ಮುನಿರತ್ನ ಪ್ರಕರಣ | ವಿಪಕ್ಷ ನಾಯಕ ಆರ್‌ ಅಶೋಕ್‌ಗೆ ‘HIV’ ಸೋಂಕಿತ ರಕ್ತ ಇಂಜೆಕ್ಟ್‌ ಮಾಡಲು ಸಂಚು; ಹೆಬ್ಬಗೋಡಿ ಠಾಣೆಯ ಎಸ್‌ಐ ಬಂಧನ

Date:

ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಮಹತ್ವದ ತಿರುವು ಸಿಕ್ಕಿದ್ದು, ಹನಿಟ್ರ್ಯಾಪ್ ಪ್ರಕರಣಕ್ಕೆ ಸಹಕಾರ ನೀಡಿದ ಆರೋಪದಲ್ಲಿ ಕರ್ತವ್ಯ ನಿರತ ಸಬ್ ಇನ್ಸ್ ಪೆಕ್ಟರ್ ಓರ್ವರನ್ನು ಎಸ್‌ಐಟಿ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.

- Advertisement -

ಈ ಪ್ರಕರಣದ ಸಂಬಂಧ ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್​ ಠಾಣೆಯ ಇನ್ಸ್​ಪೆಕ್ಟರ್​ ಅಯ್ಯಣ್ಣ ರೆಡ್ಡಿ ಅವರನ್ನು ಎಸ್‌ಐಟಿ ಗುರುವಾರ ಸಂಜೆ ಬಂಧಿಸಿದೆ. ಇನ್ಸ್ ಪೆಕ್ಟರ್ ಅಯ್ಯಣ್ಣ ರೆಡ್ಡಿ ಬಂಧನವನ್ನು ಎಸ್ಐಟಿ ಮೂಲಗಳು ಕೂಡ ಖಚಿತಪಡಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಹನಿಟ್ರ್ಯಾಪ್​ ಪ್ರಕರಣದಲ್ಲಿ ಸಹಕಾರ ನೀಡಿದ ಆರೋಪದ ಮೇಲೆ ಅಯ್ಯಣ್ಣ ರೆಡ್ಡಿಯವರನ್ನು ಬಂಧಿಸಲಾಗಿದೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಆ ಮೂಲಕ ಮುನಿರತ್ನ ಪ್ರಕರಣದಲ್ಲಿ ಮಹತ್ವದ ತಿರುವು ಪಡೆದಿದೆ.

1002358460

“ಆರೋಪಿಗಳು ನಡೆಸುತ್ತಿದ್ದ ಹನಿಟ್ರ್ಯಾಪ್‌ಗೆ ಇನ್‌ಸ್ಪೆಕ್ಟರ್ ನೆರವು ನೀಡಿದ್ದರು. ಅಲ್ಲದೇ, ಆರೋಪಿಗಳು ಕೆಲವು ರಾಜಕಾರಣಿಗಳಿಗೆ ಏಡ್ಸ್ ಚುಚ್ಚುಮದ್ದು ಪ್ರಯೋಗಿಸಲು ಸಂಚು ರೂಪಿಸಿದ್ದು ಗೊತ್ತಿದ್ದರೂ ಇನ್‌ಸ್ಪೆಕ್ಟರ್ ಮಾಹಿತಿ ಬಚ್ಚಿಟ್ಟಿದ್ದರೆಂಬ ಆರೋಪದ ಅಡಿ ಬಂಧಿಸಲಾಗಿದೆ’ ಎಂದು ತಿಳಿದು ಬಂದಿದೆ.

ಆರೋಪಿ ಸಬ್ ಇನ್ಸ್‌ಪೆಕ್ಟರ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಎಸ್‌ಐಟಿ ಅಧಿಕಾರಿಗಳು ಕಸ್ಟಡಿಗೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

ಏನಿದು ಪ್ರಕರಣ?
ಮಹಿಳೆಯೊಬ್ಬರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಶಾಸಕ ಮುನಿರತ್ನ ಅವರು ಜಾಮೀನಿನ ಮೇಲೆ ಹೊರಗೆ ಇದ್ದಾರೆ. ಪ್ರಕರಣ ಸಂಬಂಧ ಅಕ್ಟೋಬರ್​ 15ರಂದು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಜಾಮೀನು ನೀಡಿದೆ. ಕಗ್ಗಲೀಪರ ಪೊಲೀಸ್​ ಠಾಣೆಯಲ್ಲಿ ಸುಮಾರು 40 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಶಾಸಕರ ಮೇಲೆ ಎಫ್​ಐಆರ್ ದಾಖಲಾಗಿತ್ತು.

ರಾಮನಗರದ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮುನಿರತ್ನ ಅವರು ವಿರುದ್ಧ 40 ವರ್ಷದ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲು ಮಾಡಿದ್ದರು. ಅಲ್ಲದೇ, ಪ್ರಕರಣದಲ್ಲಿ 7 ಮಂದಿಯ ವಿರುದ್ಧ ಎಫ್​ಐಆರ್ ಆಗಿತ್ತು. ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಎಸ್​ಐಟಿಗೆ ವರ್ಗಾವಣೆ ಮಾಡಿದೆ. ಇದಕ್ಕೂ ಮುನ್ನ ಶಾಸಕ ಮುನಿರತ್ನ ವಿರುದ್ಧ ಜಾತಿನಿಂದನೆ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧ ಒಕ್ಕಲಿಗ ಹಾಗೂ ದಲಿತ ಸಂಘಟನೆಗಳು ರಾಜ್ಯದಾದ್ಯಂತ ಭಾರೀ ಪ್ರತಿಭಟನೆ ನಡೆಸಿದ್ದವು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...