸಮರ: ‘ಸ್ಪರ್ಧೆಗೆ ಸಿದ್ಧ’ ಎಂದ ರಿಲಯನ್ಸ್

ಭಾರತದಲ್ಲಿ ಸ್ಟಾರ್‌ಲಿಂಕ್ ಸೇವೆ ಆರಂಭಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂಬ ಎಲಾನ್ ಮಸ್ಕ್ ಅವರ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...