ಹೋಳಿ ಕಾರ್ಯಕ್ರಮದಲ್ಲಿ ವ್ಯಕ್ತಿಯನ್ನು ಒದ್ದ ಪುರಸಭೆ ಮುಖ್ಯಸ್ಥ; ಇದು ‘ಆಶೀರ್ವಾದ’ ಎಂದ ಬಿಜೆಪಿ ನಾಯಕರು!

Date:

ಹೋಳಿ ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬರನ್ನು ಪುರಸಭೆಯ ಮುಖ್ಯಸ್ಥರು ಒದ್ದಿರುವ ಘಟನೆ ಮಧ್ಯಪ್ರದೇಶದ ನರಸಿಂಗ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಬಿಜೆಪಿ ನಾಯಕರು ಇದು ‘ಆಶೀರ್ವಾದ’ ಎಂದು ಹೇಳುವ ಮೂಲಕ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

- Advertisement -

ತೆಂಡುಖೇಡ ಪುರಸಭೆಯ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ವಿಷ್ಣು ಶರ್ಮಾ ಹೋಳಿ ಕಾರ್ಯಕ್ರಮವೊಂದರಲ್ಲಿ ವ್ಯಕ್ತಿಯೊಬ್ಬರಿಗೆ ಒದ್ದಿದ್ದಾರೆ. ಶರ್ಮಾ ಮುಖಕ್ಕೆ ವ್ಯಕ್ತಿಯೋರ್ವ ಬಣ್ಣ ಹಾಕಿದ್ದು, ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಈ ವೇಳೆ ಬಿಜೆಪಿ ನಾಯಕ ಶರ್ಮಾ ಆ ವ್ಯಕ್ತಿಯ ಭುಜಕ್ಕೆ ಒದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಮುಂಬಡ್ತಿ ಸೇರಿ ಇತರೆ ಬೇಡಿಕೆ ಈಡೇರಿಸಲು ಆಗ್ರಹ; ಹೋಳಿ ಆಚರಣೆ ಬಹಿಷ್ಕರಿಸಿದ ರಾಜಸ್ಥಾನ ಪೊಲೀಸರು

ಸದ್ಯ ಈ ವಿಡಿಯೋವನ್ನು ಶರ್ಮಾ ಬೆಂಬಲಿಗರು, ಬಿಜೆಪಿ ನಾಯಕರು ಹಂಚಿಕೊಂಡಿದ್ದಾರೆ. ಶರ್ಮಾ ಒದ್ದಿರುವುದನ್ನು ‘ಆಶೀರ್ವಾದ’ ಎಂದು ಬಣ್ಣಿಸಿದ್ದಾರೆ. ಶರ್ಮಾ ಅವರನ್ನು ಹಾಡಿಹೊಗಳಿದ್ದಾರೆ.

ಇನ್ನು ಬಿಜೆಪಿ ನಾಯಕ ಶರ್ಮಾ ಜನರಿಗೆ ಒದ್ದಿರುವುದು ಇದೇ ಮೊದಲೇನಲ್ಲ. ಕೆಲವು ದಿನಗಳ ಹಿಂದೆ, ಮತ್ತೊಂದು ವಿಡಿಯೋ ವೈರಲ್ ಆಗಿತ್ತು. ಮಾರುಕಟ್ಟೆಯಲ್ಲಿ ಅದೇ ವ್ಯಕ್ತಿಯನ್ನು ಶರ್ಮಾ ಒದ್ದಿದ್ದರು. ಕಾಂಗ್ರೆಸ್ ನಾಯಕರು, ನೆಟ್ಟಿಗರು ಶರ್ಮಾ ವರ್ತನೆಯನ್ನು ಖಂಡಿಸಿದ್ದರು.

ಇದನ್ನು ಓದಿದ್ದೀರಾ? ಬೆಂಗಳೂರು | ಲಾಲ್‌ಬಾಗ್‌ನಲ್ಲಿ ಹೋಳಿ; ಎರಡು ಗುಂಪುಗಳ ನಡುವೆ ಮಾರಾಮಾರಿ

ಇನ್ನು ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಬಿಜೆಪಿ ಯುವ ಘಟಕದ ಸ್ಥಳೀಯ ನಾಯಕ ಉದಿತ್ ಶರ್ಮಾ, “ರಜ್ಜನ್ ಎಂಬ ಅದೇ ವ್ಯಕ್ತಿಯನ್ನು ಮತ್ತೆ ಒದೆಯಲು ಕರೆಯಲಾಯಿತು” ಎಂದು ಹೇಳಿಕೊಂಡಿದ್ದಾರೆ. ಈ ನಡುವೆ ಈ ಹಿಂದೆ ಶರ್ಮಾ ಒದ್ದಿರುವುದನ್ನು ಆಶೀರ್ವಾದ ಎಂದು ಬಿಂಬಿಸಲು ಈಗ ಮತ್ತೆ ವಿಡಿಯೋ ಮಾಡಿ ಬಿಜೆಪಿಗರು ಹಂಚುತ್ತಿದ್ದಾರೆ ಎಂದು ನೆಟ್ಟಿಗರು ಆರೋಪಿಸಿದ್ದಾರೆ.

ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಸ್ನೇಹಿ ಪಾಠಕ್, “ನಾನು ವಿಡಿಯೋ ನೋಡಿದ್ದೇನೆ. ಶರ್ಮಾ ಅವರೊಂದಿಗೆ ಮಾತನಾಡುತ್ತೇವೆ, ಅವರ ವಿವರಣೆ ಪಡೆಯುತ್ತೇವೆ. ಈ ವಿಡಿಯೋ ನಿಜವಾಗಿದ್ದರೆ ಸೂಕ್ತ ಕ್ರಮಕೈಗೊಳ್ಳಲಾಗುವುದು” ಎಂದು ಎನ್‌ಡಿಟಿವಿಗೆ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...